Visit Channel

ಹಣ ಬೇಡ, ನ್ಯಾಯ ಕೊಡಿ ಎಂದು ನೊಂದ ಕುಟುಂಬದವರು ಕೇಳಿದ್ದಾರೆ ಅಷ್ಟೇ : ಸಿದ್ದರಾಮಯ್ಯ

siddaramaiah

ಗಲಭೆಯಲ್ಲಿ ಗಾಯಗೊಂಡವರ ಕುಟುಂಬಕ್ಕೆ ವೈಯಕ್ತಿಕ ಪರಿಹಾರ ರೂಪದಲ್ಲಿ ಒಂದಷ್ಟು ಹಣ ನೀಡಿದ್ದೆ. ಹಣ ಬೇಡ, ನ್ಯಾಯ ಕೊಡಿ ಎಂದು ನೊಂದ ಕುಟುಂಬದವರು ಕೇಳಿದ್ದಾರೆ. ಅವರ ನೋವನ್ನು ಅರ್ಥಮಾಡಿಕೊಳ್ಳಬಲ್ಲೆ.

ನಿಷ್ಪಕ್ಷಪಾತ ತನಿಖೆ ನಡೆಸಿ ನೊಂದ ಕುಟುಂಬಗಳಿಗೆ ನ್ಯಾಯ ಒದಗಿಸುವುದು ರಾಜ್ಯ ಸರ್ಕಾರದ(State Government) ಕರ್ತವ್ಯವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಹೇಳಿದ್ದಾರೆ.

Siddaramaiah clarify about keruru incident-Congress


ಬಾಗಲಕೋಟೆ(Bagalkot) ಜಿಲ್ಲೆಯ ಕೆರೂರು ಪಟ್ಟಣದಲ್ಲಿ ನಡೆದ ಕೋಮುಗಲಭೆಯಲ್ಲಿ ಗಾಯಗೊಂಡಿರುವ ಕುಟುಂಬಗಳಿಗೆ ಪರಿಹಾರ ನೀಡಿರುವ ಕುರಿತು ಟ್ವೀಟ್(Tweet) ಮಾಡಿರುವ ಅವರು, ರಾಜ್ಯದಲ್ಲಿನ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕೆಟ್ಟುಹೋಗುತ್ತಿದ್ದು, ಅನ್ಯಾಯ-ದೌರ್ಜನ್ಯಗಳಿಗೆ ಬಲಿಯಾಗಿರುವ ಜನರು ಪೊಲೀಸರ ನಿಷ್ಕ್ರೀಯತೆಯಿಂದಾಗಿ ಹತಾಶರಾಗಿದ್ದಾರೆ.

ಅಸಮರ್ಥ ಗೃಹಸಚಿವರ ಬೇಜವಾಬ್ದಾರಿ ಹೇಳಿಕೆಗಳಿಂದಾಗಿ ಪೊಲೀಸ್ ಇಲಾಖೆ ನೈತಿಕ ಸ್ಥೈರ್ಯವನ್ನು ಕಳೆದುಕೊಂಡಿದೆ.

ಉದ್ರಿಕ್ತ ಸ್ಥಿತಿಯಲ್ಲಿ ಭೇಟಿ ನೀಡುವುದು ಸೂಕ್ತ ಅಲ್ಲವೆಂದು ತಿಳಿದು ಕೆಲವು ದಿನಗಳ ನಂತರ ಇಂದು ಬಂದು ಎರಡೂ ಗುಂಪಿನವರನ್ನು ಭೇಟಿ ಮಾಡಿದೆ. ಇಂತಹ ಘಟನೆಗಳಲ್ಲಿ ಅನವಶ್ಯಕವಾಗಿ ಪ್ರಚೋದನೆ ನೀಡಿ ಶಾಂತಿ-ಸೌಹಾರ್ದತೆ ಕೆಡಿಸುವ ಕೆಲಸವನ್ನು ಯಾರೂ ಮಾಡಬಾರದು.

https://vijayatimes.com/state-congress-strikes-bjp-govt/

ಬಾಗಲಕೋಟೆಯ ಕೆರೂರು ಪಟ್ಟಣದಲ್ಲಿ ಇತ್ತೀಚೆಗೆ ನಡೆದಿದ್ದ ಗಲಭೆಯಲ್ಲಿ ಗಾಯಗೊಂಡವರು ಮತ್ತು ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದೆ. ಘಟನೆಯ ಸುದ್ದಿ ಗೊತ್ತಾದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠರ ಜೊತೆ ಮಾತನಾಡಿ ಗಲಭೆಕೋರರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕೆಂದು ತಿಳಿಸಿದ್ದೆ ಎಂದು ಹೇಳಿದ್ದಾರೆ.

Siddaramaiah clarify about keruru incident

ಇನ್ನು ವೇಳೆ ಬಾದಾಮಿ ವಿಧಾನಸಭೆ ಕ್ಷೇತ್ರದ ಗೋವಿನಕೊಪ್ಪ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಮೃತರಾದ ದೇವಕ್ಕ, ಬಸವರಾಜು ಮೊರಬದ ಅವರ ನಿವಾಸಕ್ಕೆ ಭೇಟಿ ನೀಡಿ, ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿ, ವೈಯಕ್ತಿಕ ಪರಿಹಾರವಾಗಿ 50 ಸಾವಿರ ರೂ. ನೀಡಿದರು.

ಇದಕ್ಕೂ ಮುನ್ನ ಬಾಗಲಕೋಟೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ(Congress Committe) ಆಯೋಜಿಸಿದ್ದ ಚಿಂತನಾ ಶಿಬಿರವನ್ನು ಉದ್ಘಾಟಿಸಿದ್ದರು. ಈ ವೇಳೆ ಪಕ್ಷದ ಜಿಲ್ಲಾ ಅಧ್ಯಕ್ಷ ನಂಜಯ್ಯನ ಮಠ, ಮಾಜಿ ಸಚಿವರಾದ ಎಚ್.ವೈ.ಮೇಟಿ, ಅಜಯಕುಮಾರ್ ಸರನಾಯಕ್, ಉಮಾಶ್ರೀ, ಪ್ರಕಾಶ್ ಹುಕ್ಕೇರಿ,

ತಿಮ್ಮಾಪುರ, ಶಾಸಕ ಆನಂದ ನ್ಯಾಮಗೌಡ, ಮಾಜಿ ಶಾಸಕರಾದ ವಿಜಾಯಾನಂದ ಕಾಶಪ್ಪನವರ್, ಜೆ.ಟಿ. ಪಾಟೀಲ್ ಹಾಜರಿದ್ದರು.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.