ಪಿಎಸ್‌ಐ ಅಕ್ರಮದಲ್ಲಿ ಬಿಎಸ್‌ವೈ ಪುತ್ರ ವಿಜಯೇಂದ್ರ ಭಾಗಿಯಾಗಿದ್ದಾರೆ : ಸಿದ್ದರಾಮಯ್ಯ

Siddaramaiah

ಪಿಎಸ್ಐ ನೇಮಕಾತಿ(PSI Recruitment Scam) ಉಸ್ತುವಾರಿ ವಹಿಸಿರುವ ಎಡಿಜಿಪಿ(ADGP) ಅಮೃತ್ ಪಾಲ್(Amruth Paul) ಅವರನ್ನೇ ಈಗ ಬಂಧಿಸಲಾಗಿದೆ. ಈ ಹಗರಣವನ್ನು ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡಿದಾಗ ಯಾವ ಭ್ರಷ್ಟಾಚಾರವೂ(Corruption) ನಡೆದಿಲ್ಲ ಎಂದು ವಾದಿಸಿದ್ದ ಮುಖ್ಯಮಂತ್ರಿಗಳು, ಗೃಹಸಚಿವರು ಈಗೇನು ಹೇಳುತ್ತಾರೆ? ಮಾಜಿ ಮುಖ್ಯಮಂತ್ರಿ ಬಿಎಸ್‌ವೈ(BSY) ಅವರ ಮಗ ವಿಜಯೇಂದ್ರ(Vijayendra) ಹಾಗೂ ಸಚಿವ ಅಶ್ವಥ್ ನಾರಾಯಣ್(Ashwath Narayan) ಅವರು ಈ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿದೆ.

ಅಶ್ವಥ್ ನಾರಾಯಣ್ ಸಂಬಂಧಿಕರು ಮಾರ್ಕ್ಸ್ ತಿದ್ದಿ ಆಯ್ಕೆಯಾಗಿದ್ದಾರೆ ಎನ್ನಲಾಗುತ್ತಿದೆ. ಹೀಗಿದ್ದಾಗ ಸಿಐಡಿ(CID) ತನಿಖೆಯಿಂದ ಯಾವ ನ್ಯಾಯ ಸಿಗಲು ಸಾಧ್ಯ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಪ್ರಶ್ನಿಸಿದ್ದಾರೆ. ರಾಜ್ಯ ಬಿಜೆಪಿ(State BJP) ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿರುವ ಅವರು, ಜಿಲ್ಲಾಧಿಕಾರಿ ಮಂಜುನಾಥ್ ಬಂಧನದ ಪ್ರಕರಣದಲ್ಲಿ ತಮ್ಮನ್ನು ಯಾರೋ ಬೆದರಿಸಿದ್ದಾರೆ ಎಂದು ನ್ಯಾಯಮೂರ್ತಿಗಳೇ ಖುದ್ದಾಗಿ ವಿಚಾರಣೆ ಕಾಲದಲ್ಲಿ ಹೇಳಿದ್ದಾರೆ.

ನ್ಯಾಯಮೂರ್ತಿಗಳನ್ನೇ ಬೆದರಿಸುವಷ್ಟು ಶಕ್ತಿಶಾಲಿ ವ್ಯಕ್ತಿ ಯಾರು? ಆ ವ್ಯಕ್ತಿಗೂ, ಸರ್ಕಾರಕ್ಕೂ ನೇರವಾದ ಸಂಬಂಧ ಇದೆಯೇ? ಎಂಬ ಬಗ್ಗೆ ತನಿಖೆಯಾಗಬೇಕು. ಪಿಎಸ್ಐ ನೇಮಕಾತಿ ಹಗರಣದ ತನಿಖೆಗೆ ಕಳೆದ ಮಾರ್ಚ್ ತಿಂಗಳಿನಿಂದ ನಾವು ಒತ್ತಾಯಿಸುತ್ತಾ ಬಂದಿದ್ದೇವೆ. ಈ ಹಗರಣವನ್ನು ಹೈಕೋರ್ಟ್(Highcourt) ನ್ಯಾಯಮೂರ್ತಿಗಳ ಮೇಲುಸ್ತುವಾರಿಯಲ್ಲಿ ನ್ಯಾಯಾಂಗ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಅವರಿಗೆ 2022ರ ಮೇ 26ರಂದು ಪತ್ರ ಬರೆದಿದ್ದೆ. ಈಗಲೂ ನಮ್ಮದು ಇದೇ ಒತ್ತಾಯ.

ಪಿಎಸ್ಐ ನೇಮಕಾತಿ ಹಗರಣದಲ್ಲಿ ಸಚಿವರು ಮತ್ತು ಆಡಳಿತ ಪಕ್ಷದ ನಾಯಕರೇ ಭಾಗಿಯಾಗಿರುವುದರಿಂದ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ಅವರು ರಾಜೀನಾಮೆ(Resignation) ನೀಡಬೇಕು. ಇಡೀ ಹಗರಣದ ಬಗ್ಗೆ ಹೈಕೋರ್ಟ್ ನ್ಯಾಯಮೂರ್ತಿಗಳ ಮೇಲುಸ್ತುವಾರಿಯಲ್ಲಿ ನ್ಯಾಯಾಂಗ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.

Exit mobile version