• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಸಿಎಂ ಬೊಮ್ಮಾಯಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯರಿಂದ 13 ಪ್ರಶ್ನೆಗಳ ಸವಾಲು!

Mohan Shetty by Mohan Shetty
in ರಾಜಕೀಯ, ರಾಜ್ಯ
Bommai
0
SHARES
0
VIEWS
Share on FacebookShare on Twitter

ಮುಖ್ಯಮಂತ್ರಿ ಬೊಮ್ಮಾಯಿ(Basavaraj Bommai) ಅವರೇ, ಏಕೆ ತ್ರಿವರ್ಣ ಧ್ವಜ?(National Flag) ಎಂಬ ನಿಮ್ಮ ವಿವರಣೆ ಓದಿ ಸಂತೋಷವಾಯಿತು.

ರಾಷ್ಟ್ರಧ್ವಜವನ್ನು ಒಪ್ಪಿಕೊಂಡಿದ್ದಕ್ಕಾಗಿ ರಾಜ್ಯದ ಜನರ ಪರವಾಗಿ ನಿಮಗೆ ಧನ್ಯವಾದಗಳು.

ಇದರ ಜೊತೆಗೆ ಜನರ ಪರವಾಗಿ ನಾನು ಕೇಳುವ ಹದಿಮೂರು ಪ್ರಶ್ನೆಗಳಿಗೆ ತಾಳ್ಮೆಯಿಂದ ಉತ್ತರಿಸುವಿರೆಂದು ನಂಬಿದ್ದೇನೆ.

