Bangalore: ಸಹಕಾರ ಕ್ಷೇತ್ರ ರಾಜ್ಯ ವ್ಯಾಪ್ತಿಗೆ ಸೇರಿದ್ದು. ಆದರೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಕೇಂದ್ರದಲ್ಲಿ ಸಹಕಾರ ಇಲಾಖೆ (Cooperation Department) ಆರಂಭಿಸಿದರು. ಇದಕ್ಕೆ ಅಮಿತ್ ಶಾ (Amit Shah ) ಅವರೇ ಸಚಿವರು. ಇದು ಕೇಂದ್ರದ ವ್ಯಾಪ್ತಿಗೆ ಬರುವ ವಿಷಯ ಅಲ್ಲ. ಇದರಿಂದಾಗಿ ನಮಗೆ ನಬಾರ್ಡ್ (NABARD) ನಿಂದ ಬರುವ ರೈತರ (Farmers) ಪಾಲಿನ ನೆರವು ಕಡಿತಗೊಂಡಿದೆ. ಒಮ್ಮೆಲೇ 58% ನಬಾರ್ಡ್ ನೆರವು ಕಡಿತಗೊಂಡಿದೆ. ಇದು ನಮ್ಮ ರೈತರಿಗೆ ಆದ ಬಹಳ ದೊಡ್ಡ ಅನ್ಯಾಯ. ರೈತರ ಬಗ್ಗೆ ಬಿಜೆಪಿ (BJP) ಭಾಷಣ ಮಾತ್ರ ಚೆನ್ನಾಗಿ ಮಾಡುತ್ತದೆ. ಬರೀ ಭಾಷಣದಿಂದ ರೈತರ ಬದುಕನ್ನು ಉದ್ಧಾರ ಮಾಡಲು ಸಾಧ್ಯವಿಲ್ಲ. ಆದ್ದರಿಂದ ನಬಾರ್ಡ್ (NABARD) ನಿಂದ ನಮಗೆ ಆದ ಅನ್ಯಾಯವನ್ನು ಪ್ರತಿಯೊಬ್ಬರು ಪ್ರತಿಭಟಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಸಹಕಾರ (Karnataka State Cooperation) ಮಹಾಮಂಡಳ, ಕರ್ನಾಟಕ ರಾಜ್ಯ (Karnataka State) ಅಪೆಕ್ಸ್ ಬ್ಯಾಂಕ್ ಆಯೋಜಿಸಿದ್ದ 71ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಮಾತನಾಡಿದ ಅವರು, ಪಂಚಾಯತಿ, ಸೊಸೈಟಿ, ಶಾಲೆ (Panchayat, Society, School) ಈ ಮೂರೂ ಪ್ರತೀ ಗ್ರಾಮಗಳಲ್ಲಿ ಇರಲೇಬೇಕು. ಆಗಲೇ ಗ್ರಾಮಗಳ ಪ್ರಗತಿ ಸಾಧ್ಯ ಎನ್ನುವುದು ಮಹಾತ್ಮಗಾಂಧಿಯವರ ಆಶಯವಾಗಿತ್ತು. ರಾಜೀವ್ ಗಾಂಧಿಯವರು ಸಂವಿಧಾನಕ್ಕೆ ತಿದ್ದುಪಡಿ ತಂದು ಅಧಿಕಾರ ವಿಕೇಂದ್ರೀಕರಣ ಜಾರಿ ಮಾಡಿ ಮಹಿಳೆಯರು, ಹಿಂದುಳಿದವರು, ದಲಿತರ ಕೈಗೆ ಅಧಿಕಾರ ಸಿಗುವಂತೆ ಮಾಡಿದರು. ಸಮಾನತೆಯ ಸಮಾಜ ನಿರ್ಮಾಣ ಆಗಬೇಕು ಎನ್ನುವ ಆಶಯದಿಂದ ಸಮಾಜದ ಎಲ್ಲಾ ವರ್ಗದವರಿಗೆ ಆರ್ಥಿಕ ಶಕ್ತಿ (Economic power) ನೀಡುವ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ರೂಪಿಸಿ ಜಾರಿ (Government form and implement) ಮಾಡಿದೆ ಎಂದರು.
