• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸರ್ಕಾರಿ ದರಕ್ಕಿಂತ ಹೆಚ್ಚು ಶುಲ್ಕ ವಸೂಲಿ ಆರೋಪ: ಓಲಾ, ಊಬರ್‌, ರ‍್ಯಾಪಿಡೋಗೆ ಶೋಕಾಸ್ ನೋಟಿಸ್

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಸರ್ಕಾರಿ ದರಕ್ಕಿಂತ ಹೆಚ್ಚು ಶುಲ್ಕ ವಸೂಲಿ ಆರೋಪ: ಓಲಾ, ಊಬರ್‌, ರ‍್ಯಾಪಿಡೋಗೆ ಶೋಕಾಸ್ ನೋಟಿಸ್
0
SHARES
6
VIEWS
Share on FacebookShare on Twitter

ಓಲಾ-ಊಬರ್‌ಗೆ ಸಾರಿಗೆ (Showcause notices Ola Uber Rapido) ಇಲಾಖೆಯಿಂದ ನೋಟಿಸ್

ನಿಗದಿತ ದರ ಉಲ್ಲಂಘನೆ ಆರೋಪದಡಿ ಓಲಾ, ಊಬರ್‌, ರ‍್ಯಾಪಿಡೋ, ನಮ್ಮ ಯಾತ್ರಿಗೆ ನೋಟಿಸ್

ಸರ್ಕಾರಿ ದರ ಪಾಲಿಸದ ಆರೋಪ; ಏಳು ದಿನದೊಳಗೆ ಲಿಖಿತ ವಿವರಣೆ ನೀಡಲು ಸೂಚನೆ

Bengaluru : ಸರ್ಕಾರ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚಿನ ಶುಲ್ಕವನ್ನು ಪ್ರಯಾಣಿಕರಿಂದ (Showcause notices Ola Uber Rapido) ವಸೂಲಿ ಮಾಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಸಾರಿಗೆ ಇಲಾಖೆ ಪ್ರಮುಖ ರೈಡ್‌ ಹೈಲಿಂಗ್‌ ಅಗ್ರಿಗೇಟರ್‌ಗಳಾದ ಓಲಾ, ಊಬರ್‌, ರ‍್ಯಾಪಿಡೋ ಮತ್ತು ನಮ್ಮ ಯಾತ್ರಿ ಆ್ಯಪ್‌ಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಪ್ರಯಾಣಿಕರಿಂದ ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವ ಬಗ್ಗೆ ಚಾಲಕರ ಸಂಘಟನೆಗಳು ಹಾಗೂ ಟ್ಯಾಕ್ಸಿ ಮಾಲೀಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಈ ಕ್ರಮ ಕೈಗೊಂಡಿದೆ.

Showcause notices  Ola Uber Rapido

ನಿಗದಿತ ಸರ್ಕಾರಿ ದರದ ನಿಯಮಗಳನ್ನು ಪಾಲಿಸದೇ, ಪ್ರಯಾಣದ ಅವಧಿ ಸೇರಿದಂತೆ (Showcause notices Ola Uber Rapido) ವಿವಿಧ ಅಂಶಗಳ ಆಧಾರದ ಮೇಲೆ ದರ ನಿಗದಿಪಡಿಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.

ಸರ್ಕಾರ 2024ರ ಫೆಬ್ರವರಿ 3ರಂದು ಅಧಿಸೂಚನೆ ಹೊರಡಿಸಿ ಅಗ್ರಿಗೇಟರ್‌ಗಳ ಮೂಲಕ ನಡೆಯುವ ಟ್ಯಾಕ್ಸಿ (Taxi) ಸೇವೆಗಳಿಗೆ ದರ ನಿಗದಿ ಮಾಡಿತ್ತು.

ಆದರೆ ಕೆಲವು ರೈಡ್‌ ಹೈಲಿಂಗ್‌ (Ride-hailing) ಕಂಪನಿಗಳು ಈ ದರ ವ್ಯವಸ್ಥೆಯನ್ನು ಸಮರ್ಪಕವಾಗಿ ಅನುಸರಿಸುತ್ತಿಲ್ಲ ಎಂದು ವಾಹನ ಚಾಲಕರ ಸಂಘಟನೆಗಳು ಆರೋಪಿಸಿವೆ.

ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಮೊತ್ತವನ್ನು ಪ್ರಯಾಣಿಕರಿಂದ ವಸೂಲಿ ಮಾಡಲಾಗುತ್ತಿದೆ ಎಂಬುದು ಪ್ರಮುಖ ಆರೋಪವಾಗಿದೆ. ಅದರಲ್ಲೂ ಪ್ರಯಾಣದ ಸಮಯ,

ಬೇಡಿಕೆ ಮತ್ತು ಇತರ ಅಂಶಗಳನ್ನು ಆಧರಿಸಿ ದರ ಬದಲಾಗುತ್ತಿರುವುದರಿಂದ ಪ್ರಯಾಣಿಕರಿಗೆ ಹೆಚ್ಚುವರಿ ಆರ್ಥಿಕ ಹೊರೆಯಾಗುತ್ತಿದೆ ಎಂದು ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಆಗಸ್ಟ್‌ 4ರಂದು ಸಾರಿಗೆ ಇಲಾಖೆ ಹಾಗೂ ವಾಹನ ಚಾಲಕರ ಸಂಘಟನೆಗಳ ನಡುವೆ ಸಭೆ ನಡೆದಿತ್ತು. ಸಭೆಯಲ್ಲಿ ಅಗ್ರಿಗೇಟರ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಚಾಲಕರ ಸಂಘಟನೆಗಳು ಒತ್ತಾಯಿಸಿದ್ದವು.

ಸರ್ಕಾರದ ಅಧಿಸೂಚನೆಯಲ್ಲಿ ನಿಗದಿಪಡಿಸಿರುವ ದರವನ್ನೇ ಪ್ರಯಾಣಿಕರಿಂದ ವಸೂಲಿ ಮಾಡುವಂತೆ ಕಂಪನಿಗಳಿಗೆ ಸ್ಪಷ್ಟ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಲಾಗಿತ್ತು.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟ್ಯಾಕ್ಸಿ ಮಾಲೀಕರು ಮತ್ತು ಚಾಲಕರ (Showcause notices Ola Uber Rapido) ಕಲ್ಯಾಣ ಸಂಘವೂ ಓಲಾ, ಊಬರ್‌ ಸೇರಿದಂತೆ ಇತರ ಅಗ್ರಿಗೇಟರ್‌ಗಳು ನಿಗದಿತ ದರ ವ್ಯವಸ್ಥೆಯನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಿ ಕ್ರಮಕ್ಕೆ ಆಗ್ರಹಿಸಿತ್ತು.

ಕರ್ನಾಟಕ ಡ್ರೈವರ್ಸ್‌ ಫೆಡರೇಷನ್‌ ರಾಜ್ಯಾಧ್ಯಕ್ಷ ನಾರಾಯಣಸ್ವಾಮಿ ಅವರು ಕೂಡ ಈ ಕುರಿತು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಓಲಾ, ಊಬರ್‌, ರ‍್ಯಾಪಿಡೋ ಸೇರಿದಂತೆ

ಹಲವು ಅಗ್ರಿಗೇಟರ್‌ಗಳು ಸರ್ಕಾರ ನಿಗದಿಪಡಿಸಿರುವ ದರದಂತೆ ಚಾಲಕರಿಗೆ ಆದಾಯ ದೊರೆಯುವುದನ್ನು ಖಚಿತಪಡಿಸುತ್ತಿಲ್ಲ ಎಂಬ ಆರೋಪವನ್ನು ಸಂಘಟನೆ ಮಾಡಿದೆ.

ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಜಾರಿ ಮಾಡಿರುವ ನೋಟಿಸ್‌ನಲ್ಲಿ ಸರ್ಕಾರ ನಿಗದಿಪಡಿಸಿರುವ ದರಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಜತೆಗೆ ಕರ್ನಾಟಕ ಆನ್‌-ಡಿಮ್ಯಾಂಡ್‌ ಟ್ರಾನ್ಸ್‌ಪೋರ್ಟೇಶನ್‌ ಟೆಕ್ನಾಲಜಿ ಅಗ್ರಿಗೇಟರ್‌ (Karnataka On-Demand Transportation Technology Aggregator) ನಿಯಮಗಳು, 2016ರ ನಿಯಮ 9ರ ನಿಬಂಧನೆಗಳನ್ನು ಪಾಲಿಸುವಂತೆ ಕಂಪನಿಗಳಿಗೆ ನಿರ್ದೇಶನ ನೀಡಲಾಗಿದೆ.

