ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರು  ನ 30 : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆ ಹಾಗೂ ಸಂವಿಧಾನ ರಚನೆ ಮಾಡಿದ್ದು ಇಂದಿರಾ ಗಾಂಧಿ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಎಂಬ ಅನಿಲ್ ಲಾಡ್ ಅವರ ಹೇಳಿಕೆ ವಿರುದ್ಧ ಬಿಜೆಪಿ ನಾಯಕರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಹಾಗೂ ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯಾಧ್ಯಕ್ಷ ಚಲವಾದಿ ನಾರಾಯಣಸ್ವಾಮಿ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಅನಿಲ್ ಲಾಡ್ ವಿರುದ್ಧ ಹೈಗ್ರೌಂಡ್ರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Exit mobile version