BJP
  • ಪ್ರಧಾನಿ ಮೋದಿ ಅವರು ನೀಡಿರುವ ಕರೆಯನ್ನು ಪಾಲಿಸುವ ಏಕೈಕ ಕಾರಣಕ್ಕಾಗಿ ಸಾಮಾನ್ಯ ಜನರಿಂದ ಬಲಾತ್ಕಾರವಾಗಿ ದುಡ್ಡು ಕಿತ್ತುಕೊಂಡು ರಾಷ್ಟ್ರಧ್ವಜವನ್ನು ಮಾರಾಟ ಮಾಡುತ್ತಿರುವ ನೀವು, ಈ ಮೂಲಕ ರಾಷ್ಟ್ರಧ್ವಜದ ಮೇಲಿನ ಗೌರವಕ್ಕೆ ಕುಂದು ತರುತ್ತಿದ್ದೇವೆ ಎಂದು ನಿಮಗೆ ಅನಿಸುವುದಿಲ್ಲವೇ?
  • ಧ್ವಜ ಸಂಹಿತೆಗೆ ತಿದ್ದುಪಡಿ ತಂದು ಪಾಲಿಸ್ಟರ್(Polyster) ಬಟ್ಟೆ ಬಳಕೆಗೂ ಅವಕಾಶ ನೀಡಿರುವುದರಿಂದ ಗರಗ ಖಾದಿ ಗ್ರಾಮದ್ಯೋಗ ಕೇಂದ್ರದ ನೂರಾರು ಕಾರ್ಮಿಕರು ಮುಷ್ಕರದಲ್ಲಿ ತೊಡಗಿರುವುದು ನಿಮ್ಮ ಗಮನಕ್ಕೆ ಬಂದಿದೆಯೇ?
  • ಪಾಲಿಸ್ಟರ್ ಬಟ್ಟೆಯಿಂದ ರಾಷ್ಟ್ರಧ್ವಜ ತಯಾರಿಕೆಗೆ ಅವಕಾಶ ನೀಡುವಾಗ ಇಡೀ ದೇಶಕ್ಕೆ ರಾಷ್ಟ್ರಧ್ವಜ ತಯಾರಿಸಿಕೊಡುತ್ತಿದ್ದ ಹುಬ್ಬಳ್ಳಿಯ ಬೆಂಗೇರಿ ಮತ್ತು ಧಾರವಾಡದ ಗರಗ ಖಾದಿ ಕೇಂದ್ರಗಳಿಗೆ ಆಗುವ ಅನ್ಯಾಯವನ್ನು ನೀವು ಪ್ರಧಾನ ಮಂತ್ರಿಗಳ ಗಮನಕ್ಕೆ ತರಲಿಲ್ಲವೇ?
BJP
  • ಪಾಲಿಸ್ಟರ್ ಬಟ್ಟೆ ಬಳಸಲು ಅವಕಾಶ ನೀಡಿರುವುದು ರಾಷ್ಟ್ರಧ್ವಜವನ್ನು ಜನಪ್ರಿಯಗೊಳಿಸಲಿಕ್ಕಾಗಿಯೇ? ಇಲ್ಲವೇ ನಿಮ್ಮ ಪಕ್ಷದ ಪೋಷಕರಾದ ಉದ್ಯಮಿಗಳಿಗೆ ಪ್ರೋತ್ಸಾಹ ನೀಡಲಿಕ್ಕಾಗಿಯೇ?
  • ಮೇಕ್ ಇನ್ ಇಂಡಿಯಾದ(Make In India) ಪ್ರಚಾರ ಮಾಡುವ ಕೇಂದ್ರ ಸರ್ಕಾರ ಧ್ವಜಸಂಹಿತೆಗೆ ತಿದ್ದುಪಡಿ ಮಾಡಿ ಪಾಲಿಸ್ಟರ್ ಬಟ್ಟೆ ಬಳಸಲು ಅವಕಾಶ ನೀಡಿರುವುದರಿಂದ ಚೀನಾದಂತಹ ದೇಶಗಳಿಂದ ಕಡಿಮೆ ಬೆಲೆಯ ರಾಷ್ಟ್ರಧ್ವಜಗಳು ಬಂದು ರಾಶಿ ಬೀಳುತ್ತಿರುವುದನ್ನು ಹೇಗೆ ಸಮರ್ಥಿಸಿಕೊಳ್ಳುತ್ತೀರಿ?
  • ಕಳೆದ 75 ವರ್ಷಗಳಿಂದ ಚಾಲ್ತಿಯಲ್ಲಿದ್ದ ಧ್ವಜ ಸಂಹಿತೆಗೆ ತಿದ್ದುಪಡಿ ಮಾಡಿ ಹತ್ತಿ ಮತ್ತು ರೇಷ್ಮೆ ಬಟ್ಟೆಯ ಬದಲಿಗೆ ಪಾಲಿಸ್ಟರ್ ಬಟ್ಟೆಯಲ್ಲಿಯೂ ರಾಷ್ಟ್ರಧ್ವಜ ತಯಾರಿಸಲು ಅನುಮತಿ ನೀಡಿರುವುದು ರಾಷ್ಟ್ರಧ್ವಜಕ್ಕೆ ಮಾಡಿದ ಅವಮಾನ ಎಂದು ನಿಮಗೆ ಅನಿಸುವುದಿಲ್ಲವೇ?
https://fb.watch/eRZJFXrfYa/
  • ಸ್ವಾತಂತ್ರ್ಯದ ಅಮೃತ ಮಹೋತ್ಸವದ ನೆನಪಿಗಾಗಿ ದೇಶದ ಜನ ತಮ್ಮ ಟ್ವೀಟರ್ ಡಿಪಿಯಲ್ಲಿ ರಾಷ್ಟ್ರಧ್ವಜವನ್ನ ಹಾಕಬೇಕೆಂದು ತಿಳಿಸಿದರೂ ಆರ್ ಎಸ್ ಎಸ್(RSS) ಸರಸಂಘ ಚಾಲಕ ಮೋಹನ್‌ ಭಾಗವತ್‌(Mohan Bhagwat) ಅವರು ಮಾತ್ರ ಪ್ರಧಾನಿ ಮೋದಿ ಕರೆಯನ್ನು ಪಾಲಿಸದೆ ಇರಲು ಕಾರಣವೇನು?
  • ರಾಷ್ಟ್ರಧ್ವಜದ ಬಗೆಗಿನ ನಿಲುವನ್ನು ಆರ್ ಎಸ್ ಎಸ್ ಬದಲಾಯಿಸಿಕೊಂಡು ‘ಹರ್ ಘರ್ ಮೇ ತಿರಂಗಾ’ ಕಾರ್ಯಕ್ರಮವನ್ನು ಬೆಂಬಲಿಸುತ್ತದೆ ಎಂದು ನಿಮಗನಿಸುತ್ತಿದೆಯೇ? ಬದಲಾಯಿಸಿಕೊಂಡಿದ್ದರೆ ಅದಕ್ಕೆ ಕಾರಣಗಳೇನು ಎಂದು ತಿಳಿಸುವಿರಾ?
  • ರಾಷ್ಟ್ರಧ್ವಜವನ್ನು ಭಾರತೀಯರು ಒಪ್ಪಲಾರರು, ಮೂರು ಎನ್ನುವುದೇ ಅಪಶಕುನ. ತ್ರಿವರ್ಣಧ್ವಜ ಖಂಡಿತ ದೇಶದ ಮೇಲೆ ಮಾನಸಿಕವಾಗಿ ದುಷ್ಪರಿಣಾಮವನ್ನು ಬೀರಲಿರುವುದು ಮಾತ್ರವಲ್ಲ ಹಾನಿಕಾರಿಯಾಗಬಹುದು” ಎಂದು 1947 ರಲ್ಲಿಯೇ ಆರ್.ಎಸ್.ಎಸ್ ಮುಖವಾಣಿ ಆರ್ಗನೈಸರ್ ಪ್ರಕಟಿಸಿದ್ದ ಲೇಖನವನ್ನು ನೀವು ಒಪ್ಪುವಿರಾ?
Congress
  • ತ್ರಿವರ್ಣ ಧ್ವಜ ಎನ್ನುವುದು ಫ್ರೆಂಚ್ ಕ್ರಾಂತಿಯ ಘೋಷಣೆಗಳಾದ ಸ್ವಾತಂತ್ರ್ಯ, ಸಮಾನತೆ, ಮತ್ತು ಭಾತೃತ್ವದ ಬಗೆಗಿನ ಇಲ್ಲಿನ ಸ್ವಾತಂತ್ರ್ಯ ಹೋರಾಟಗಾರರ ಗೀಳಿನಿಂದ ಹುಟ್ಟು ಪಡೆದಿರುವುದು” ಎಂದು ಗೋಲ್ವಾಲ್ಕರ್ ಹೇಳಿರುವುದನ್ನು ಈಗಲೂ ನೀವು ಒಪ್ಪುವಿರಾ?
  • ತ್ರಿವರ್ಣ ಧ್ವಜ ರಾಷ್ಟ್ರೀಯ ಮುನ್ನೋಟ, ಸತ್ಯ, ಇತಿಹಾಸ ಇಲ್ಲವೇ ಪರಂಪರೆಯಿಂದ ಪ್ರೇರಣೆ ಪಡೆದು ತಯಾರಿಸಿದ್ದಲ್ಲ, ಇದು ಫ್ರೆಂಚ್ ಕ್ರಾಂತಿಯ ಘೋಷಣೆಗಳ ಎರವಲು” ಎಂದು ಆರ್.ಎಸ್.ಎಸ್ ಸರಸಂಘಚಾಲಕ ಗೋಲ್ವಾಲ್ಕರ್ ತಮ್ಮ ‘ಬಂಚ್ ಆಫ್ ಥಾಟ್ಸ್’ ನಲ್ಲಿ ಹೇಳಿರುವುದನ್ನು ನೀವು ಧಿಕ್ಕರಿಸುತ್ತೀರಾ?
  • ದೇಶಕ್ಕೆ ತ್ರಿವರ್ಣ ಧ್ವಜ ಅಲ್ಲ ಭಗವಾಧ್ವಯಜವೇ ಇರಬೇಕು ಎಂದು ಪ್ರತಿಪಾದಿಸುತ್ತಿದ್ದ ಆರ್.ಎಸ್.ಎಸ್ ಸರಸಂಘಚಾಲಕರಾದ ಕೆ.ಬಿ.ಹೆಡಗೆವಾರ್, ಎಂ.ಎಸ್ ಗೋಲ್ವಾಲ್ಕರ್ ಅವರ ನಿಲುವಿನ ಬಗ್ಗೆ ನಿಮ್ಮ ಮತ್ತು ನಿಮ್ಮ ಪಕ್ಷದ ಈಗಿನ ಅಭಿಪ್ರಾಯವೇನು?
ಇದನ್ನೂ ಓದಿ : https://vijayatimes.com/state-bjp-tweet-war-against-siddaramaiah/
ಸ್ವತಂತ್ರ ಭಾರತದಲ್ಲಿ 52 ವರ್ಷಗಳವರೆಗೆ ದೇಶ ಹೆಮ್ಮೆ ಪಡುವ ರಾಷ್ಟ್ರಧ್ವಜವನ್ನು ಆರ್.ಎಸ್.ಎಸ್ ಕಚೇರಿ ಮೇಲೆ ಹಾರಿಸದೆ ಇರಲು ಕಾರಣವೇನು? 2001 ರಲ್ಲಿ ದೇಶಭಕ್ತ ಯುವಕರು ರಾಷ್ಟ್ರಧ್ವಜ ಹಾರಿಸಲು ಬಂದಾಗ ಅವರನ್ನು ಹಿಡಿದು ಪೊಲೀಸರಿಗೆ ಕೊಟ್ಟಿರುವುದು ಏಕೆ?
Tags: bjpCongressKarnatakapoliticalpolitics

