ಹೈಕೋರ್ಟ್‌ ಆದೇಶ ನೀಡಿದರೆ ಪಾದಯಾತ್ರೆ ನಿಲ್ಲಿಸುತ್ತೇವೆ – ಸಿದ್ದರಾಮಯ್ಯ

siddaramaiah

ಹೈಕೋರ್ಟ್‌ ಮೇಕೆದಾಟು ಪಾದಯಾತ್ರೆಯನ್ನು ನಿಲ್ಲಿಸುವಂತೆ ಸೂಚಿಸಿದ್ರೆ ನಾವು ಅದನ್ನು ನಿಲ್ಲಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.  ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಹೈಕೋರ್ಟ್ ನೀಡಿದ ಆದೇಶದ ವಿರುದ್ಧ ನಾವು ನಡೆದುಕೊಳ್ಳುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಈ ನೆಲದ ಕಾನೂನು ಬಗ್ಗೆ ನಮಗೆ ಗೌರವವಿದೆ. ಆದರೆ ನಮ್ಮ ನೆಲದ ಕಾನೂನಿನ ಬಗ್ಗೆ ಬಿಜೆಪಿಯವರಿಗೇ ನಂಬಿಕೆ ಇಲ್ಲ. ಬಿಜೆಪಿ ಶಾಸಕರೇ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ನಿಯಮ ಪಾಲಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ದ್ವಂದ್ವ ನೀತಿ ವಹಿಸಿದೆ. ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಏಕೆ ಪ್ರಕರಣ ದಾಖಲಿಸಿಲ್ಲ. ಗೃಹ ಸಚಿವ ಆರಗ ಜ್ಞಾನೇಂದ್ರ ಕ್ಷೇತ್ರದಲ್ಲೇ ಜಾತ್ರೆ ನಡೆಸಲಾಗಿದೆ. ಬಿಜೆಪಿಯವರೇ ನಿಯಮ ಸರಿಯಾಗಿ ಪಾಲಿಸುತ್ತಿಲ್ಲ. ಕೊವಿಡ್ ಹೆಚ್ಚಾಗಲು ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯ ಸರ್ಕಾರವೇ ನೇರ ಕಾರಣ. ಸೋಂಕು ಹೆಚ್ಚಿರುವ ರಾಜ್ಯಗಳಲ್ಲಿ ಪ್ರಧಾನಿ ರ್ಯಾಲಿಯನ್ನು ನಡೆಸಿದ್ದರು ಅವರಿಂದಲೇ ಕೋವಿಡ್ ಹೆಚ್ಚಳವಾಗಿದೆ ಎಂದು ಹೇಳಿದರು.

ಕೋವಿಡ್ ನಿಯಮಗಳನ್ನು ಮೀರಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವಂತ ಪಾದಯಾತ್ರೆ ಬಗ್ಗೆ ಹೈಕೋರ್ಟ್ ಗರಂ ಆಗಿದೆ. ಅಲ್ಲದೇ ರಾಜ್ಯ ಸರ್ಕಾರ, ಕಾಂಗ್ರೆಸ್ ಪಕ್ಷಕ್ಕೆ ನೋಟಿಸ್ ಜಾರಿ ಮಾಡಿ ಉತ್ತರ ನೀಡಲು ಒಂದು ದಿನದ ಕಾಲಾವಕಾಶವನ್ನು ನೀಡಿದೆ. ಈ ಹಿನ್ನಲೆಯಲ್ಲಿ ಮೇಕೆದಾಟು ಪಾದಯಾತ್ರೆ ಅರ್ಧಕ್ಕೆ ನಿಲ್ಲುತ್ತದೆ ಎಂಬ ಮಾಹಿತಿ ತಿಳಿದುಬಂದಿದೆ.

Exit mobile version