Bengaluru: ರಾಜ್ಯದ ಬರ ಪರಿಸ್ಥಿತಿ ಸಂಬಂಧ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಜೊತೆ ಚರ್ಚಿಸುವ ಸಲುವಾಗಿ ವಿಶೇಷ ವಿಮಾನದಲ್ಲಿ ನಾನು ಪ್ರಯಾಣ ಬೆಳೆಸಿದ್ದನ್ನು ವಿರೋಧಿಸುವ ನೈತಿಕತೆ ರಾಜ್ಯ ಬಿಜೆಪಿ (BJP) ನಾಯಕರಿಗೆ ಇದೆಯೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಈ ಕುರಿತು ಟ್ವೀಟ್ (Tweet) ಮಾಡಿರುವ ಅವರು, ಆಪರೇಷನ್ ಕಮಲದ ಮೂಲಕ ಸಮ್ಮಿಶ್ರ ಸರ್ಕಾರ ಬೀಳಿಸಿ, ಶಾಸಕರನ್ನು ವಿಶೇಷ ವಿಮಾನದಲ್ಲಿ ದೆಹಲಿ, ಮುಂಬೈ ಸುತ್ತಾಡಿಸಿದ, ಐಷಾರಾಮಿ ಹೋಟೆಲ್ಗಳಲ್ಲಿ ವಾರಗಟ್ಟಲೆ ಠಿಕಾಣಿ ಹಾಕಿಸಿ ಮೋಜು ಮಸ್ತಿಗಾಗಿ ಖರ್ಚು ಮಾಡಿದ ನೂರಾರು ಕೋಟಿ ಹಣ ಬಿಜೆಪಿಯವರು ನರೇಗಾ ಯೋಜನೆ (Narega Scheme)ಯಲ್ಲಿ ಕೂಲಿ ಮಾಡಿ ಕೂಡಿಟ್ಟದ್ದಲ್ಲ, ರಾಜ್ಯದ ಬಡಜನರು ಕಷ್ಟಪಟ್ಟು ಕಟ್ಟಿದ ತೆರಿಗೆ ಹಣ ಎಂದಿದ್ದಾರೆ.
ಇನ್ನೊಂದು ಟ್ವೀಟ್ನಲ್ಲಿ, 2014ರ ಜೂನ್ 15ರಿಂದ 2023ರ ಸೆಪ್ಟೆಂಬರ್ವರೆಗೆ (September) ಪ್ರಧಾನಿ ಮೋದಿ ಅವರು 74 ಬಾರಿ ವಿದೇಶಿ ಪ್ರವಾಸ ಮಾಡಿದ್ದಾರೆ. ಪ್ರಧಾನಿಗಳ ಅಧಿಕೃತ ತಾಣದ ಅಂಕಿ ಅಂಶಗಳ ಪ್ರಕಾರ ಪ್ರತಿ ಪ್ರವಾಸದ ಸರಾಸರಿ ವೆಚ್ಚ 8.9 ಕೋಟಿ ರೂಪಾಯಿ. ದೇಶ ಹಸಿವಿನ ಸೂಚ್ಯಂಕದಲ್ಲಿ 111ನೇ ಸ್ಥಾನದಲ್ಲಿದೆ. ದೇಶದ ಜನ ಹಸಿವಿನಿಂದ ಬಳಲುತ್ತಿರುವ ವೇಳೆ ಪ್ರಧಾನಿಗಳು ವಿಶೇಷ ವಿಮಾನದ (Flight) ಮೂಲಕ ವಿದೇಶ ಯಾತ್ರೆ ಮಾಡಿಕೊಂಡು, ಮೋಜು ಮಾಡುತ್ತಾರೆಂದು ಹೇಳಲು ಬರುತ್ತದೆಯಾ? ಎಂದು ಪ್ರಶ್ನಿಸಿದ್ದಾರೆ.
ಇನ್ನು ಸಿದ್ದರಾಮಯ್ಯನವರು (Siddaramaiah) ದೆಹಲಿಗೆ ವಿಶೇಷ ಚಾರ್ಟರ್ ವಿಮಾನದಲ್ಲಿ ಪ್ರಯಾಣಿಸಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದ್ದು, ಇದನ್ನು ಟೀಕಿಸಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು, “ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ ಜನರ ದುಡ್ಡು ಆಕಾಶದಲ್ಲಿ ಜಾತ್ರೆ”. ಕಾಂಗ್ರೆಸ್ (Congress) ಸರ್ಕಾರದ ಆಡಳಿತದಲ್ಲಿ ರಾಜ್ಯ ಬರಗಾಲದಿಂದ ಬೇಯುತ್ತಿದೆ, ರೈತರು ಆತ್ಮ ಹತ್ಯೆಗೆ ಶರಣಾಗುತ್ತಿದ್ದಾರೆ,
ಸಾಮಾನ್ಯರ ಬದುಕು ಅಸಹನೀಯ ಪರಿಸ್ಥಿತಿ ತಲುಪಿದೆ, ಇಂಥಾ ಗಭೀರ ಪರಿಸ್ಥಿತಿಯಲ್ಲೂ ಶ್ರೀಮಂತಿಕೆಯ ದರ್ಪ ತೋರುವ, ಮೋಜು, ಮಸ್ತಿಯೇ ತನ್ನ ಜೀವನ ಶೈಲಿ ಎಂದು ಪ್ರದರ್ಶಿಸಿಕೊಳ್ಳುತ್ತಿರುವ ಸಚಿವ ಜಮೀರ್ (Jameer) ಅವರ ಜೊತೆ ಜನರ ತೆರಿಗೆ ಹಣ ವ್ಯಯಿಸಿ ಐಶಾರಾಮಿ ಜೆಟ್ ವಿಮಾನದಲ್ಲಿ ಪ್ರಯಾಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೋಜಿನ ಭಾಗವಾಗಿರುವುದು ಈ ರಾಜ್ಯದ ದೌರ್ಭಾಗ್ಯವಲ್ಲದೇ ಮತ್ತಿನ್ನೇನು ಅಲ್ಲ.
ಮುಖ್ಯಮಂತ್ರಿ ಮತ್ತವರ ಮಂತ್ರಿಮಂಡಲದ ಸದಸ್ಯರ ಆಡಂಬರ, ವೈಭವದ ಪ್ರದರ್ಶನ ಗಳನ್ನು ನೋಡಿದರೆ “ರೋಮ್ ದೊರೆ ನೀರೋ” ಉಲ್ಲೇಖಿಸುವ ಬದಲು “ರಾಜ್ಯ ಬರದಿಂದ ತತ್ತರಿಸುತ್ತಿದ್ದರೆ ದೊರೆ ಆಕಾಶದಲ್ಲಿ ಓಲಾಡುತ್ತ ತೇಲುತ್ತಿದ್ದಾರೆ….” ಎಂದು ವರ್ಣಿಸಬಹುದಾಗಿದೆ ಎಂದು ಲೇವಡಿ ಮಾಡಿದ್ದರು