• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಇರಾನ್–ಇಸ್ರೇಲ್ ಯುದ್ಧದ ಪರಿಣಾಮ: ಹಲವೆಡೆ LPG ವ್ಯತ್ಯಯ, ಒತ್ತಡದಲ್ಲಿರುವ ಹೋಟೆಲ್ ಉದ್ಯಮ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಇರಾನ್–ಇಸ್ರೇಲ್ ಯುದ್ಧದ ಪರಿಣಾಮ: ಹಲವೆಡೆ LPG ವ್ಯತ್ಯಯ, ಒತ್ತಡದಲ್ಲಿರುವ ಹೋಟೆಲ್ ಉದ್ಯಮ
0
SHARES
18
VIEWS
Share on FacebookShare on Twitter
  • LPG ಸಿಲಿಂಡರ್ ವ್ಯತ್ಯಯ: ಹಲವೆಡೆ ಹೋಟೆಲ್ (shortage of cylinders Hotel owners worried) ಉದ್ಯಮಕ್ಕೆ ಯುದ್ಧದ ನೇರ ಪರಿಣಾಮ
  • ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಸಿಗದೆ ಹೋಟೆಲ್ ಮಾಲೀಕರು ಆತಂಕದಲ್ಲಿ
  • ಗ್ಯಾಸ್ ಪೂರೈಕೆ ವ್ಯತ್ಯಯದಿಂದ ಉದ್ಯಮಿಗಳು ಸರ್ಕಾರದ ತುರ್ತು ಕ್ರಮಕ್ಕೆ ಮನವಿ.

Bengaluru: ಅಂತರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಇರಾನ್ ಮತ್ತು ಇಸ್ರೇಲ್ ನಡುವಿನ (shortage of cylinders Hotel owners worried) ಯುದ್ಧದ ಪರಿಣಾಮ ಇದೀಗ ಭಾರತದ ಮೇಲೂ ಸ್ಪಷ್ಟವಾಗಿ ಕಾಣಿಸಿಕೊಳ್ಳತೊಡಗಿದೆ.

ವಿಶೇಷವಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಎಲ್‌ಪಿಜಿ (LPG) ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ.

ಬೆಂಗಳೂರು ನಗರದಲ್ಲಿ ಹಲವೆಡೆ ಹೋಟೆಲ್ ಗಳಲ್ಲಿ ಪೂರಿ, ಬಜ್ಜಿ, ಬೋಂಡಾ ಮೊದಲಾದ ಆಹಾರಗಳ ಮಾರಾಟ ನಿಲ್ಲಿಸಲಾಗಿದೆ.ಹಲವು ಪಿಜಿ ಗಳಲ್ಲಿ ಊಟ ನಿಲ್ಲಿಸಲಾಗಿದೆ.

shortage of cylinders Hotel owners worried

ಅಲ್ಲದೆ ರಾಮನಗರ, ಮೈಸೂರು, ಚಿಕ್ಕಬಳ್ಳಾಪುರ, ಧಾರವಾಡ, ಗದಗ ಸೇರಿದಂತೆ ಹಲವು ನಗರಗಳಲ್ಲಿ ಕಮರ್ಷಿಯಲ್ (Commercial) ಸಿಲಿಂಡರ್‌ಗಳ ಕೊರತೆ ಕಾಣಿಸಿಕೊಂಡಿದ್ದು, ಇದರಿಂದ ಹೋಟೆಲ್ ಮಾಲೀಕರು ದೊಡ್ಡ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಗ್ಯಾಸ್ ಜೊತೆಗೆ ಅಡುಗೆ ಎಣ್ಣೆಯ ಬೆಲೆ ಏರಿಕೆಯೂ ವ್ಯಾಪಾರಿಗಳಿಗೆ ಹೆಚ್ಚುವರಿ ಹೊರೆ ತಂದಿದೆ.

ರಾಮನಗರ ಜಿಲ್ಲೆಯಲ್ಲಿ ಈಗಾಗಲೇ ಕಮರ್ಷಿಯಲ್ ಎಲ್‌ಪಿಜಿ (LPG) ಸಿಲಿಂಡರ್ ಪೂರೈಕೆ ವಿಳಂಬವಾಗುತ್ತಿರುವುದು ಹೋಟೆಲ್ ಉದ್ಯಮದ ಮೇಲೆ ನೇರ ಪರಿಣಾಮ ಬೀರಿದೆ.

ಅನೇಕ ಹೋಟೆಲ್ ಮಾಲೀಕರು ಸಿಲಿಂಡರ್‌ಗಾಗಿ ಕಾಯುತ್ತಿರುವ ಪರಿಸ್ಥಿತಿ ಎದುರಾಗಿದೆ. ಸಮರ್ಪಕವಾಗಿ ಗ್ಯಾಸ್ (shortage of cylinders Hotel owners worried) ಪೂರೈಕೆ ಆಗದಿದ್ದರೆ ಮುಂದಿನ ಎರಡು ಅಥವಾ ಮೂರು ದಿನಗಳಲ್ಲಿ ಹೋಟೆಲ್‌ಗಳನ್ನು ತಾತ್ಕಾಲಿಕವಾಗಿ ಮುಚ್ಚಬೇಕಾದ ಪರಿಸ್ಥಿತಿ ಎದುರಾಗಬಹುದು ಎಂಬ ಆತಂಕ ವ್ಯಕ್ತವಾಗುತ್ತಿದೆ.

ಗ್ಯಾಸ್ ಕೊರತೆಯ ಜೊತೆಗೆ ಅಡುಗೆ ಎಣ್ಣೆಯ ಬೆಲೆಯೂ ಏರಿಕೆಯಾಗಿರುವುದರಿಂದ ವ್ಯಾಪಾರ ನಡೆಸುವುದು ಇನ್ನಷ್ಟು ಕಷ್ಟಕರವಾಗಿದೆ.

ಸಾಂಸ್ಕೃತಿಕ ರಾಜಧಾನಿ ಮೈಸೂರು ನಗರದಲ್ಲಿಯೂ ಇದೇ ರೀತಿಯ ಸಮಸ್ಯೆ ಕಾಣಿಸಿಕೊಂಡಿದೆ. ಬಹುತೇಕ ಹೋಟೆಲ್‌ಗಳಿಗೆ ಕಮರ್ಷಿಯಲ್ ಸಿಲಿಂಡರ್‌ಗಳು ಲಭ್ಯವಾಗದೇ ಇರುವ ಕಾರಣದಿಂದ ಅನೇಕರು ಅರ್ಧಕ್ಕೆ ವ್ಯಾಪಾರ ನಿಲ್ಲಿಸುವ ಸ್ಥಿತಿ ಎದುರಿಸುತ್ತಿದ್ದಾರೆ.

ಇನ್ನೂ ಒಂದು ವಾರ ಇದೇ ಪರಿಸ್ಥಿತಿ ಮುಂದುವರಿದರೆ ಮೈಸೂರಿನ ಸುಮಾರು 70 ಶೇಕಡಾ ಹೋಟೆಲ್‌ಗಳು ತಾತ್ಕಾಲಿಕವಾಗಿ ಮುಚ್ಚುವ ಸಾಧ್ಯತೆ ಇದೆ ಎಂದು ಹೋಟೆಲ್ ಮಾಲೀಕರು ಆತಂಕ ವ್ಯಕ್ತಪಡಿಸಿದ್ದಾರೆ. ಇದರಿಂದ ಸಾವಿರಾರು ಕಾರ್ಮಿಕರ ಉದ್ಯೋಗಕ್ಕೂ ಧಕ್ಕೆಯಾಗುವ ಸಾಧ್ಯತೆ ಇದೆ.

ಚಿಕ್ಕಬಳ್ಳಾಪುರದಲ್ಲಿಯೂ ಕಮರ್ಷಿಯಲ್ ಬಳಕೆಯ ಎಲ್‌ಪಿಜಿ ಸಿಲಿಂಡರ್ ಪೂರೈಕೆ ಸಂಪೂರ್ಣವಾಗಿ ಸ್ಥಗಿತಗೊಂಡಿದೆ ಎಂಬ ವರದಿಗಳು ಕೇಳಿಬರುತ್ತಿವೆ. ಸಾಮಾನ್ಯವಾಗಿ ಬೆಂಗಳೂರಿನಿಂದ ಈ ಪ್ರದೇಶಕ್ಕೆ ಸಿಲಿಂಡರ್ ಪೂರೈಕೆ ಆಗುತ್ತಿತ್ತು.

ಆದರೆ ಪ್ರಸ್ತುತ ಸ್ಟಾಕ್ ಇಲ್ಲ ಎಂದು ಡಿಸ್ಟ್ರಿಬ್ಯೂಟರ್‌ಗಳು ತಿಳಿಸುತ್ತಿರುವುದರಿಂದ ಹೋಟೆಲ್ ಮಾಲೀಕರು ಉಳಿದಿರುವ ಸಿಲಿಂಡರ್‌ಗಳನ್ನು ಅತೀ ಕಡಿಮೆ ಪ್ರಮಾಣದಲ್ಲಿ ಬಳಸುವ ಪರಿಸ್ಥಿತಿ ಎದುರಾಗಿದೆ. ಮುಂದಿನ ದಿನಗಳಲ್ಲಿ ಪೂರೈಕೆ ಆಗದಿದ್ದರೆ ಅನೇಕ ಹೋಟೆಲ್‌ಗಳು ಬಂದ್ ಆಗುವ ಸಾಧ್ಯತೆ ಹೆಚ್ಚಾಗಿದೆ.

