Visit Channel

ಸಿದ್ದರಾಮಯ್ಯ ವಿರುದ್ದ ಬಿಜೆಪಿ ಆಕ್ರೋಶ

ಬೆಂಗಳೂರು ಅ 29 : ರಾಜಕೀಯ ಏಳಿಗೆಗಾಗಿ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹಿಂದೂ ಧರ್ಮ(Hinduism) ಒಡೆಯುವ ಪ್ರಯತ್ನ ನಡೆಸಿದರು ಎಂದು ಕರ್ನಾಟಕ ಬಿಜೆಪಿ ಆರೋಪಿಸಿದೆ. ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ #ಲಿಂಗಾಯತವಿರೋಧಿಸಿದ್ದರಾಮಯ್ಯ ಹ್ಯಾಶ್ ಟ್ಯಾಗ್ ಬಳಿಸಿ ಆಕ್ರೋಶ ವ್ಯಕ್ತಪಡಿಸಿದೆ.

‘ಬಿ.ಎಸ್.ಯಡಿಯೂರಪ್ಪನವರು ಕುರ್ಚಿ ಉಳಿಸಿಕೊಳ್ಳುವುದಕ್ಕಾಗಿ ಮಠಾಧೀಶರನ್ನು ಮನೆಗೆ ಕರೆಸಿ ದುಡ್ಡು ಹಂಚಿದರು ಎನ್ನುವ ಮೂಲಕ ಸಿದ್ದರಾಮಯ್ಯ ಮಠಾಧೀಶರಿಗೆ ಅವಮಾನ ಮಾಡಿದ್ದಾರೆ. ಒಂದು ಸಮುದಾಯವನ್ನು ತಮ್ಮ ರಾಜಕೀಯ ಹಿತಾಸಕ್ತಿಗಾಗಿ ನಿಂದಿಸುವುದು ಹಾಗೂ ಒಡೆಯುವುದು ಸಿದ್ದರಾಮಯ್ಯ ಅವರಿಗೆ ಚಾಳಿಯಾಗಿಬಿಟ್ಟಿದೆ’ ಅಂತಾ ಬಿಜೆಪಿ ಟೀಕಿಸಿದೆ.

 ‘ಜಾತಿ ರಹಿತ, ವರ್ಗ ರಹಿತ ಸಮಾಜ ಸ್ಥಾಪನೆಯೇ ಬಿಜೆಪಿ(BJP)ಯ ಉದ್ದೇಶ. ಆದರೆ ಹಾಲಿನಂಥ ಸಮಾಜವನ್ನು ಒಡೆಯುವುದು ಜಾತಿವಾದಿ ಸಿದ್ದರಾಮಯ್ಯ(Siddaramaiah)ನವರ ಗುರಿ. ಗಡಿಗೆಯಲ್ಲಿ ತುಂಬಿರುವ ಹಾಲನ್ನು ಕೆಡಿಸುವುದಕ್ಕೆ ಒಂದು ಹನಿ ಹುಳಿ ಸಾಕಲ್ಲವೇ ? ಹಾಗೆಯೇ ಸಮಾಜ ವಿಭಜನೆಗೆ ಸಿದ್ದರಾಮಯ್ಯ ಅವರ ದ್ವೇಷದ ನುಡಿ ಸಾಕು’ ಅಂತಾ ಬಿಜೆಪಿ ಕುಟುಕಿದೆ.

