Visit Channel

ಪ್ರತಿ ಪೈಸೆಗೂ ಶ್ವೇತ ಪತ್ರ ಹೊರಡಿಸಿ, `ಶಿಕ್ಷಣ ಸಚಿವ’ರಿಗೆ ಸಿದ್ದರಾಮಯ್ಯ ಸವಾಲು

BJP

ಶಿಕ್ಷಣ ಸಚಿವ(Education Minister) ಬಿ.ಸಿ.ನಾಗೇಶ್(BC Nagesh) ಅವರೇ, ನಿಮಗೆ ವಿದ್ಯಾರ್ಥಿಗಳ ಬಗ್ಗೆ ಕಾಳಜಿ, ಬದ್ಧತೆ ಇದ್ದರೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಲ್ಲಿ 2008 ರಿಂದ ಈವರೆಗೆ ಏನೇನಾಗಿದೆ? ಯಾವ ಸಾಧನೆಗಳಾಗಿವೆ? ಹಾಗೂ ಈ 14 ವರ್ಷಗಳಲ್ಲಿ ಸದರಿ ಇಲಾಖೆಯಲ್ಲಿ ಖರ್ಚು ಮಾಡಿದ ಪ್ರತಿ ಪೈಸೆಗೂ ಸಂಬಂಧಿಸಿದಂತೆ ಶ್ವೇತ ಪತ್ರ ಹೊರಡಿಸಿ. ಸರ್ಕಾರವೆ ಹೈಕೋರ್ಟಿಗೆ(Highcourt) ಸಲ್ಲಿಸಿರುವ ವರದಿ ಪ್ರಕಾರ ಸುಮಾರು 10.12 ಲಕ್ಷ ಮಕ್ಕಳು ಶಾಲೆಯಿಂದ ಹೊರಗೆ ಇದ್ದಾರೆ.

Congress

ಈ ಮಕ್ಕಳ ಭವಿಷ್ಯ ಹಾಳಾದರೆ ಅದಕ್ಕೆ ರಾಜ್ಯ ಸರ್ಕಾರದ ಬೇಜವಾಬ್ದಾರಿ ಮತ್ತು ನಿಮ್ಮ ಉಡಾಫೆತನವೇ ಕಾರಣವಾಗಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಹೇಳಿದ್ದಾರೆ.
ಈ ಕುರಿತು ಟ್ವೀಟ್‌(Tweet) ಮಾಡಿರುವ ಅವರು, ರಾಜ್ಯ ಸರ್ಕಾರ ಎಷ್ಟು ಜನ ಶಿಕ್ಷಕರನ್ನು ನೇಮಕ ಮಾಡಿದೆ? ಎಷ್ಟು ಜನ ಮಕ್ಕಳಿಗೆ ಸೈಕಲ್ ನೀಡಿದೆ? ಎಷ್ಟು ಶಾಲೆಗಳನ್ನು, ವಸತಿ ಶಾಲೆಗಳನ್ನು ನಿರ್ಮಿಸಿದೆ? ಎಂಬ ಲೆಕ್ಕವನ್ನು ರಾಜ್ಯದ ಜನರ ಮುಂದಿಡಿ. ನಾವು ಗುಣಮಟ್ಟದ ಶಿಕ್ಷಣಕ್ಕಾಗಿಯೆ 1400 ಕ್ಕೂ ಹೆಚ್ಚು ಹಾಸ್ಟೆಲ್ಗಳು, ಆಶ್ರಮ, ಶಾಲೆಗಳು ಮತ್ತು ವಸತಿ ಶಾಲೆಗಳನ್ನು ನಿರ್ಮಿಸಿದ್ದೆವು.

ನನಗಿರುವ ಮಾಹಿತಿ ಪ್ರಕಾರ 71,279 ಕೊಠಡಿಗಳ ನವೀಕರಣ, ಪುನರ್ ನವೀಕರಣ ಕಾರ್ಯಗಳನ್ನು ಪೂರ್ಣಗೊಳಿಸಿದ್ದೇವೆ ನಾವು ಕೈಗೊಂಡ ಕ್ರಮಗಳಿಂದಾಗಿ ಭಾರತ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಮತ್ತು ಎನ್ಸಿಇಆರ್ಟಿಯು ರಾಜ್ಯದ ಶಾಲೆಗಳಲ್ಲಿ 3,5,8 ನೇ ತರಗತಿಗಳಲ್ಲಿ ಕಲಿಯುತ್ತಿದ್ದ 1.29 ಲಕ್ಷ ವಿದ್ಯಾರ್ಥಿಗಳಿಗೆ ನಡೆಸಿದ ರಾಷ್ಟ್ರೀಯ ಸಾಧನೆ ಸಮೀಕ್ಷೆಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿತ್ತು. ನಿಮ್ಮ ಸರ್ಕಾರದ ಸಾಧನೆ ಏನು.? ಎಂದು ಪ್ರಶ್ನಿಸಿದ್ದಾರೆ.

congress


ಮಕ್ಕಳ ಕಲ್ಯಾಣಕ್ಕಾಗಿ ಇರುವ ಹಿಂದಿನ ಎಲ್ಲಾ ಯೋಜನೆಗಳನ್ನು ಮುಂದುವರೆಸಬೇಕು, ಶೂ, ಸಾಕ್ಸ್, ಸೈಕಲ್, ಹಾಲು, ಸಮವಸ್ತ್ರ, ಪುಸ್ತಕ, ವ್ಯವಸ್ಥಿತ ಕೊಠಡಿಗಳನ್ನು ಕೂಡಲೆ ಒದಗಿಸಬೇಕು, ಶಾಲಾ ಕೊಠಡಿಗಳ ದುರಸ್ತಿ ಮತ್ತು ಖಾಲಿಯಿರುವ ಶಿಕ್ಷಕ ಹುದ್ದೆಗಳ ಭರ್ತಿಗೆ ಶೀಘ್ರ ಕ್ರಮವಹಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.