ನಿಮ್ಮ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ(Corruption) ಬಗ್ಗೆ ತನಿಖೆಗಾಗಿ ಇಡೀ ವಿಧಾನಸೌಧವನ್ನೇ(VidhanSoudha) ತನಿಖಾ ಸಂಸ್ಥೆಗಳಿಗೆ ಬಿಟ್ಟುಕೊಡಬೇಕಾಗಬಹುದು. ಸಚಿವರು(Ministers) ಬೇರೇನೂ ಕೆಲಸ ಮಾಡದೆ ತನಿಖಾಧಿಕಾರಿಗಳ ಮುಂದೆ ನಿತ್ಯ ವಿಚಾರಣೆಗೆ ಹಾಜರಿ ಹಾಕಬೇಕಾಗಬಹುದು. ಇದಕ್ಕಿಂತ ಎಲ್ಲರೂ ಸಾಮೂಹಿಕ ರಾಜೀನಾಮೆ(Resignation) ನೀಡಿ ಮನೆಗೆ ಹೋಗುವುದು ಒಳಿತು ಎಂದು ವಿಪಕ್ಷ ನಾಯಕ ಸಿದರಾಮಯ್ಯ(Siddaramaiah) ಹೇಳಿದ್ದಾರೆ.

ರಾಜ್ಯ ಬಿಜೆಪಿ(State BJP) ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿರುವ ಅವರು, ರಾಜ್ಯ ಬಿಜೆಪಿ ಸರ್ಕಾರದ ಸಾಲು ಸಾಲು ಹಗರಣಗಳನ್ನು ಬಯಲಿಗೆಳೆಯದಂತೆ ತಡೆಯಲು ನೀವು ಮಾಡುತ್ತಿರುವ ಬೆದರಿಕೆ ರೂಪದ ಆರೋಪಗಳಿಗೆ ನಾವು ಬಗ್ಗುವವರಲ್ಲ. ಈ ರೀತಿಯ ಈ ಬ್ಲಾಕ್ ಮೇಲ್ ತಂತ್ರದಿಂದ ನಮ್ಮ ಬಾಯಿ ಮುಚ್ಚಿಸಬಹುದೆಂದು ತಿಳಿದುಕೊಂಡಿದ್ದರೆ ಅದು ನಿಮ್ಮ ಭ್ರಮೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳಾಯಿತು, ನಮ್ಮ ಸರ್ಕಾರದ ಹಗರಣಗಳ ಬಗ್ಗೆ ತನಿಖೆಗೆ ಈ ಮೂರು ವರ್ಷ ಸಾಕಾಗಲಿಲ್ಲವೇ?
ನಿಮ್ಮ ತಲೆಗೆ ಹಗರಣಗಳು ಸುತ್ತಿಕೊಂಡ ಕೂಡಲೇ ನಮ್ಮ ಕಾಲದ ಹಗರಣಗಳು ನೆನಪಾಯಿತೇ? ಎಂದು ಪ್ರಶ್ನಿಸಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯ ಹಗರಣಗಳನ್ನು ತನಿಖೆಗೆ ಒತ್ತಾಯಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರಿಗೆ ಪತ್ರ ಬರೆಯಲಿರುವ ಸಚಿವ ಡಾ. ಸಿ ಅಶ್ವಥ್‌ನಾರಾಯಣ(C Ashwath Narayan) ಹೇಳಿಕೆಯನ್ನು ಸ್ವಾಗತಿಸುತ್ತೇನೆ. ಇದೇ ರೀತಿ ಪಿ.ಎಸ್.ಐ ನೇಮಕಾತಿ ಹಗರಣದಲ್ಲಿ(PSI Recruitment Scam) ಅವರ ಮೇಲಿನ ಆರೋಪಗಳ ಬಗ್ಗೆಯೂ ತನಿಖೆಗೆ ಒತ್ತಾಯಿಸಿ ಪತ್ರ ಬರೆಯಲು ಕೇಳಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಇನ್ನು ಸಚಿವ ಅಶ್ವಥ್ ನಾರಾಯಣ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್(Congress) ಸರ್ಕಾರದ ಅವಧಿಯಲ್ಲಿ ನಡೆದ ಹಗರಣಗಳ ಕುರಿತು ತನಿಖೆ ನಡೆಸಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, ನಮ್ಮ ಸರ್ಕಾರದ ಹಗರಣಗಳ ಬಗ್ಗೆ ತನಿಖೆಗೆ ಈ ಮೂರು ವರ್ಷ ಸಾಕಾಗಲಿಲ್ಲವೇ? ಎಂದು ಕಿಡಿಕಾರಿದರು.