‘ತಮ್ಮ ರಾಜಕೀಯ ಏಳಿಗೆಗಾಗಿ ಸಿದ್ದರಾಮಯ್ಯ ಹಿಂದೂ ಧರ್ಮ ಒಡೆಯುವ ಪ್ರಯತ್ನ ನಡೆಸಿದರು. ಲಿಂಗಾಯತ ಪ್ರತ್ಯೇಕ ಧರ್ಮ(Lingayat Community)ದ ಅಸ್ತ್ರ ಪ್ರಯೋಗಿಸಿ ಎಂ.ಬಿ.ಪಾಟೀಲರನ್ನು ಬಲಿಪಶುವಾಗಿಸಿದರು. ಸಿದ್ದರಾಮಯ್ಯನವರೇ ವೀರಶೈವ- ಲಿಂಗಾಯಿತ ಸಮುದಾಯ ಬಿಜೆಪಿ ಜೊತೆ ನಿಲ್ಲುವುದನ್ನು ತಡೆಯುವುದಕ್ಕಾಗಿ ಧರ್ಮ ವಿಭಜನೆಗೆ ಮುಂದಾಗಿದ್ದಲ್ಲವೇ?’ ಅಂತಾ ಬಿಜೆಪಿ ಪ್ರಶ್ನಿಸಿದೆ.

‘ವೀರಶೈವ- ಲಿಂಗಾಯತ ಸಮುದಾ(Veerashaiva Lingayat community)ಯದ ಸ್ವಾಮೀಜಿಗಳ ಬಗ್ಗೆ ಸಿದ್ದರಾಮಯ್ಯ ಎಂದಾದರೂ ಗೌರವ ವ್ಯಕ್ತಪಡಿಸಿದ ಉದಾಹರಣೆ ಇದೆಯೇ? ಧರ್ಮ ವಿಭಜನೆಯ ಪ್ರಯತ್ನ ಮಾಡುವಾಗ ‘ಲಿಂಗಾಯತ ಸ್ವಾಮೀಜಿಗಳು ನೀಡಿದ ಮನವಿ’ ಪ್ರಕಾರ ಪ್ರತ್ಯೇಕ ಧರ್ಮದ ಪ್ರಸ್ತಾಪವನ್ನು ಕೇಂದ್ರಕ್ಕೆ ಕಳುಹಿಸಿದ್ದೆ ಎಂದು ಜಾರಿಕೊಂಡಿದ್ದು ನೆನಪಿಲ್ಲವೇ?’ ಅಂತಾ ಬಿಜೆಪಿ ಟ್ವೀಟ್ ಮಾಡಿದೆ.

‘ಸಿಎಂ ಬಸವರಾಜ್ ಬೊಮ್ಮಾಯಿ ಜಾತಿಯವರು ಕಂಬಳಿ ನೇಯ್ತಾರಾ? ಕಾಗೇರಿ ಜಾತಿಯವರು ಕುರಿ ಕಾಯ್ತಾರಾ? ಎಂದು ಪ್ರಶ್ನಿಸುವ ಮೂಲಕ ಸಮಾಜವನ್ನು ಯಾವ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದೀರಿ ಸಿದ್ದರಾಮಯ್ಯ? ಹಾಲಿನಂಥ ಸಮಾಜದಲ್ಲಿ ಜಾತಿ ಹುಳಿ ಹಿಂಡಿ ಒಡೆಯುವುದೇ  ನಿಮ್ಮ ರಾಜಕೀಯ ಧರ್ಮ. ಸಮಾಜ ಒಟ್ಟಾಗಿದ್ದರೆ ಈ ಮಜವಾದಿಗೆ ಸಂಕಟವಾಗುತ್ತದೆ’ ಅಂತಾ ಬಿಜೆಪಿ ವಾಗ್ದಾಳಿ ನಡೆಸಿದೆ.

Latest News

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.

JK
ದೇಶ-ವಿದೇಶ

ಜಮ್ಮು-ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರನ್ನು ಹತ್ಯೆಗೈದ ಭಯೋತ್ಪಾದಕರು!

ಕಾಶ್ಮೀರಿ ಪಂಡಿತರೊಬ್ಬರನ್ನು(Kashmiri Pandits) ಗುಂಡಿಕ್ಕಿ ಕೊಂದು ಆತನ ಸಹೋದರನನ್ನು ಗಾಯಗೊಳಿಸಿದ್ದಾರೆ. ಸಂತ್ರಸ್ತ ಸಹೋದರನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.