ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶುಭಾ ಪೂಂಜಾ

ಉಡುಪಿ ಜ 5 : ‘ಮೊಗ್ಗಿನ ಮನಸ್ಸು’  ಖ್ಯಾತಿಯ ಸ್ಯಾಂಡಲ್‌ವುಡ್ ನಟಿ, ಬೆಡಗಿ ಶುಭಾ ಪೂಂಜ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತಾನು ಪ್ರೀತಿಸುತ್ತಿದ್ದ ಸುಮಂತ್ ಮಹಾಬಲ ಅವರ ಜೊತೆ ಶುಭಾ ಸರಳವಾಗಿ ಮದುವೆ ಆಗಿದ್ದು, ವಿವಾಹದ ಪೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ

ಮದುವೆಯ ಫೋಟೋವೊಂದನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಶುಭಾ, “ಇಂದು ನಾನು ಮತ್ತು ಸುಮಂತ್ ಮಹಾಬಲ ಇಬ್ಬರೂ ಗುರು-ಹಿರಿಯರು ಮತ್ತು ಆತ್ಮೀಯ ಸ್ನೇಹಿತರ ಸಮ್ಮುಖದಲ್ಲಿ ನಮ್ಮ ಊರು ಮಜಲಬೆಟ್ಟುಬಿಡುವಿನಲ್ಲಿ ಸರಳ ವಿವಾಹ ಮಾಡಿಕೊಂಡೆವು. ನಿಮ್ಮೆಲ್ಲರ ಪ್ರೀತಿ ಮತ್ತು ಹಾರೈಕೆ ನಮ್ಮ ಮೇಲಿರಲಿ’ ಎಂದು ಬರೆದುಕೊಂಡಿದ್ದಾರೆ.

Exit mobile version