• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ – ಸಿಎಂ ಸಿದ್ದರಾಮಯ್ಯ

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ – ಸಿಎಂ ಸಿದ್ದರಾಮಯ್ಯ
0
SHARES
69
VIEWS
Share on FacebookShare on Twitter

ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವುಗಳು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ (Siddaramaiah Abt Win -Loss) ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ.

ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯನವರು (CM Siddaramaiah) ಹೇಳಿದ್ದಾರೆ.

Siddaramaiah Abt Win -Loss

ಪಂಚರಾಜ್ಯಗಳ ಚುನಾವಣೆಯ ಫಲಿತಾಂಶದ ನಂತರ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ನಾಲ್ಕು ರಾಜ್ಯಗಳ ಚುನಾವಣೆಗಳ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ (Congress) ಸ್ಪಷ್ಟ ಗೆಲುವು

ಸಾಧಿಸಿದೆ. ಮಧ್ಯಪ್ರದೇಶ, ರಾಜಸ್ತಾನ, ಚತ್ತೀಸ್ ಘಡಗಳಲ್ಲಿ (Madhya Pradesh, Rajasthan, Chhattisgarh) ಹಿನ್ನಡೆ ಆಗಿದೆ. ತೆಲಂಗಾಣ ನಮ್ಮ ನೆರೆಯ ರಾಜ್ಯವಾಗಿರುವ ಕಾರಣ ಅಲ್ಲಿನ

ಗೆಲುವಿನಲ್ಲಿ ಕರ್ನಾಟಕ (Karnataka) ಸರ್ಕಾರದ ಗ್ಯಾರಂಟಿ ಯೋಜನೆಗಳ ಯಶಸ್ಸು ಮತ್ತು ಕಾಂಗ್ರೆಸ್ ಪಕ್ಷದ ನಾಯಕರ ಶ್ರಮದ ದೊಡ್ಡ ಪಾತ್ರ ಇದೆ. ವರ್ಷದ ಹಿಂದೆ ತೆಲಂಗಾಣದಲ್ಲಿ ಕಾಂಗ್ರೆಸ್

ಅಧಿಕಾರಕ್ಕೆ ಬರುತ್ತದೆ ಎನ್ನುವುದನ್ನು (Siddaramaiah Abt Win -Loss) ಯಾರೂ ನಿರೀಕ್ಷಿಸಿರಲಿಲ್ಲ.

ರಾಹುಲ್ ಗಾಂಧಿಯವರ (Rahul Ghandhi) ಭಾರತ್ ಜೋಡೋ ಕಾರ್ಯಕ್ರಮ ಅಲ್ಲಿನ ಪಕ್ಷದ ಕಾರ್ಯಕರ್ತರನ್ನು ಇನ್ನಷ್ಟು ಹುರಿದುಂಬಿಸಿದ್ದು ನಿಜ. ಅದರ ನಂತರ ಬಹಳ ವ್ಯವಸ್ಥಿತವಾದ ಪ್ರಚಾರ

ನಡೆಯಿತು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಮತ್ತು ನುಡಿದಂತೆ ನಡೆದು ಗ್ಯಾರಂಟಿ (Guarantee) ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ತೆಲಂಗಾಣದ (Telangana) ಮತದಾರರು

ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಡುವಂತಾಯಿತು ಎಂದಿದ್ದಾರೆ.

Siddaramaiah Abt Win -Loss

ಬಿಜೆಪಿ (BJP) ಬಿಆರ್ಎಸ್ ಪಕ್ಷದ ಜೊತೆ ಒಳ ಒಪ್ಪಂದ ಮಾಡಿಕೊಂಡದ್ದು ಮತದಾರರು ಎರಡು ಪಕ್ಷಗಳ ಮೇಲೆ ಭರವಸೆ ಕಳೆದುಕೊಳ್ಳುವಂತೆ ಮಾಡಿತು. ಈ ಒಳ ಒಪ್ಪಂದದ ತಂತ್ರಗಾರಿಕೆಯನ್ನು

ಕಾಂಗ್ರೆಸ್ (Congress) ಪಕ್ಷ ಪ್ರಚಾರದ ಸಮಯದಲ್ಲಿ ಬಯಲು ಮಾಡಿದ್ದು ಕೂಡಾ ನಮ್ಮ ಗೆಲುವಿಗೆ ಕಾರಣ. ಉಳಿದ ಮೂರು ರಾಜ್ಯಗಳಲ್ಲಿ ಬಿಜೆಪಿಯ ಗೆಲುವಿನಲ್ಲಿ ಹಣ ಮತ್ತು ಕೋಮುವಾದಿ

ರಾಜಕಾರಣದ ಪಾತ್ರ ಕೂಡಾ ಇದೆ. ಈ ಮೂರೂ ರಾಜ್ಯಗಳಲ್ಲಿ ಬಿಜೆಪಿ ಅಕ್ರಮಗಳಿಕೆಯನ್ನು ನೀರಿನಂತೆ ಚೆಲ್ಲಿದೆ. ಅದರ ಜೊತೆ ಧರ್ಮದ ಆಧಾರದಲ್ಲಿ ಸಮಾಜವನ್ನು ಒಡೆಯುವ ತಮ್ಮ ಹಳೆಯ

ಆಟವನ್ನು ಮುಂದುವರಿಸಿದೆ.

ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆಯೇ ಇಲ್ಲದೆ ಇರುವ ಕಾರಣಕ್ಕೆ ಬಿಜೆಪಿ ಅಲ್ಲಿ ಹೆಚ್ಚು ಹಣವನ್ನು ವ್ಯರ್ಥಮಾಡಲು ಹೋಗಿಲ್ಲ. ಅಲ್ಲಿ ಬಿಜೆಪಿ ಕೋಮುವಾದಿ ರಾಜಕಾರಣಕ್ಕೆ ಕೂಡಾ

ಅವಕಾಶ ಇರಲಿಲ್ಲ. ರಾಜಸ್ತಾನದಲ್ಲಿ (Rajasthan) ಸಾಮಾನ್ಯವಾಗಿ ಪ್ರತಿ ಚುನಾವಣೆಯಲ್ಲಿ ಪಕ್ಷವನ್ನು ಬದಲಾಯಿಸುವ ಕಾರಣದಿಂದಾಗಿ ಅಶೋಕ್ ಗೆಹ್ಲೋತ್ (Ashok Gehlot) ಸರ್ಕಾರ

ಒಳ್ಳೆಯ ಕೆಲಸ ಮಾಡಿದ್ದರೂ ಮರಳಿ ಅಧಿಕಾರಕ್ಕೆ ಬರಲು ಸಾಧ್ಯವಾಗಿಲ್ಲ. ರಾಜಸ್ತಾನ ಮತ್ತು ಚತ್ತೀಸ್ ಘಡ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಆಡಳಿತ ವಿರೋಧಿ ಅಲೆ ಕೂಡಾ ಕಾರಣ.

ಇತ್ತೀಚಿನ ವರ್ಷಗಳಲ್ಲಿ ರಾಜಸ್ತಾನದಲ್ಲಿ ಯಾವುದೇ ಆಡಳಿತ ಪಕ್ಷ ಮರಳಿ ಅಧಿಕಾರಕ್ಕೆ ಬಂದಿರುವ ಉದಾಹರಣೆ ಇಲ್ಲ. ಅಲ್ಲಿನ ಮತದಾರರು ಪ್ರತಿ ಚುನಾವಣೆಯಲ್ಲಿ ಆಡಳಿತ ಪಕ್ಷವನ್ನು ಸೋಲಿಸುತ್ತಾ

ಬಂದಿದ್ದಾರೆ. ಈ ಚುನಾವಣೆಯಲ್ಲಿಯೂ ಆ ಪರಂಪರೆಯನ್ನು ಮುಂದುವರಿಸಿದ್ದಾರೆ ಎಂದಿದ್ದಾರೆ.

ಇದನ್ನು ಓದಿ: ಎಂ.ಎಂ.ಕಲ್ಬುರ್ಗಿ ಮತ್ತು ಗೌರಿ ಲಂಕೇಶ್ ಕೊಲೆ ಪ್ರಕರಣ: ವಿಚಾರಣೆಗೆ ವಿಶೇಷ ಕೋರ್ಟ್ ಸ್ಥಾಪನೆ

Tags: bjpCongressguaranteerahul ghandhiSiddaramaiah

Related News

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ
ಪ್ರಮುಖ ಸುದ್ದಿ

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ

May 9, 2026
ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ
ಪ್ರಮುಖ ಸುದ್ದಿ

ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

May 9, 2026
ಪಂಚರಾಜ್ಯ ಫಲಿತಾಂಶ: ಬಂಗಾಳದಲ್ಲಿ ಅರಳಿದ ಕಮಲ, ತಮಿಳುನಾಡಿನಲ್ಲಿ ವಿಜಯ್ ಜಯ,ದೀದಿ-ಸ್ಟಾಲಿನ್-ಪಿಣರಾಯಿ ಮಹಾ ಪತನ
ಪ್ರಮುಖ ಸುದ್ದಿ

ಮ್ಯಾಜಿಕ್ ಸಂಖ್ಯೆಗೆ ಇನ್ನೂ ಎರಡು ಸ್ಥಾನ ಕೊರತೆ: ಟಿವಿಕೆ ಸರ್ಕಾರ ರಚನೆಗೆ ಮುಂದುವರಿದ ಕಸರತ್ತು

May 9, 2026
ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ
ಪ್ರಮುಖ ಸುದ್ದಿ

ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ

May 8, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.