ಹುಬ್ಬಳ್ಳಿ–ಧಾರವಾಡ ಹಾಗೂ ಗದಗ ಜಿಲ್ಲೆಗಳಲ್ಲಿಯೂ ಇದೇ ರೀತಿಯ ಸಮಸ್ಯೆ ಕಾಣಿಸಿಕೊಂಡಿದೆ. ಹೋಟೆಲ್ ಮಾಲೀಕರ ಸಂಘದ ಪ್ರತಿನಿಧಿಗಳು ಮಾತನಾಡಿ, ಎರಡು ಸಿಲಿಂಡರ್ ಕೇಳಿದರೆ ಕೇವಲ ಒಂದನ್ನೇ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಕೆಲವು ಕಂಪನಿಗಳು ಸಿಲಿಂಡರ್ ಪೂರೈಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದರಿಂದ ವ್ಯಾಪಾರ ನಡೆಸುವುದು ಕಷ್ಟವಾಗಿದೆ. ಹೋಟೆಲ್ ಉದ್ಯಮ ಸಂಪೂರ್ಣವಾಗಿ ಗ್ಯಾಸ್ ಸಿಲಿಂಡರ್ ಮೇಲೆ ಅವಲಂಬಿತವಾಗಿರುವುದರಿಂದ ಈ ಸಮಸ್ಯೆ ಮುಂದುವರಿದರೆ ಅನೇಕ ಹೋಟೆಲ್‌ಗಳು ಮುಚ್ಚುವ ಪರಿಸ್ಥಿತಿ ಎದುರಾಗಬಹುದು.

ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಕ್ಷಣವೇ ಕ್ರಮ ಕೈಗೊಂಡು ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್ ಪೂರೈಕೆಯನ್ನು ಸರಾಗವಾಗಿ ಮಾಡಬೇಕು ಎಂದು ಹೋಟೆಲ್ ಮಾಲೀಕರು ಒತ್ತಾಯಿಸಿದ್ದಾರೆ.

Tags: bengalurugaslpg cylindershortage cylinder

Related News

ಬೆಂಗಳೂರಿಗೆ ದಕ್ಷಿಣ ಆಫ್ರಿಕಾದಿಂದ ನಾಲ್ಕು ಚೀತಾಗಳ ಆಗಮನ: ಬನ್ನೇರುಘಟ್ಟ ಮೃಗಾಲಯಕ್ಕೆ ಹೊಸ ಕಳೆ
ಪ್ರಮುಖ ಸುದ್ದಿ

ಬೆಂಗಳೂರಿಗೆ ದಕ್ಷಿಣ ಆಫ್ರಿಕಾದಿಂದ ನಾಲ್ಕು ಚೀತಾಗಳ ಆಗಮನ: ಬನ್ನೇರುಘಟ್ಟ ಮೃಗಾಲಯಕ್ಕೆ ಹೊಸ ಕಳೆ

April 18, 2026
ಸಾರ್ವಜನಿಕ ಭವಿಷ್ಯ ನಿಧಿ ಯೋಜನೆಯಿಂದ ಸುರಕ್ಷಿತ ಉಳಿತಾಯ : ಮಧ್ಯಮ ವರ್ಗದವರಿಗೆ ಹೇಳಿ ಮಾಡಿಸಿದ ಯೋಜನೆ
ಪ್ರಮುಖ ಸುದ್ದಿ

ಸಾರ್ವಜನಿಕ ಭವಿಷ್ಯ ನಿಧಿ ಯೋಜನೆಯಿಂದ ಸುರಕ್ಷಿತ ಉಳಿತಾಯ : ಮಧ್ಯಮ ವರ್ಗದವರಿಗೆ ಹೇಳಿ ಮಾಡಿಸಿದ ಯೋಜನೆ

April 18, 2026
ಹೈಕೋರ್ಟ್ ಸೂಚನೆ ಬೆನ್ನಲ್ಲೇ ರಾಜ್ಯದಲ್ಲಿ ವೇತನಸಹಿತ ಋತುಸ್ರಾವ ರಜೆ ಜಾರಿಗೆ ಸರ್ಕಾರ ಸಜ್ಜು
ಪ್ರಮುಖ ಸುದ್ದಿ

ಹೈಕೋರ್ಟ್ ಸೂಚನೆ ಬೆನ್ನಲ್ಲೇ ರಾಜ್ಯದಲ್ಲಿ ವೇತನಸಹಿತ ಋತುಸ್ರಾವ ರಜೆ ಜಾರಿಗೆ ಸರ್ಕಾರ ಸಜ್ಜು

April 18, 2026
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು: NDAಗೆ ನಿರಾಸೆ
ದೇಶ-ವಿದೇಶ

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು: NDAಗೆ ನಿರಾಸೆ

April 18, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.