ಪ್ರೊ.ಭಗವಾನ್ ಮುಖಕ್ಕೆ ವಕೀಲೆ ಮಸಿ: ವಕೀಲೆಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಸಿದ್ದರಾಮಯ್ಯ

ಬೆಂಗಳೂರು, ಫೆ. 05: ಸಾಹಿತಿ ಪ್ರೊ.ಕೆ.ಎಸ್. ಭಗವಾನ್ ಮುಖಕ್ಕೆ ವಕೀಲೆಯೊಬ್ಬರು ಮಸಿ ಬಳಿದ ಪ್ರಕರಣವನ್ನು ಖಂಡಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ವಕೀಲೆಯ ವಿರುದ್ಧ ಪ್ರಕರಣ ‌ದಾಖಲಿಸಿ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಮುಖಕ್ಕೆ ವಕೀಲೆಯೊಬ್ಬರು ಮಸಿ ಬಳಿದ ದುಷ್ಕೃತ್ಯ ಖಂಡನೀಯ.

ಸೈದ್ಧಾಂತಿಕ ಭಿನ್ನಾಭಿಪ್ರಾಯವನ್ನು ಚರ್ಚೆ-ಸಂವಾದದ ಮೂಲಕ ಬಗೆಹರಿಸಿಕೊಳ್ಳಬೇಕೇ ವಿನಃ ಈ ರೀತಿಯ ಅಸಭ್ಯ ನಡವಳಿಕೆ ಮೂಲಕ ಅಲ್ಲ. ಪೊಲೀಸರು ತಕ್ಷಣ ವಕೀಲೆ ವಿರುದ್ಧ ಪ್ರಕರಣ ದಾಖಲಿಸಿ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ನಿನ್ನೆ ಬೆಂಗಳೂರಿನ ಎರಡನೇ ಎಸಿಎಂಎಂ ನ್ಯಾಯಾಲಯದ ಆವರಣದಲ್ಲಿ ಸಾಹಿತಿ ಪ್ರಗತಿಪರ ಚಿಂತಕ ಕೆ. ಎಸ್. ಭಗವಾನ್ ಮುಖಕ್ಕೆ ಮಸಿ ಬಳಿದಿರುವ ಘಟನೆ ನಡೆದಿದೆ.

ವಕೀಲೆ ಮೀರಾ ರಾಘವೇಂದ್ರರಿಂದ ಭಗವಾನ್ ಮುಖಕ್ಕೆ ಮಸಿ ಬಳಿದಿದ್ದಾರೆ. ಭಗವಾನ್ ಹಿಂದೂ ವಿರೋಧಿ ಹೇಳಿಕೆ ಮೇಲೆ ವಕೀಲೆ ಖಾಸಗಿ ದೂರು ದಾಖಲಿಸಿದ್ದರು. ಹೀಗಾಗಿ ಇಂದು 2ನೇ ACMM  ನ್ಯಾಯಾಲಯಕ್ಕೆ ಭಗವಾನ್ ಅವರು ಹಾಜರಾಗಿದ್ದರು. ನ್ಯಾಯಾಲಯದ ಮುಂದೆ ಹಾಜರಾಗಿ ವಾಪಾಸ್ಸಾಗುವ ವೇಳೆ ವಕೀಲೆ ಏಕಾಏಕಿ ಭಗವಾನ್ ಮುಖಕ್ಕೆ ಮಸಿ ಬಳಿದಿದ್ದಾರೆ ಎಂಬುದು ತಿಳಿದು ಬಂದಿದೆ. ನ್ಯಾಯಾಲಯದ ಒಳಾಂಗಣದಲ್ಲೇ ಮುಖಕ್ಕೆ ಮಸಿ ಬಳಿದ ವಕೀಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Exit mobile version