“ನೀವೇ ಕೋವಿ ಹಿಡಿದುಕೊಂಡು ಬಂದು ಬಿಡಿ” ಅಶ್ವಥ್‌ ನಾರಾಯಣ್‌ ವಿರುದ್ದ ಸಿದ್ದು ವಾಗ್ದಾಳಿ

Bengaluru: ಟಿಪ್ಪುವನ್ನು ಹೊಡೆದು ಹಾಕಿದಂತೆ ನನ್ನನ್ನೂ ಹೊಡೆದು ಹಾಕಬೇಕು ಎಂದು ಸಚಿವ ಅಶ್ವಥ್‌ ನಾರಾಯಣ್‌(C.N Ashwath Narayan) ಜನರಿಗೆ ಕರೆನೀಡಿದ್ದಾರೆ. ಜನರನ್ನು ಯಾಕೆ ಪ್ರಚೋದಿಸುತ್ತೀರಿ ಸಚಿವರೇ? ನೀವೇ ಕೋವಿ ಹಿಡಿದುಕೊಂಡು ಬಂದು (Siddaramaiah Ashwath cold war) ಬಿಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಸವಾಲು ಹಾಕಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌(Tweet) ಮಾಡಿ ಸರ್ಕಾರದ ವಿರುದ್ದ ಕಿಡಿಕಾರಿರುವ ಅವರು,

ಟಿಪ್ಪುವನ್ನು(Tippu Sulthan) ಹೊಡೆದುಹಾಕಿದಂತೆ ನನ್ನನ್ನೂ ಹೊಡೆದುಹಾಕಬೇಕು ಎಂದು ಸಚಿವ ಅಶ್ವಥ್‌ ನಾರಾಯಣ್‌ ಜನರಿಗೆ ಕರೆನೀಡಿದ್ದಾರೆ. ಜನರನ್ನು ಯಾಕೆ ಪ್ರಚೋದಿಸುತ್ತೀರಿ ಸಚಿವರೇ?

ನೀವೇ ಕೋವಿ ಹಿಡಿದುಕೊಂಡು ಬಂದು ಬಿಡಿ. ಸಚಿವ ಅಶ್ವಥ್ನಾರಾಯಣ್ ಅವರು ನೀಡಿರುವ ಹತ್ಯೆಯ ಕರೆಯ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ(Narendra Modi)

ಅವರ ಪ್ರತಿಕ್ರಿಯೆ ಏನು ಎನ್ನುವುದನ್ನು ನಾನು ತಿಳಿದುಕೊಳ್ಳಬಯಸುತ್ತೇನೆ. ಮೌನ ಸಮ್ಮತಿಯ ಲಕ್ಷಣವೇ? ಎಂದು ಪ್ರಶ್ನಿಸಿದ್ದಾರೆ.

ಇನ್ನೊಂದು ಟ್ವೀಟ್‌ನಲ್ಲಿ, ರಾಜ್ಯದ ಒಬ್ಬ ಸಚಿವ ಈ ರೀತಿ ಬಹಿರಂಗವಾಗಿ ಹತ್ಯೆಗೆ ಕರೆ ನೀಡಿದ ನಂತರವೂ ಅವರ ವಿರುದ್ಧ ಪೊಲೀಸರು ಕ್ರಮಕೈಗೊಂಡಿಲ್ಲ (Siddaramaiah Ashwath cold war) ಎಂದಾದರೆ ಈ ರಾಜ್ಯವನ್ನು ಆಳುವವರು ಜೀವಂತವಾಗಿಲ್ಲ,

ಸರ್ಕಾರ ಸತ್ತುಹೋಗಿದೆ ಎಂದೇ ಲೆಕ್ಕ. ನನ್ನ ಹತ್ಯೆಗೆ ಅಶ್ವಥ್‌ ನಾರಾಯಣ್‌ ಅವರು ಕೊಟ್ಟ ಕರೆಯಿಂದ ನನಗೇನು ಆಶ್ಚರ್ಯವಾಗಿಲ್ಲ.

ಗಾಂಧೀಜಿಯನ್ನು(Mahatma Gandhiji) ಕೊಂದವರನ್ನೇ ಆರಾಧಿಸುತ್ತಿರುವ ಪಕ್ಷದ ನಾಯಕರಿಂದ ಕೊಲೆಗಡುಕತನವಲ್ಲದೆ, ಪ್ರೀತಿ, ಕರುಣೆ, ಸ್ನೇಹವನ್ನು ನಿರೀಕ್ಷಿಸಲು ಸಾಧ್ಯವೇ? ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನು ಮಂಡ್ಯದಲ್ಲಿ(Mandya) ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ್ದ ಸಚಿವ ಅಶ್ವಥ್ನಾರಾಯಣ್ ಅವರು,

ಟಿಪ್ಪು ಸುಲ್ತಾನ್ನನ್ನು ಹುರಿಗೌಡ್ಮತ್ತು ನಂಜೇಗೌಡರು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕೆಂದು ಕರೆ ನೀಡಿದ್ದರು.

ಅವರ ಈ ಹೇಳಿಕೆ ವಿವಾದದ ಸ್ವರೂಪ ಪಡೆಯುತ್ತಿದ್ದಂತೆ, ತಮ್ಮ ಹೇಳಿಕೆಯ ಕುರಿತು ಸ್ಪಷ್ಟನೆ ನೀಡಿರುವ ಸಚಿವ ಅಶ್ವಥ್ನಾರಾಯಣ್, ನಾನು ಸಿದ್ದರಾಮಯ್ಯ ಅವರನ್ನು ಸೋಲಿಸಿ ಎಂಬರ್ಥದಲ್ಲಿ ಈ ಹೇಳಿಕೆ ನೀಡಿದ್ದೇನೆ,

ಹೊರತು ಅವರನ್ನು ಕೊಲ್ಲಲು ಕರೆ ನೀಡಿಲ್ಲ. ರಾಜಕೀಯವಾಗಿ ನನ್ನ ಹೇಳಿಕೆಯನ್ನು ಎದುರಿಸಲಿ. ನಾನು ವೈಯಕ್ತಿಕವಾಗಿ ಸಿದ್ದರಾಮಯ್ಯ ವಿರುದ್ದ ಟೀಕೆ ಮಾಡಿಲ್ಲ ಎಂದಿದ್ದಾರೆ.

Exit mobile version