Karnataka : ಮುಂದಿನ ಶೈಕ್ಷಣಿಕ ವರ್ಷದಿಂದ ಯೋಗದ ಜೊತೆಗೆ ಹೆಣ್ಣು ಮಕ್ಕಳಿಗೆ ಆತ್ಮರಕ್ಷಣೆಗಾಗಿ ಅಲ್ಪಾವಧಿ ಕೋರ್ಸ್ ಅನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ (short-term-course-start) ಚಿಂತನೆ ನಡೆಸುತ್ತಿದೆ ಎಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ವತಿಯಿಂದ ಆಯೋಜಿಸಿದ್ದ “ಓಬವ್ವ ಆತ್ಮರಕ್ಷಣಾ ಕರಾಟೆ ಪ್ರದರ್ಶನ”ವನ್ನು ವೀಕ್ಷಿಸಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು,
ಆತ್ಮರಕ್ಷಣೆಗಾಗಿ ಹುಡುಗಿಯರಿಗೆ ಅಲ್ಪಾವಧಿಯ ಕೋರ್ಸ್ ಗಳನ್ನು ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ (Educational institution) ಪ್ರಾರಂಭಿಸುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ.
ಮುಂದಿನ ಶೈಕ್ಷಣಿಕ ವರ್ಷದಿಂದ ಪಿಯುಸಿ ಹಂತದವರೆಗೆ ಯೋಗದ ಜೊತೆಗೆ ಆತ್ಮರಕ್ಷಣೆಯ(short-term-course-start) ತರಬೇತಿಯನ್ನು ನೀಡಲಾಗುವುದು. ಈ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಇನ್ಮು ಪ್ರತಿಯೊಬ್ಬ ನಾಗರಿಕನಿಗೂ ಆತ್ಮರಕ್ಷಣೆ ಅವಶ್ಯಕವಾಗಿದೆ.
ನಾನು ಈ ಹಿಂದೆ ಗೃಹ ಸಚಿವನಾಗಿ ಹೆಣ್ಣು ಮಕ್ಕಳಿಗೆ ಅವರ ಆತ್ಮರಕ್ಷಣೆಗಾಗಿ ಕರಾಟೆ ತರಬೇತಿ (Karate training) ಸೇರಿದಂತೆ ಹಲವು ನಿರ್ಧಾರಗಳನ್ನು ಕೈಗೊಂಡಿದ್ದೆ.
https://vijayatimes.com/auto-drivers-strike/
ಇತ್ತೀಚೆಗೆ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಈ ತರಬೇತಿ ನೀಡುತ್ತಿರುವುದು ಸಂತಸ ತಂದಿದೆ. ಸ್ವರಕ್ಷಣೆ ಕಲೆಯನ್ನು ಕಲಿತವರು ಇತರ ಹೆಣ್ಣು ಮಕ್ಕಳಿಗೂ ಕಲಿಸಬೇಕು ಎಂದು ಬೊಮ್ಮಾಯಿ ಹೇಳಿದರು.
ಆತ್ಮರಕ್ಷಣೆಯ ತರಬೇತಿ ಪಡೆಯುವುದು ಹೆಣ್ಣುಮಕ್ಕಳಿಗೆ ಮಾತ್ರವಲ್ಲದೆ ಸಮಾಜಕ್ಕೂ ಒಳ್ಳೆಯದು. 700 ಕೋಟಿ ವೆಚ್ಚದಲ್ಲಿ ನಿರ್ಭಯ ಯೋಜನೆಯ ಮೂಲಕ ವಿದ್ಯಾರ್ಥಿನಿಯರಿಗೆ ಭದ್ರತೆ ಒದಗಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇದನ್ನು ಎಲ್ಲ ನಗರಗಳಿಗೂ ವಿಸ್ತರಿಸಲಾಗುವುದು. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಈ ವೇಳೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti), ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojary), ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಮತ್ತಿತರರು ಉಪಸ್ಥಿತರಿದ್ದರು.
- ಮಹೇಶ್.ಪಿ.ಎಚ್