Related News

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ
ದೇಶ-ವಿದೇಶ

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ

September 26, 2023
ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ದೇಶ-ವಿದೇಶ

ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

September 26, 2023
ಕರ್ನಾಟಕಕ್ಕೆ ಮತ್ತೆ ಹಿನ್ನಡೆ : ಕಾವೇರಿ ನೀರನ್ನು ತಮಿಳುನಾಡಿಗೆ ಪುನಃ 18 ದಿನಗಳ ಕಾಲ ಬಿಡುವಂತೆ CWRC ಆದೇಶ
ದೇಶ-ವಿದೇಶ

ಕರ್ನಾಟಕಕ್ಕೆ ಮತ್ತೆ ಹಿನ್ನಡೆ : ಕಾವೇರಿ ನೀರನ್ನು ತಮಿಳುನಾಡಿಗೆ ಪುನಃ 18 ದಿನಗಳ ಕಾಲ ಬಿಡುವಂತೆ CWRC ಆದೇಶ

September 26, 2023
ರಾಜಕೀಯ ಪಕ್ಷವಾಗಿ ಯೋಚನೆ ಮಾಡದೆ ಕನ್ನಡಿಗರು ಎಂಬ ವಿಶಾಲ ಮನೋಭಾವವನ್ನು ತೋರಿಸಬೇಕು – ಸಿಎಂ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ರಾಜಕೀಯ ಪಕ್ಷವಾಗಿ ಯೋಚನೆ ಮಾಡದೆ ಕನ್ನಡಿಗರು ಎಂಬ ವಿಶಾಲ ಮನೋಭಾವವನ್ನು ತೋರಿಸಬೇಕು – ಸಿಎಂ ಸಿದ್ದರಾಮಯ್ಯ

September 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.