2013 ರಲ್ಲಿ ₹8,165 ಕೋಟಿ ರೈತರ ಸಾಲವನ್ನು (Farmers’ loans) ನಾನು ಮೊದಲು ಬಾರಿ ಮುಖ್ಯಮಂತ್ರಿಯಾಗಿ (Chief Minister) ಮನ್ನಾ ಮಾಡಿದ್ದೆ. ಇದರಿಂದ ಸಹಸ್ರಾರು ರೈತರ ಬದುಕಿಗೆ ನೆರವಾಯಿತು. ಸಹಕಾರ ಮಹಾಮಂಡಳದ ಕಟ್ಟಡಗಳ ನಿರ್ಮಾಣಕ್ಕೆ ಸರ್ಕಾರದ ನೆರವು ನೀಡಬೇಕು ಎನ್ನುವ ಬೇಡಿಕೆ ಇದೆ. ಈ ಬೇಡಿಕೆಯನ್ನೂ ಈಡೇರಿಸಲಾಗುವುದು. ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಹೆಚ್ಚೆಚ್ಚು ಸಹಕಾರಿ ಚಳವಳಿಯಲ್ಲಿ ತೊಡಗಿಸಿಕೊಳ್ಳಬೇಕು. ನಾನು ಮುಖ್ಯಮಂತ್ರಿಯಾಗಿದ್ದಾಗ ಸಹಕಾರ ಸಂಘಗಳಿಗೆ ಈ ಸಮುದಾಯದ ಯುವಕ / ಯುವತಿಯರನ್ನು (Young men/women) ಉಚಿತವಾಗಿ ಸದಸ್ಯರನ್ನಾಗಿ ಮಾಡಿದ್ದೆ. ಈಗಲೂ ಇದು ಮುಂದುವರೆಯಬೇಕು. ಹಾಲು ಉತ್ಪಾದಕ ಸಹಕಾರ ಸಂಘಗಳಿಗೆ ಹೆಚ್ಚು ಪ್ರೋತ್ಸಾಹ ನೀಡಬೇಕು ಮತ್ತು ಇವರಿಂದ ಹೆಚ್ಚೆಚ್ಚು ಹಾಲನ್ನು ಖರೀದಿಸಬೇಕು. ಸಹಕಾರ ಸಂಘಗಳ ಹಾಲಿಗೆ ಮಾರುಕಟ್ಟೆ ವಿಸ್ತರಿಸಬೇಕು. ಚನ್ನಪಟ್ಟಣ ತಾಲ್ಲೂಕೊಂದರಲ್ಲೇ (Channapatnam Taluk) 3 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಲೀ ಹಾಲಿಗೆ 31 ರೂ ಅಂದರೆ 3 ಲಕ್ಷ ಲೀಟರ್ ಗೆ ಕೋಟಿ ರೂಪಾಯಿ ಆಗ್ತದೆ. ಇದು ಆರ್ಥಿಕತೆಗೂ ಹೆಚ್ಚಿನ ಕೊಡುಗೆ ನೀಡಿದಂತಾಗುತ್ತದೆ. ಹಾಲು ಉತ್ಪಾದಕರಿಗೆ ಅನುಕೂಲ ಮಾಡುವ ಉದ್ದೇಶದಿಂದಲೇ ನಮ್ಮ ಸರ್ಕಾರ ಕ್ಷೀರಭಾಗ್ಯ ಆರಂಭಿಸಿತು. ಲೀಟರ್ ಹಾಲಿಗೆ 5 ರೂ ಪ್ರೋತ್ಸಾಹಧನ ನೀಡುವುದನ್ನು ನಮ್ಮ ಅವಧಿಯಲ್ಲಿ ಆರಂಭಿಸಲಾಯಿತು. ರೈತರ ಕೈಯಲ್ಲೇ ಹಾಲು ಉತ್ಪಾದಕ ಸಂಘಗಳು ಇರಬೇಕು ಎನ್ನುವ ಉದ್ದೇಶದಿಂದ ಡೈರಿಗಳನ್ನು ರೈತರಿಗೇ ನೀಡುವ ತೀರ್ಮಾನ ಮಾಡಿದೆವು. ಈ ಅಧಿಕಾರ ವಿಕೇಂದ್ರೀಕರಣದಿಂದ ಗ್ರಾಮೀಣ ಆರ್ಥಿಕತೆ ಗಟ್ಟಿಯಾಯಿತು. ಇದೇ ಮಹಾತ್ಮಗಾಂಧಿಯವರ ಗ್ರಾಮ ಸ್ವರಾಜ್ಯದ ಆಶಯವೂ ಆಗಿದೆ ಎಂದು ಹೇಳಿದರು.