download app

FOLLOW US ON >

Monday, August 8, 2022
Breaking News
ನೋಯ್ಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಬುಲ್ಡೋಜರ್ ಕ್ರಮ!“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿಹೆಣ ಕಂಡರೆ ಓಡೋಡಿ ಬರುವ ಶೋಭಾ ಕರಂದ್ಲಾಜೆ, ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ? : ಕಾಂಗ್ರೆಸ್‌ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್ಸಚಿವ ಸುನೀಲ್‌ ಕುಮಾರ್‌ಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು : ಸಿದ್ದರಾಮಯ್ಯಮೋದಿ-ಮಮತಾ ಬ್ಯಾನರ್ಜಿ ಭೇಟಿ : ಪಶ್ಚಿಮ ಬಂಗಾಳಕ್ಕೆ ಹಣ ಬಿಡುಗಡೆಗೆ ಒತ್ತಾಯ!
English English Kannada Kannada

ಜನತೆಯ ಭರವಸೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವ ನ್ಯಾಯಮೂರ್ತಿಗಳ ದನಿ ಉಡುಗಿಹೋಗಲು ಬಿಡಬಾರದು : ಸಿದ್ದರಾಮಯ್ಯ

ಜನತೆಯ ಭರವಸೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವ ನ್ಯಾಯಮೂರ್ತಿಗಳ ದನಿ ಉಡುಗಿಹೋಗಲು ಬಿಡಬಾರದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಹೇಳಿದ್ದಾರೆ.
BJP

ಕಾರ್ಯಾಂಗ – ಶಾಸಕಾಂಗಗಳು ಕರ್ತವ್ಯ ನಿರ್ವಹಣೆಯಲ್ಲಿ ವಿಫಲವಾದಾಗ ಜನತೆ ನ್ಯಾಯಾಂಗದ ಕಡೆ ಭರವಸೆಯಿಂದ ನೋಡುತ್ತಾರೆ. ಪ್ರಭುತ್ವದ ಒತ್ತಡಗಳನ್ನು ಮೀರಿ ಜನತೆಯ ಭರವಸೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವ ನ್ಯಾಯಮೂರ್ತಿಗಳ ದನಿ ಉಡುಗಿಹೋಗಲು ಬಿಡಬಾರದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಹೇಳಿದ್ದಾರೆ.

Politics


ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ವರ್ಗಾವಣೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್(Tweet) ಮಾಡಿರುವ ಅವರು, ಕರ್ನಾಟಕದಲ್ಲಿ ಎರಡು ದಿನಗಳ ಹಿಂದೆಯಷ್ಟೇ ಆಡಳಿತಾರೂಢ ಪಕ್ಷದ ನಾಯಕರು ನ್ಯಾಯಾಲಯದ ಕಾರ್ಯನಿರ್ವಹಣೆಯಲ್ಲಿ ಮಧ್ಯಪ್ರವೇಶಿಸಿ ತಮ್ಮ ಮೇಲೆ ಒತ್ತಡ ಹೇರುತ್ತಿರುವ ಬಗ್ಗೆ ಹೈಕೋರ್ಟ್ ನ್ಯಾಯಮೂರ್ತಿಗಳು ಅಸಮಾಧಾನ ವ್ಯಕ್ತಪಡಿಸಿದ್ದರು. ಇಂತಹ ಅಪರೂಪದ ನ್ಯಾಯಮೂರ್ತಿಗಳನ್ನು ನಾವೆಲ್ಲರೂ ಒಗ್ಗೂಡಿ ಬೆಂಬಲಿಸಬೇಕಾಗಿದೆ.


ಇತ್ತೀಚಿನ ಕೆಲವು ನ್ಯಾಯಮೂರ್ತಿಗಳ ನಡುವಳಿಕೆಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕವಾಗಿ ಅಸಮಾಧಾನ-ಆಕ್ರೋಶ ವ್ಯಕ್ತವಾಗುತ್ತಿರುವಾಗ ಸುಪ್ರೀಂಕೋರ್ಟ್ನ(Supremecourt) ಇಬ್ಬರು ನ್ಯಾಯಮೂರ್ತಿಗಳ ಹೇಳಿಕೆ ನ್ಯಾಯಾಂಗದ ಬಗ್ಗೆ ಭರವಸೆ ಮೂಡಿಸಿತ್ತು. ಈಗ ಅಂತಹ ದನಿಗಳನ್ನು ಕೂಡಾ ದಮನಿಸುವ ಪ್ರಯತ್ನ ನಡೆದಿರುವುದು ವಿಷಾದನೀಯ. ಆರೋಪಿ ನೂಪುರ್ ಶರ್ಮಾ(Nupur Sharma) ಅವರಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ನ ದ್ವಿಸದಸ್ಯ ಪೀಠ ವ್ಯಕ್ತಪಡಿಸಿದ್ದ ಅಭಿಪ್ರಾಯವನ್ನು ನಿವೃತ್ತ ನ್ಯಾಯಮೂರ್ತಿಗಳು ಮತ್ತು ಸೇನಾಧಿಕಾರಿಗಳು ವಿರೋಧಿಸಿ ಕ್ರಮಕೈಗೊಳ್ಳಲು ಆಗ್ರಹಿಸಿದ್ದು, ಅತ್ಯಂತ ದುರದೃಷ್ಟಕರ ಬೆಳವಣಿಗೆ.

rahul

ಇದು ಸತ್ಯ ಮತ್ತು ನ್ಯಾಯನಿಷ್ಠರ ಬಾಯಿಮುಚ್ಚಿಸುವ ಹತಾಶ ಪ್ರಯತ್ನ ಎಂದು ತಿಳಿಸಿದ್ದಾರೆ. ಇನ್ನು ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ(BJP Govt) ಭ್ರಷ್ಟಾಚಾರವನ್ನು ಬಯಲಿಗೆಳೆದ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಲಾಗಿದೆ. ಒಂದರ ಮೇಲೊಂದು ಸಂಸ್ಥೆಗಳ ಮೇಲೆ ಬಿಜೆಪಿ ಬುಲ್ಡೋಜರ್ ಮಾಡುತ್ತಿದೆ. ನಿರ್ಭೀತಿಯಿಂದ ತಮ್ಮ ಕರ್ತವ್ಯ ನಿರ್ವಹಿಸುತ್ತಿರುವವರ ಜೊತೆಗೆ ನಾವೆಲ್ಲರೂ ನಿಲ್ಲಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮೂಲಕ ಕರೆ ನೀಡಿದ್ದರು.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article