Karnataka: ಅಂಗನವಾಡಿ ಕಾರ್ಯಕರ್ತರು ಮಳೆ- ಚಳಿ-ಗಾಳಿ ಎನ್ನದೆ ಬೀದಿಯಲ್ಲಿ ಠಿಕಾಣಿ ಹೂಡಿ ಮುಷ್ಕರದಲ್ಲಿ ತೊಡಗಿದ್ದಾರೆ. ಈಗಾಗಲೇ ಅಂಗನವಾಡಿ (Siddaramaiah about Anganwadi workers) ಕಾರ್ಯಕರ್ತೆಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.
ಇದಾದ ನಂತರವೂ ರಾಜ್ಯ ಬಿಜೆಪಿ (BJP)ಸರ್ಕಾರ ಹಠಕ್ಕೆ ಬಿದ್ದು ಅಂಗನವಾಡಿ ಕಾರ್ಯಕರ್ತರ ಪ್ರಾಣದ ಜೊತೆ ಚೆಲ್ಲಾಟ ನಡೆಸುತ್ತಿರುವುದು ವಿಷಾದನೀಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಅವರು ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್(Tweet) ಮಾಡಿರುವ ಅವರು. ನಮ್ಮ ಸರ್ಕಾರದ 5 ವರ್ಷಗಳ ಅವಧಿಯಲ್ಲಿ ಅಂಗನವಾಡಿ (Siddaramaiah about Anganwadi workers) ಕಾರ್ಯಕರ್ತರ ಗೌರವಧನವನ್ನು ರೂ.5,000ದಿಂದ ರೂ.8000ಕ್ಕೆ ಮತ್ತು ಸಹಾಯಕಿಯರ ವೇತನವನ್ನು ರೂ.2500ದಿಂದ ರೂ.4000ಕ್ಕೆ ಹೆಚ್ಚಿಸಿದ್ದೆವು.
ಆದರೆ ಬಿಜೆಪಿ ಸರ್ಕಾರ ಅಂಗನವಾಡಿ ಕಾರ್ಯಕರ್ತರ ಮುಷ್ಕರವನ್ನು ತಡೆಯುವ ಹತಾಶ ಪ್ರಯತ್ನ ಮಾಡುತ್ತಿದ್ದು ಇದು ಪ್ರಜಾತಂತ್ರ ವಿರೋಧಿ ಪ್ರಯತ್ನ ಎಂದಿದ್ದಾರೆ.
ಇದನ್ನೂ ಓದಿ: ಪ್ರತಿ ಸರ್ಕಾರಿ ಕಾಲೇಜಿನಲ್ಲಿ ನೇತಾಜಿ, ರಾಯಣ್ಣ ಪ್ರತಿಮೆ ಸ್ಥಾಪಿಸಿ : ಸಿಎಂ ಬೊಮ್ಮಾಯಿ ಆದೇಶಕ್ಕ ಭಾರೀ ಟೀಕೆ
ಇನ್ನೊಂದು ಟ್ವೀಟ್‌ನಲ್ಲಿ, ಸೇವೆ ಕಾಯಂ, ವೇತನ ಹೆಚ್ಚಳ ಮತ್ತು ಮತ್ತು ನಿವೃತ್ತಿ ಸೌಲಭ್ಯವೂ ಸೇರಿದಂತೆ ಹಲವು ಬೇಡಿಕೆಗಳನ್ನು ಅಂಗನವಾಡಿ ಕಾರ್ಯಕರ್ತರು ಸರ್ಕಾರದ ಮುಂದಿಟ್ಟಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರ ಮನಸ್ಸು ಮಾಡಿದರೆ ಮಾತುಕತೆಯ ಮೂಲಕ ಮುಷ್ಕರ ನಿರತರ ಬೇಡಿಕೆ ಈಡೇರಿಸಲು ಸಾಧ್ಯವಿತ್ತು. ಸರ್ಕಾರ ಉದ್ಧಟತನದಿಂದ ಸಂಘರ್ಷದ ಹಾದಿ ಆಯ್ದುಕೊಂಡಿದೆ.
ಮುಷ್ಕರ ನಿರತ ಅಂಗನವಾಡಿ ಕಾರ್ಯಕರ್ತರನ್ನು ರಾಜ್ಯದ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿರುವುದು ಅತ್ಯಂತ ಖಂಡನೀಯ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ತಕ್ಷಣ ಅಂಗನವಾಡಿ ಕಾರ್ಯಕರ್ತರನ್ನು ಕರೆದು ಅವರ ಬೇಡಿಕೆಗಳ ಈಡೇರಿಕೆ ಬಗ್ಗೆ ಚರ್ಚಿಸಬೇಕು ಎಂದು ಆಗ್ರಹಿಸಿದ್ದಾರೆ.
ಇನ್ನು ಕಳೆದ ಅನೇಕ ದಿನಗಳಿಂದ ತಮ್ಮ ಬೇಡಿಕೆ ಈಡೇರಿಕೆಗಾಗಿ ಬೆಂಗಳೂರಿನ ಪ್ರೀಡಂಪಾರ್ಕ್‌ನಲ್ಲಿ (Freedom Park)ಪ್ರತಿಭಟನೆ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ರಾಜ್ಯ ಸರ್ಕಾರದ ಮುಂದೆ,
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆ ಖಾಯಂ ಮಾಡಬೇಕು, ಅಂಗನವಾಡಿ ಕಾರ್ಯಕರ್ತೆಯರಿಗೆ 21 ಸಾವಿರ ವೇತನ ನೀಡಬೇಕು, ಆರೋಗ್ಯವಿಮೆಯಾದ ಇ.ಎಸ್.ಐ(ESI). ಬಾರಿ ಮಾಡಬೇಕು,
ಗ್ರಾಚ್ಯುಟಿ ಹಣ , ಪೆನ್‌ಷನ್ ಜಾರಿ ಮಾಡಬೇಕು, ಮಿನಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಬೇಕು, ಕಾಯಿಲೆಗಳಿಂದ ಬಳಲುತ್ತಿರುವ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸಂಬಳ ಸಹಿತ ರಜೆ ನೀಡಬೇಕು ಎಂಬ ಬೇಡಿಕೆಗಳನ್ನು ಇಟ್ಟಿದ್ದಾರೆ.
ಈ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಆದರೆ ರಾಜ್ಯ ಸರ್ಕಾರ ಈ ಕುರಿತು ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ.