• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಸಾರಿಗೆ ಕಾರ್ಮಿಕರನ್ನು 10-12 ಗಂಟೆಗಳಷ್ಟು ಕಾಲ ದುಡಿಸಲಾಗುತ್ತಿದೆ : ಸಿದ್ದರಾಮಯ್ಯ

Mohan Shetty by Mohan Shetty
in ರಾಜಕೀಯ, ರಾಜ್ಯ
BJP
0
SHARES
2
VIEWS
Share on FacebookShare on Twitter

ಸಾರಿಗೆ ಸಂಸ್ಥೆಯ(Transportation Agency) ಕಾರ್ಮಿಕರನ್ನು 10-12 ಗಂಟೆಗಳಷ್ಟು ಕಾಲ ದುಡಿಸಲಾಗುತ್ತಿದೆ.

ರಾಜ್ಯ ಸರ್ಕಾರದ ಈ ಶೋಷಣೆಯನ್ನು ವಿರೋಧಿಸಿ ಕಳೆದ ವರ್ಷ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರೆಂದು ವಜಾ ಮಾಡಿದ್ದ ಸಿಬ್ಬಂದಿಗಳಲ್ಲಿ 1,500 ಜನರನ್ನು ಇದುವರೆಗೂ ಕೆಲಸಕ್ಕೆ ಸೇರಿಸಿಕೊಂಡಿಲ್ಲ.

ಸಾರಿಗೆ ನಿಗಮಗಳಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಕಳೆದ ಎರಡೂವರೆ ವರ್ಷಗಳಿಂದ ವೇತನ ಪರಿಷ್ಕರಣೆ ಆಗಿಲ್ಲ.

https://vijayatimes.com/nia-have-udaipur-killers-in-custody/

ಈ ನೌಕರರು ರಾಜ್ಯದ ಇತರೆ ಸರ್ಕಾರಿ ನೌಕರರು(Government Employees) ಪಡೆಯುತ್ತಿರುವ ವೇತನಗಳಿಗಿಂತ ಶೇ.40 ರಷ್ಟು ಕಡಿಮೆ ಪಡೆಯುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಹೇಳಿದ್ದಾರೆ.

Siddaramaiah attacks bjp with a issue
KSRTC

ಈ ಕುರಿತು ಸರಣಿ ಟ್ವೀಟ್‌(Tweet) ಮಾಡಿರುವ ಅವರು, ಹೆದ್ದಾರಿಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಶುಲ್ಕ ವಸೂಲಿಯಿಂದ ಸಂಪೂರ್ಣ ವಿನಾಯಿತಿ ನೀಡಬೇಕು ಹಾಗೂ ವಿದ್ಯಾರ್ಥಿ, ಕಾರ್ಮಿಕ ಹಾಗೂ ಇತರೆ ಎಲ್ಲಾ ಜನ ಸಾಮಾನ್ಯರಿಗೆ ಉತ್ತಮ ಸಾರಿಗೆ ಸೇವೆಯನ್ನು ಕಡಿಮೆ ದರದಲ್ಲಿ ನೀಡಬೇಕೆಂದು ಆಗ್ರಹಿಸುತ್ತೇನೆ.

ಇದನ್ನೂ ಓದಿ : https://vijayatimes.com/nia-have-udaipur-killers-in-custody

ಸರ್ಕಾರಿ ಉದ್ದೇಶಕ್ಕೆ ಬಳಕೆಯಾಗುತ್ತಿರುವ ಇಂಧನಕ್ಕೆ ಸಂಪೂರ್ಣ ತೆರಿಗೆ ವಿನಾಯಿತಿ((Tax Free) ನೀಡಬೇಕು. ರಾಜ್ಯ ಸಾರಿಗೆ ನಿಗಮಗಳ ಸಿಬ್ಬಂದಿಗಳಿಗೆ ನೀಡಬೇಕಾದ ಸವಲತ್ತುಗಳನ್ನು ಕೂಡಲೆ ಬಿಡುಗಡೆ ಮಾಡಬೇಕು. ವಜಾ ಮಾಡಿರುವ ಸಿಬ್ಬಂದಿಗಳನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇನೆ. ಸರ್ಕಾರಿ ಬಸ್ಸುಗಳಿಗೆ ರಿಯಾಯಿತಿ ದರದಲ್ಲಿ ಡೀಸೆಲ್(Diesel) ವಿತರಿಸಬೇಕಾದ ಹಾಗೂ ಡೀಸೆಲ್ ಮೇಲೆ ತೆರಿಗೆ ಮನ್ನಾ ಮಾಡಬೇಕಾದ ನರೇಂದ್ರ ಮೋದಿ(Narendra Modi) ಮತ್ತು ಬೊಮ್ಮಾಯಿಯವರ(Basavaraj Bommai) ಸರ್ಕಾರ ಜನರನ್ನು ಸುಲಿಗೆ ಮಾಡಲು ನಿಂತಿವೆ.

Next

ಜನಪರವಾದ ಸರ್ಕಾರ ಮಾಡುವ ಕೆಲಸವೆ ಇದು? ಈಗ ಲಭ್ಯವಿರುವ ಇಂಧನ ಕೇವಲ 3-4 ದಿನಕ್ಕೆ ಮಾತ್ರ ಸಾಕಾಗುತ್ತದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆ ನಂತರ ಏನು ಮಾಡಬೇಕೆಂಬ ಬಗ್ಗೆ ಸರ್ಕಾರಕ್ಕೂ ತಿಳಿದಿಲ್ಲ. ಇದನ್ನೆಲ್ಲ ನೋಡಿದರೆ ಜನಸಾಮಾನ್ಯರ ಸಾರಿಗೆ ವ್ಯವಸ್ಥೆಯನ್ನು ಖಾಸಗಿಯವರಿಗೆ ವಹಿಸಿಕೊಡಲು ಸಿದ್ಧತೆ ನಡೆಯುತ್ತಿರುವ ಹಾಗೆ ಕಾಣುತ್ತಿದೆ. ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್ಸುಗಳು ಪ್ರತಿ ದಿನ ಸುಮಾರು 13 ಲಕ್ಷ ಲೀಟರ್ ಡೀಸೆಲ್ ಬಳಸುತ್ತವೆ. ಲೀಟರ್ ಮೇಲೆ 25 ರೂ. ಹೆಚ್ಚಿಗೆ ಪಾವತಿಸಬೇಕಾಗಿರುವುದರಿಂದ ಪ್ರತಿ ದಿನ 3.25 ಕೋಟಿ ರೂಪಾಯಿಗಳನ್ನು, ವರ್ಷಕ್ಕೆ 1,187 ಕೋಟಿ ರೂಪಾಯಿಗಳಿಗೂ ಹೆಚ್ಚಿನ ಮೊತ್ತವನ್ನು ಪಾವತಿಸಬೇಕಾಗಿದೆ.

https://fb.watch/d_KmbVcq7p/u003c/strongu003eu003cbru003e

ಖಾಸಗಿಯವರಿಗೆ ಪ್ರತಿ ಲೀಟರ್ ಡೀಸೆಲ್ 88 ರೂಪಾಯಿಗೆ ಲಭಿಸಿದರೆ, ಸರ್ಕಾರದ ನಿಗಮಗಳು 113 ರೂ. ಪಾವತಿಸಬೇಕಾಗಿದೆ. ಇದು ನರೇಂದ್ರ ಮೋದಿಯವರ ಸರ್ಕಾರ ಜನ ಸಾಮಾನ್ಯರ ಸಾರಿಗೆಗೆ ಮಾಡುತ್ತಿರುವ ಅನ್ಯಾಯ. ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಈ ನಿಗಮಗಳು ಖರೀದಿಸುವ ಪ್ರತಿ ಲೀಟರ್ ಡೀಸೆಲ್ ಮೇಲೆ ಖಾಸಗಿಯವರಿಗಿಂತ 25 ರೂ. ಹೆಚ್ಚು ಸಂಗ್ರಹಿಸುತ್ತಿದೆ. ಬಲ್ಕ್ ಆಗಿ ಖರೀದಿಸುವವರು ಪ್ರತಿ ಲೀಟರ್ ಮೇಲೆ 25 ರೂ.ಗಳನ್ನು ಹೆಚ್ಚು ಪಾವತಿಸಬೇಕು ಎಂಬ ನಿಯಮದಿಂದಾಗಿ ಈ ಸಮಸ್ಯೆ ಬಂದೊದಗಿದೆ.

ರಾಜ್ಯದ ನಾಲ್ಕು ಸಾರಿಗೆ ನಿಗಮಗಳಿಂದ ನಿತ್ಯ ಸುಮಾರು 20-25 ಕೋಟಿ ರೂ. ಆದಾಯವಿದ್ದರೂ ರಾಜ್ಯ ಸರ್ಕಾರವು ಸಮರ್ಥವಾಗಿ ಸಾರಿಗೆ ವ್ಯವಸ್ಥೆಯನ್ನು ನಿಭಾಯಿಸಲು ವಿಫಲವಾದ ಕಾರಣ ಇಂದು ಇವು ನಷ್ಟದ ಹಾದಿಯಲ್ಲಿವೆ. ರಾಜ್ಯದ ಕೆಎಸ್ಆರ್ಟಿಸಿಯ 3 ನಿಗಮಗಳು ಹಾಗೂ ಬಿಎಂಟಿಸಿಯಲ್ಲಿ ಸುಮಾರು 26 ಸಾವಿರ ಬಸ್ ಗಳಿವೆ.

ಪ್ರತಿ ದಿನ ಲಕ್ಷಾಂತರ ಕಾರ್ಮಿಕರು, ವಿದ್ಯಾರ್ಥಿಗಳು, ರೈತರು ಹಾಗೂ ಜನಸಾಮಾನ್ಯರು ಸರ್ಕಾರಿ ಬಸ್ಸುಗಳಲ್ಲಿ ಓಡಾಡುತ್ತಿದ್ದಾರೆ. ಸುಮಾರು 1,30,000 ನೌಕರರಿಗೆ ಇವು ಉದ್ಯೋಗ ನೀಡಿವೆ. 2013-18 ವರೆಗಿನ ನಮ್ಮ ಸರ್ಕಾರದ ಅವಧಿಯಲ್ಲಿ ರಾಜ್ಯ ಸಾರಿಗೆಯ ಜನಸ್ನೇಹಿ ಆಡಳಿತಕ್ಕಾಗಿ ಕೇಂದ್ರ ಸರ್ಕಾರವೇ ಹಲವು ಪ್ರಶಸ್ತಿ ನೀಡಿತ್ತು.

ಇದನ್ನೂ ಓದಿ : https://vijayatimes.com/rahul-gandhi-stand-towards-nupur-sharma

ಇಡೀ ದೇಶದಲ್ಲಿಯೇ ಅತ್ಯುತ್ತಮ ಸರ್ಕಾರಿ ಸಾರಿಗೆ ಎಂದು ಗುರುತಿಸಲ್ಪಟ್ಟಿದ್ದ ರಾಜ್ಯದ ಸಾರಿಗೆ ವ್ಯವಸ್ಥೆ ಇಂದು ಸರ್ಕಾರದ ದುರಾಡಳಿತದಿಂದಾಗಿ ಅವ್ಯವಸ್ಥೆಯ ಆಗರವಾಗಿದೆ. ಬಲ್ಕ್ ಡೀಸೆಲ್ ಖರೀದಿಯ ಮೇಲೆ ರಾಜ್ಯ ಸಾರಿಗೆ ನಿಗಮಗಳಿಂದ ಹೆಚ್ಚುವರಿಯಾಗಿ 25 ರೂ. ಹಣ ವಸೂಲಿ ಮಾಡುತ್ತಿರುವ ಕೇಂದ್ರ ಸರ್ಕಾರದ ಕ್ರಮ ಖಂಡನೀಯ.

ಈ ಹಗಲು ದರೋಡೆಯನ್ನು ಕೂಡಲೇ ನಿಲ್ಲಿಸುವಂತೆ ರಾಜ್ಯ ಸರ್ಕಾರ ಮತ್ತು ಸಂಸದರು ಕೇಂದ್ರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದ್ದಾರೆ.
Tags: bjpCongressKarnatakapoliticalpolitics

Related News

63 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹುಡುಕಾಟಕ್ಕಿಳಿದ ಕಾಂಗ್ರೆಸ್ ; ಏಪ್ರಿಲ್‌ ಮೊದಲ ವಾರ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ
ರಾಜಕೀಯ

63 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹುಡುಕಾಟಕ್ಕಿಳಿದ ಕಾಂಗ್ರೆಸ್ ; ಏಪ್ರಿಲ್‌ ಮೊದಲ ವಾರ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ

April 1, 2023
ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!
ರಾಜಕೀಯ

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!

April 1, 2023
ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 31, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.