ನೋಟಿಸ್‌ ಸ್ವೀಕರಿಸಿದ ದಿನದಿಂದ ಏಳು ದಿನಗಳೊಳಗೆ ಲಿಖಿತ ರೂಪದಲ್ಲಿ ತಮ್ಮ ವಿವರಣೆಯನ್ನು ಸಲ್ಲಿಸುವಂತೆ ಸಾರಿಗೆ ಇಲಾಖೆ ನಾಲ್ಕೂ ಅಗ್ರಿಗೇಟರ್‌ಗಳಿಗೆ ಸೂಚಿಸಿದೆ.

ನಿಗದಿತ ಅವಧಿಯೊಳಗೆ ಕಂಪನಿಗಳು ಪ್ರತಿಕ್ರಿಯೆ ನೀಡದಿದ್ದರೆ, ಯಾವುದೇ ವಿವರಣೆ ನೀಡದಿರುವುದಾಗಿ ಪರಿಗಣಿಸಿ ನಿಯಮಾನುಸಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.

2016ರ ನಿಯಮಗಳ ನಿಯಮ 11ರ ಅಡಿಯಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆಯೂ ಇದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ರೈಡ್‌ ಹೈಲಿಂಗ್‌ ಸೇವೆಗಳ ದರ ವ್ಯವಸ್ಥೆ ಮತ್ತೊಮ್ಮೆ ಚರ್ಚೆಗೆ ಬಂದಿದೆ.

ಸಾರಿಗೆ ಇಲಾಖೆಯ ಕ್ರಮದಿಂದ ಪ್ರಯಾಣಿಕರಿಗೆ ಸರ್ಕಾರ ನಿಗದಿಪಡಿಸಿರುವ ದರದಲ್ಲೇ ಸೇವೆ ದೊರೆಯಲಿದೆಯೇ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ.

ಇದನ್ನು ಓದಿ : https://vijayatimes.com/monsoon-session-begins-today/

Tags: bengaluruNoticeOlarapidoUber

Related News

ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಗೆ ಕುಮಾರಸ್ವಾಮಿ ಪಟ್ಟು: ಪೊಲೀಸ್ ಆಯುಕ್ತರ ಕಚೇರಿ ಮೆಟ್ಟಿಲ ಮೇಲೆ ಧರಣಿ
ರಾಜಕೀಯ

ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಗೆ ಕುಮಾರಸ್ವಾಮಿ ಪಟ್ಟು: ಪೊಲೀಸ್ ಆಯುಕ್ತರ ಕಚೇರಿ ಮೆಟ್ಟಿಲ ಮೇಲೆ ಧರಣಿ

October 15, 2026
ಕರ್ನಾಟಕದಲ್ಲಿ ಶೇ. 32ರಷ್ಟು ಮಳೆ ಕೊರತೆ: 1918ರ ಬಳಿಕ ಈ ಸಲ ತೀವ್ರ ಮಳೆ ಅಭಾವ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಶೇ. 32ರಷ್ಟು ಮಳೆ ಕೊರತೆ: 1918ರ ಬಳಿಕ ಈ ಸಲ ತೀವ್ರ ಮಳೆ ಅಭಾವ

October 15, 2026
ಗ್ರಾಮ ಪಂಚಾಯಿತಿಗಳ ಆರ್ಥಿಕ ಬಲವರ್ಧನೆಗೆ ಮುಂದಾದ ಸರ್ಕಾರ : ಸಿಎಂ ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಪ್ರಮುಖ ಸುದ್ದಿ

ಗ್ರಾಮ ಪಂಚಾಯಿತಿಗಳ ಆರ್ಥಿಕ ಬಲವರ್ಧನೆಗೆ ಮುಂದಾದ ಸರ್ಕಾರ : ಸಿಎಂ ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

October 15, 2026
ಸಿದ್ದರಾಮಯ್ಯ ನಕಲಿ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಇಬ್ಬರು ಶಂಕಿತರು ಪೊಲೀಸ್ ವಶಕ್ಕೆ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ನಕಲಿ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಇಬ್ಬರು ಶಂಕಿತರು ಪೊಲೀಸ್ ವಶಕ್ಕೆ

October 14, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.