ಕೋಲಾರದಿಂದಲೇ ಸ್ಪರ್ಧಿಸಲು ಸಿದ್ದರಾಮಯ್ಯ ಪ್ಲ್ಯಾನ್..? ಕ್ಷೇತ್ರದಾದ್ಯಂತ ಸಂಚಾರ

ಕೋಲಾರ : ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ ವಿಧಾನಸಭಾ ಕ್ಷೇತ್ರದಿಂದಲೇ ಸ್ಪರ್ಧಿಸಲು ಪ್ಲ್ಯಾನ್‌ (Siddaramaiah contest from Kolar) ರೂಪಿಸಿದ್ದಾರೆ ಎನ್ನಲಾಗುತ್ತಿದೆ.

ಅದರ ಭಾಗವಾಗಿ ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಅನೇಕ ಗ್ರಾಮಗಳಿಗೆ ಸಿದ್ದರಾಮಯ್ಯ ಭೇಟಿ ನೀಡುತ್ತಿದ್ದಾರೆ.

ಸಿದ್ದರಾಮಯ್ಯ

ಮಾಜಿ ಕೇಂದ್ರ ಸಚಿವ ಮುನಿಯಪ್ಪನವರ ಕುಟುಂಬದ ಮುನಿಸಿನ (Siddaramaiah contest from Kolar) ನಡುವೆಯೂ ಸಿದ್ದರಾಮಯ್ಯ ಕೋಲಾರಕ್ಕೆ ಭೇಟಿ ನೀಡಿ ಅನೇಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ.

ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮಾಜಿ ಸಚಿವ ಕೃಷ್ಣಭೈರೇಗೌಡ, ಶಾಸಕರಾದ ನಂಜೇಗೌಡ, ಶ್ರೀನಿವಾಸಗೌಡ, ಶರತ್ ಬಚ್ಚೇಗೌಡ, ಅನಿಲ್ ಕುಮಾರ್,

ನಜೀರ್ ಅಹಮದ್, ಮಾಜಿ ಶಾಸಕರಾದ ಡಾ. ಸುಧಾಕರ್ ಮತ್ತಿತರ ನಾಯಕರು ಈ ವೇಳೆ ಸಿದ್ದರಾಮಯ್ಯನವರಿಗೆ ಸಾಥ್‌ನೀಡಿದ್ದಾರೆ.

https://vijayatimes.com/bbmp-quicks-up/

ಕೋಲಾರ ಕ್ಷೇತ್ರದ ಭೇಟಿಯ ವೇಳೆ, ಅವಿಭಜಿತ ಕೋಲಾರ ಜಿಲ್ಲೆಯ ಹಿರಿಯ ನಾಯಕರಾಗಿದ್ದ ದಿವಂಗತ ಬೈರೇಗೌಡರ ಸ್ವಗ್ರಾಮ ಕೋಲಾರ ತಾಲೂಕಿನ ಗರುಡ ಪಾಳ್ಯಕ್ಕೆ ಭೇಟಿ ನೀಡಿ ಬೈರೇಗೌಡರ ಸಮಾಧಿಗೆ ಸಿದ್ದರಾಮಯ್ಯ ಪುಷ್ಪ ನಮನ ಸಲ್ಲಿಸಿದರು.

ನಂತರ ವೇಮಗಲ್ ಸಮೀಪದ ಸೀತಿ ಬೆಟ್ಟಕ್ಕೆ ತೆರಳಿ ಶ್ರೀ ಬೈರವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು.

ನಂತರ ಕೆ.ಸಿ.ವ್ಯಾಲಿ ಯೋಜನೆಯ ನೀರಿನಿಂದ ಭರ್ತಿಯಾಗಿರುವ ಕೋಲಾರ ತಾಲೂಕಿನ ನರಸಾಪುರ ಕೆರೆಗೆ ಭೇಟಿನೀಡಿದರು.

ಕೋಲಾರ ನಗರದ ಕನಕ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ, ಕ್ಲಾಕ್ ಟವರ್ ನಲ್ಲಿರುವ ದರ್ಗಾಕ್ಕೆ ಭೇಟಿನೀಡಿ ಪ್ರಾರ್ಥನೆ ಸಲ್ಲಿಸಿ, ಮುಸ್ಲಿಂ ಮುಖಂಡರೊಂದಿಗೆ ಸಭೆ ನಡೆಸಿದರು.

https://vijayatimes.com/bbmp-quicks-up/

ಬಳಿಕ ಕೋಲಾರ ನಗರದಲ್ಲಿರುವ ಮಹರ್ಷಿ ವಾಲ್ಮೀಕಿ, ಸರ್ವಜ್ಞ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಮಹಾತ್ಮ ಗಾಂಧಿ, ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿ, ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದರು.

ತದನಂತರ ಕೋಲಾರದ ಇತಿಹಾಸ ಪ್ರಸಿದ್ಧ ಶ್ರೀ ಕೋಲಾರಮ್ಮ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ, ಬಳಿಕ ಮೆಥೋಡಿಸ್ಟ್ ಚರ್ಚ್ ಗೆ ಭೇಟಿನೀಡಿ ಕ್ರಿಶ್ಚಿಯನ್‌ಸಮುದಾಯದ ಮುಖಂಡರೊಂದಿಗೆ ಚರ್ಚೆ ನಡೆಸಿದರು.

https://youtu.be/jXJ3CM9tGRg

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಕ್ರಿಶ್ಚಿಯನ್‌ ಸಮುದಾಯಕ್ಕೆ ಸೂಕ್ತ ಭದ್ರತೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಹೀಗೆ ಸಿದ್ದರಾಮಯ್ಯ ತಮ್ಮ ಕೋಲಾರ ಪ್ರವಾಸದ ವೇಳೆ ಮುಂಬರುವ ವಿಧಾನಸಭಾ ಚುನಾವಣೆಗೆ ಬೇಕಾದ ಸಿದ್ದತೆಗಳಿಗೆ ಪರೋಕ್ಷವಾಗಿ ಚಾಲನೆ ನೀಡಿದರು. ಹೀಗಾಗಿ ಸಿದ್ದರಾಮಯ್ಯ ಕೋಲಾರದಿಂದಲೇ ಸ್ಪರ್ಧಿಸಲು ಎಲ್ಲಾ ರೀತಿಯ ಸಿದ್ದತೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

-ಮಹೇಶ್.ಪಿ.ಎಚ್

Exit mobile version