ಪಿಎಸ್‌ಐ ಅಕ್ರಮ ; ಅಧಿಕಾರಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು : ಸಿದ್ದರಾಮಯ್ಯ ಆಗ್ರಹ

siddaramaiah

ಪಿಎಸ್ಐ ನೇಮಕಾತಿ ಅಕ್ರಮದಲ್ಲಿ(PSI Recruitment Scam) ಅನೇಕ ಸಚಿವರು, ಅವರ ಆಪ್ತರು ಶಾಮೀಲಾಗಿರುವ ಸಂದೇಹಗಳಿವೆ.

ಈ ಬಗ್ಗೆ ಸ್ಪಷ್ಟ ಮಾಹಿತಿ ಹೊರಬೀಳಬೇಕು ಎಂದರೆ ಪ್ರಮುಖ ಅಧಿಕಾರಿಗಳನ್ನು ಮಂಪರು ಪರೀಕ್ಷೆಗೆ (Siddaramaiah against PSI scam culprits) ಒಳಪಡಿಸಬೇಕು.

ಅಮ್ರಿತ್ ಪೌಲ್(Amrith Paul) ಬರೆದ ಡೈರಿಯ ಬಗ್ಗೆಯೂ ಸಮಗ್ರ ತನಿಖೆ ನಡೆಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah against PSI scam culprits) ಹೇಳಿದ್ದಾರೆ.


ಈ ಕುರಿತು ಟ್ವೀಟ್‌(Tweet) ಮಾಡಿರುವ ಅವರು, ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಸಿಐಡಿ ಅಧಿಕಾರಿಗಳಿಂದ ಬಂಧಿತರಾಗಿರುವ ನೇಮಕಾತಿ ವಿಭಾಗದ ಎ.ಡಿ.ಜಿ.ಪಿಯಾಗಿದ್ದ ಅಮ್ರಿತ್ ಪೌಲ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಯಾರೆಲ್ಲ ರಾಜಕಾರಣಿಗಳು(Politicians) ಇರದಲ್ಲಿ ಶಾಮೀಲಾಗಿದ್ದಾರೆ ಎಂಬುದು ಗೊತ್ತಾಗಲಿದೆ. https://vijayatimes.com/94-year-old-wins-gold-medal/

“ಉಪ್ಪು ತಿಂದವರು ನೀರು ಕುಡಿಯಲಿ” ಎಂದು ತಿಳಿಸಿದ್ದಾರೆ. ಇನ್ನೊಂದೆಡೆ ಪಿಎಸ್‌ಐ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ(State Government) ವಿರುದ್ದ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ಖರ್ಗೆ(Priyank Kharghe), ಒಂದು ಪರೀಕ್ಷಾ ಕೇಂದ್ರದಲ್ಲೇ ₹ 3.5 ಕೋಟಿಯಷ್ಟು ಅಕ್ರಮ ನಡೆದಿದ್ದು,

ರಾಜ್ಯಾದ್ಯಂತ ಇನ್ನೆಷ್ಟು ನಡೆದಿರಬಹುದು? 300ಕ್ಕೂ ಹೆಚ್ಚು ಅಭ್ಯರ್ಥಿಗಳು(Candidates) ಅಕ್ರಮವಾಗಿ ಆಯ್ಕೆಯಾಗಿದ್ದು, ಎಷ್ಟು ಮಂದಿ ವಿಚಾರಣೆಗೆ ಬಂದಿದ್ದಾರೆ? ಅಕ್ರಮ ಬಯಲಿಗೆಳೆದವರಿಗೆ ನೊಟೀಸ್(Notice) ಜಾರಿ ಮಾಡುವ ಸರ್ಕಾರ ಈ ಅಭ್ಯರ್ಥಿಗಳಿಗೆ ನೊಟೀಸ್ ನೀಡಿದೆಯೇ? ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಆರೋಪ ಪಟ್ಟಿಯಲ್ಲಿ ವಿವರವಾಗಿ ಹೇಳಲಾಗಿದೆ. ನೇಮಕಾತಿಯಲ್ಲಿ ಅಕ್ರಮವೇ ನಡೆದಿಲ್ಲ ಎಂದು ಹೇಳಿದ್ದ ಮಾನ್ಯ ಗೃಹ ಸಚಿವರು ಈಗ ಏನು ಹೇಳುತ್ತಾರೆ? 

ಸ್ಥಳೀಯ ಪೊಲೀಸ್ ಅಧಿಕಾರಿಗಳು, ಹಿರಿಯ ಪೊಲೀಸ್ ಅಧಿಕಾರಿಗಳ ಸಹಕಾರ ಇಲ್ಲದೆ ಇಷ್ಟು ವ್ಯವಸ್ಥಿತವಾಗಿ ಅಕ್ರಮ ನಡೆಯಲು ಸಾಧ್ಯವೇ? ಪರೀಕ್ಷೆ ನಡೆಯುವಾಗ ಹಾಜರಿರಲು ಪ್ರಾಂಶುಪಾಲರು, ಪರೀಕ್ಷಾ ಮೇಲ್ವಿಚಾರಕರಿಗೆ ಮಾತ್ರ ಅವಕಾಶವಿರುತ್ತದೆ. ಬಿಜೆಪಿ ನಾಯಕಿ(BJP Leader) ದಿವ್ಯಾ ಹಾಗರಗಿ(Divya Hagaragi) ತಾವೇ ಪ್ರಾಂಶುಪಾಲರೆಂದು ಸುಳ್ಳು ಹೇಳಿ ಅಕ್ರಮ ನಡೆಯುವಂತೆ ನೋಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಅಭ್ಯರ್ಥಿಗಳಿಗೆ ಬ್ಲ್ಯೂಟೂತ್(Bluetooth) ಮೂಲಕ ಉತ್ತರ ನೀಡುವ ತಂಡಕ್ಕೆ ಸಂಪರ್ಕ ಸಾಧಿಸಲು ಈ ರೀತಿ ಮಾಡಿದ್ದಾರೆ. ನೇಮಕಾತಿ ಅಕ್ರಮ ಸಂಬಂಧ ಸಿಐಡಿ, ಕಲಬುರ್ಗಿ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್(Chargesheet) ಸಲ್ಲಿಸಿದೆ. ಬಿಜೆಪಿ ನಾಯಕಿ ನಡೆಸುತ್ತಿರುವ ಜ್ಞಾನಜ್ಯೋತಿ ಶಾಲೆಯಲ್ಲಿ ನಡೆದ ಪರೀಕ್ಷಾ ಅಕ್ರಮಗಳ ಬಗ್ಗೆ ಈ ಜಾರ್ಜ್ ಶೀಟ್ ಬೆಳಕು ಚೆಲ್ಲಿದೆ. ನೇಮಕಾತಿ ಅಕ್ರಮ ಯಾರು ನಡೆಸಿದರು, ಹೇಗೆ ನಡೆಸಿದರು ಎಂಬ ಮಾಹಿತಿ ಚಾರ್ಜ್ ಶೀಟ್ ನಲ್ಲಿದೆ. ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು.

ಸೆಕ್ಷನ್ 164ರ ಪ್ರಕಾರ ನ್ಯಾಯಾಲಯದ ಮುಂದೆ ಎಡಿಜಿಪಿ ಅಮೃತ್ ಪೌಲ್ ಅವರ ಹೇಳಿಕೆ ದಾಖಲಿಸಿಕೊಳ್ಳಬೇಕು. ಬಿಜೆಪಿ ಸರ್ಕಾರ ಬಂದ ಬಳಿಕ ನಡೆದಿರುವ ಎಲ್ಲಾ ನೇಮಕಾತಿ ಪ್ರಕ್ರಿಯೆಗಳ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
Exit mobile version