ದಾವಣಗೆರೆ : ಬೆಣ್ಣೆನಗರಿ ದಾವಣಗೆರೆಯಲ್ಲಿ(Davangere) ನಡೆಯುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯನವರ(Siddaramaiah) ೭೫ನೇ ವರ್ಷದ ಹುಟ್ಟುಹಬ್ಬದ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ರಾಜ್ಯದ ಮೂಲೆಮೂಲೆಗಳಿಂದ ಜನಸಾಗರ ಹರಿದುಬಂದಿದೆ. ಹಳೆಮೈಸೂರು ಮತ್ತು ಉತ್ತರ ಕರ್ನಾಟಕ(North Karnataka) ಭಾಗಗಳಿಂದ ನಿರಂತರವಾಗಿ ಕಾಂಗ್ರೆಸ್ ಕಾರ್ಯಕರ್ತರು(Congress Workers) ಮತ್ತು ಸಿದ್ದರಾಮಯ್ಯ ಅಭಿಮಾನಿಗಳು ದಾವಣಗೆರೆ ನಗರದತ್ತ ಆಗಮಿಸುತ್ತಿದ್ದು, ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.

ಇನ್ನು ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ವೇಳೆ ಅಪಘಾತಕ್ಕೀಡಾಗಿ ಮೃತ ಪಟ್ಟಿರುವ ಪ್ರಕಾಶ್ ಬಡಿಗೇರ್ ಅವರಿಗೆ ಸಂತಾಪ ಸೂಚಿಸಿ, ನನ್ನ ಹುಟ್ಟುಹಬ್ಬದ ಸಮಾರಂಭಕ್ಕಾಗಿ ದಾವಣಗೆರೆಗೆ ವಾಹನಗಳಲ್ಲಿ ಆಗಮಿಸುವವರು ಅನಗತ್ಯ ಧಾವಂತ ತೋರದೆ ಎಚ್ಚರಿಕೆಯಿಂದ ವಾಹನ ಚಲಾಯಿಸಿಕೊಂಡು ಬರಬೇಕೆಂದು ಕೈಮುಗಿದು ಮನವಿ ಮಾಡಿಕೊಳ್ಳುತ್ತಿದ್ದೇನೆ. ನಿಮ್ಮ ಜೀವ ನಮಗೆ ಮಾತ್ರವಲ್ಲ ನಿಮ್ಮನ್ನು ನಂಬಿರುವ ಕುಟುಂಬಕ್ಕೂ ಅಷ್ಟೇ ಅಮೂಲ್ಯ ಎಂಬ ಅರಿವಿರಲಿ. ನನ್ನ ಹುಟ್ಟುಹಬ್ಬದ ಸಮಾರಂಭಕ್ಕಾಗಿ ದಾವಣಗೆರೆಗೆ ಆಗಮಿಸುತ್ತಿದ್ದ ಮುದೋಳ ತಾಲೂಕಿನ ಪ್ರಕಾಶ್ ಬಡಿಗೇರ್ ಎಂಬವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಸುದ್ದಿ ತಿಳಿದು ಆಘಾತವಾಯಿತು.
ಮೃತ ಪ್ರಕಾಶ್ ಅವರ ಕುಟುಂಬದ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಸಿದ್ದರಾಮಯ್ಯನವರು ಟ್ವೀಟ್(Tweet) ಮಾಡಿದ್ದಾರೆ. ಮೂಲಗಳ ಪ್ರಕಾರ ಈ ಕಾರ್ಯಕ್ರಮಕ್ಕೆ ಸುಮಾರು ಆರು ಲಕ್ಷ ಜನರು ಆಗಮಿಸುವ ಸಾಧ್ಯತೆ ಇದೆ. ಪ್ರತಿ ವಿಧಾನಸಭಾ ಕ್ಷೇತ್ರದಿಂದ ಜನರನ್ನು ಕರೆತರುವ ಗುರಿಯನ್ನು ಕಾಂಗ್ರೆಸ್ ನಾಯಕರಿಗೆ ನೀಡಲಾಗಿದೆ. ಈಗಾಗಲೇ ರಾಜ್ಯ ಸಾರಿಗೆ ಸಂಸ್ಥೆಯಿಂದ 7 ಸಾವಿರ ಬಸ್ಗಳನ್ನು ಗುತ್ತಿಗೆ ಆಧಾರದಲ್ಲಿ ಪಡೆಯಲಾಗಿದೆ. ಇಂದು ಬೆಳಗಿನಿಂದಲೇ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವವರಿಗೆ ಭಾರೀ ಊಟ ಸಿದ್ದಪಡಿಸಲಾಗಿದೆ.

ಭರ್ಜರಿ ಊಟದ ವ್ಯವಸ್ಥೆ ಮಾಡಲಾಗಿದೆ. ಅದೇ ರೀತಿ ಸಿದ್ದರಾಮಯ್ಯನವರ ಅನೇಕ ಅಭಿಮಾನಿಗಳು ಸಿದ್ದರಾಮಯ್ಯನವರಿಗೆ ಉಡುಗೊರೆಯಾಗಿ ಕುರಿಗಳನ್ನು ನೀಡಲು ಕುರಿಗಳ ಜೊತೆಗೆ ಬಂದಿದ್ದಾರೆ. ಇನ್ನು ಕೆಲವರು ಗದೆ, ಬೆಳ್ಳಿ ಖಡ್ಗ ಸೇರಿದಂತೆ ಅನೇಕ ಉಡುಗರೆ ಸಮೇತ ಆಗಮಿಸುತ್ತಿರುವುದು ವಿಶೇಷವಾಗಿದೆ.