• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ರಾಜ್ಯದ ಸ್ತಬ್ಧಚಿತ್ರ ತಿರಸ್ಕರಿಸಿದ ಕೇಂದ್ರದ ಸರ್ಕಾರ: ಕನ್ನಡಿಗರ ತಾಳ್ಮೆ ಪರೀಕ್ಷೆ ಬೇಡ ಎಂದು ಸಿಎಂ ವಾಗ್ದಾಳಿ

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ರಾಜ್ಯದ ಸ್ತಬ್ಧಚಿತ್ರ ತಿರಸ್ಕರಿಸಿದ ಕೇಂದ್ರದ ಸರ್ಕಾರ: ಕನ್ನಡಿಗರ ತಾಳ್ಮೆ ಪರೀಕ್ಷೆ ಬೇಡ ಎಂದು ಸಿಎಂ ವಾಗ್ದಾಳಿ
0
SHARES
116
VIEWS
Share on FacebookShare on Twitter

Bengaluru: ಭಾರತದ ರಾಜಧಾನಿ ದೆಹಲಿಯಲ್ಲಿ (Delhi) ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್​ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ್ದು, ಮುಖ್ಯಮತ್ರಿ ಸಿದ್ದರಾಮಯ್ಯ (Siddaramaiah) ಅವರು ಕನ್ನಡಿಗರ ತಾಳ್ಮೆ ಪರೀಕ್ಷೆ ಬೇಡ ಎಂದು ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Karnataka

ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶದಿಂದ ಪ್ರಹಾರ ಮಾಡುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ಅಧಿಕಾರಕ್ಕೆ ಬಂದಿರುವುದು ಕೇಂದ್ರದ ಮೋದಿ ಆಡಳಿತಕ್ಕೆ ನುಂಗಲಾರದ ತುತ್ತಾಗಿದೆ ಎಂದು ಕಿಡಿಕಾರಿದ್ದು, ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

ಹೊಸದಿಲ್ಲಿಯಲ್ಲಿ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ (Exhibition) ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳುಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ. ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು. ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ.

Politics

ಕರ್ನಾಟಕಕ್ಕೆ (Karnataka) ನಿರಂತರವಾಗಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದಿಂದ ಕನ್ನಡಿಗರು ಈಗಾಗಲೇ ರೋಸಿಹೋಗಿದ್ದಾರೆ. ಕನ್ನಡಿಗರ ತಾಳ್ಮೆಯನ್ನು ಪರೀಕ್ಷಿಸಲು ಕೇಂದ್ರ ಸರ್ಕಾರ ಹೋಗಬಾರದು. ಕನ್ನಡಿಗರು ಕಟ್ಟಿರುವ ಬ್ಯಾಂಕ್ (Bank), ಬಂದರು, ವಿಮಾನ ನಿಲ್ದಾಣಗಳ ಮಾರಾಟ ಮಾಡುತ್ತಿದೆ. ಈಗ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಅವಕಾಶ ನಿರಾಕರಿಸಿ ನಮ್ಮ ಅಸ್ಮಿತೆಯ ಮೇಲೆ ದಾಳಿಗೆ ಇಳಿದಿದೆ. ದೇಶದ ಹೆಮ್ಮೆಯ ಗಣರಾಜ್ಯೋತ್ಸವ ಪರೇಡ್​ನ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ನಮಗೆ ಅವಕಾಶ ನೀಡಬೇಕು ಎಂದು ಒತ್ತಾಯ ಮಾಡುತ್ತೇನೆ ಎಂದಿದ್ದಾರೆ.

ಮೈಸೂರನ್ನು (Mysore) ಒಂದು ಮಾದರಿ ರಾಜ್ಯವಾಗಿ ಕಟ್ಟಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಸ್ತಬ್ಧಚಿತ್ರ, ನೆಲದ ರಕ್ಷಣೆಗಾಗಿ ಸರ್ವಸ್ವವನ್ನೂ ತ್ಯಾಗಗೈದ ಅಪ್ರತಿಮ ದೇಶಪ್ರೇಮಿ ರಾಣಿ ಚೆನ್ನಮ್ಮ ಅವರ ಸ್ತಬ್ಧಚಿತ್ರ, ಕರುನಾಡಿನ ಪ್ರಾಕೃತಿಕ ಸೌಂದರ್ಯ ಮತ್ತು ಬ್ರಾಂಡ್ ಬೆಂಗಳೂರು (Bengaluru) ಹೀಗೆ 4 ಸ್ತಬ್ಧಚಿತ್ರ ಮಾದರಿಗಳಿಗೆ ಅವಕಾಶ ಕೋರಿ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು.

ಆದರೆ ಕೇಂದ್ರದ ಆಯ್ಕೆ ಸಮಿತಿಯು ನಮ್ಮ ಮನವಿಯನ್ನು ತಿರಸ್ಕರಿಸಿ, ನಾಡಿನ ಅಸೀಮ ಸಾಧನೆ ಮತ್ತು ಮಾದರಿ ಸಾಧಕರನ್ನು ದೇಶಕ್ಕೆ ಪರಿಚಯಿಸುವ ಅವಕಾಶವನ್ನು ಕಸಿದುಕೊಂಡಿದೆ. ಈಗಲೂ ಕಾಲ ಮಿಂಚಿಲ್ಲ, ಕೇಂದ್ರ ಸರ್ಕಾರ ತಕ್ಷಣ ತನ್ನ ತಪ್ಪನ್ನು ತಿದ್ದಿಕೊಂಡು ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿಕೊಂಡು ದೇಶದ ಹೆಮ್ಮೆಯ ಗಣರಾಜ್ಯೋತ್ಸವ ಪರೇಡ್ ನ (Republic Pared) ಸ್ತಬ್ಧಚಿತ್ರ ಪ್ರದರ್ಶನದಲ್ಲಿ ನಮಗೆ ಅವಕಾಶ ನೀಡಬೇಕು ಎಂದು ಒತ್ತಾಯ ಮಾಡುತ್ತೇನೆ ಎಂದು ಆಗ್ರಹಿಸಿದ್ದಾರೆ.

ಭವ್ಯಶ್ರೀ ಆರ್ ಜೆ

Tags: bengalurukarntakaNarendra ModiNew Delhi

Related News

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು
ಆರೋಗ್ಯ

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು

October 7, 2026
ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿ

ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ

October 7, 2026
ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ
ಪ್ರಮುಖ ಸುದ್ದಿ

ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ

October 7, 2026
ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್
ಪ್ರಮುಖ ಸುದ್ದಿ

ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್

October 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.