ಮೋದಿ ಕೊಡುಗೆ ಎನ್ನಲು ಅವರು ಸ್ವಂತ ಮನೆಯಿಂದ ಗಿಫ್ಟು ಕೊಟ್ಟಿದ್ದಾರಾ? : ಸಿದ್ದು!

Politics

2014 ರಿಂದ ಇದುವರೆಗೆ 8 ವರ್ಷಗಳಲ್ಲಿ ರಾಜ್ಯಕ್ಕೆ 1.29 ಲಕ್ಷ ಕೋಟಿ(Crore) ರೂಗಳನ್ನು ಮೋದಿ(Narendra Modi) ಅವರು “ಕೊಡುಗೆ” ನೀಡಿದ್ದಾರೆ ಎಂದು ಪ್ರತಿ ನಿತ್ಯ ಜಾಹಿರಾತು ನೀಡಲಾಗುತ್ತಿದೆ.

ಇದನ್ನು ಕೊಡುಗೆ ಎನ್ನಲು ಮೋದಿಯವರೊ ಇಲ್ಲ ಬಿಜೆಪಿಯವರೊ(BJP) ಅವರ ಸ್ವಂತ ಮನೆಯಿಂದ ತೆಗೆದು ಗಿಫ್ಟು ಕೊಟ್ಟಿದ್ದಾರಾ? ಎಂದು ವಿಪಕ್ಷ ನಾಯಕ(Opposition Leader) ಸಿದ್ದರಾಮಯ್ಯ(Siddaramaiah) ಪ್ರಶ್ನಿಸಿದ್ದಾರೆ.

ಮನಮೋಹನಸಿಂಗ್(Manmohan Singh) ಅವರು ಪ್ರಧಾನಿಗಳಾಗಿದ್ದಾಗ ನಮ್ಮ ರಾಜ್ಯದಿಂದ ಪೆಟ್ರೋಲ್(Petrol), ಡೀಸೆಲ್(Diesel) ಮೇಲಿನ ತೆರಿಗೆಯಿಂದ 2012 ಮತ್ತು 2013ನೇ ಸಾಲಿನಲ್ಲಿ 3,500 ಕೋಟಿ ರೂಪಾಯಿ ಮಾತ್ರ ಸಂಗ್ರಹಿಸಿದ್ದರು.

ಕಳೆದ ವರ್ಷ ಕೋವಿಡ್ ಸಂದರ್ಭದಲ್ಲೂ ಕೂಡಾ ಸುಮಾರು ರೂ.3 ಲಕ್ಷ ಕೋಟಿ ತೆರಿಗೆಯನ್ನು(Tax) ಕೇಂದ್ರ ಸರ್ಕಾರ(Central Government) ನಮ್ಮ ರಾಜ್ಯದಿಂದ ಸಂಗ್ರಹಿಸಿದೆ. ಇದರಲ್ಲಿ ನಮ್ಮ ರಾಜ್ಯಕ್ಕೆ ಕೊವಿಡ್ ಕಷ್ಟಕಾಲದಲ್ಲಿ ನೆರವಿನ ರೂಪದಲ್ಲಿ ಸಿಕ್ಕ ಹಣವೆಷ್ಟು? ಜಿ.ಎಸ್.ಟಿ(GST) ಯಲ್ಲಿ 2022 ರ ಏಪ್ರಿಲ್ ತಿಂಗಳ ಉದಾಹರಣೆಯೊಂದನ್ನೆ ತೆಗೆದುಕೊಂಡರೆ ಮಹಾರಾಷ್ಟ್ರ ರೂ.27.5 ಸಾವಿರ ಕೋಟಿ, ಕರ್ನಾಟಕ ರೂ.11.82 ಸಾವಿರ ಕೋಟಿ ಪಾವತಿಸಿದೆ. ಈ ವಿಚಾರದಲ್ಲೂ ಸರಿಸುಮಾರು ಶೇ.50 ರಷ್ಟು ತೆರಿಗೆಯನ್ನು ದಕ್ಷಿಣದ 6 ರಾಜ್ಯಗಳು ಪಾವತಿಸುತ್ತಿವೆ.

2018-19 ರ ಮಾಹಿತಿಯ ಪ್ರಕಾರ ದೇಶದ ಬೊಕ್ಕಸಕ್ಕೆ ನೇರ ತೆರಿಗೆಯ ಮೂಲಕ ರೂ.11.37 ಲಕ್ಷ ಕೋಟಿ ಸಂದಾಯವಾಗಿದೆ. ಮಹಾರಾಷ್ಟ್ರವೂ ಸೇರಿದಂತೆ ದಕ್ಷಿಣದ 6 ರಾಜ್ಯಗಳು ದೇಶದ ಬೊಕ್ಕಸಕ್ಕೆ 6.96 ಲಕ್ಷ ಕೋಟಿ ರೂಗಳನ್ನು ಪಾವತಿಸಿದ್ದವು. ಇದು ಒಟ್ಟು ನೇರ ತೆರಿಗೆಯಲ್ಲಿ ಶೇ.62 ರಷ್ಟಾಗುತ್ತದೆ. ಇನ್ನು ಗುಜರಾತ್ ಮಾಡೆಲ್ ಎಂದು ಸುಳ್ಳು ಹೇಳಿಕೊಂಡು ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಅವರ ತವರು ರಾಜ್ಯವಾದ ಗುಜರಾತ್ 2018-19 ರಲ್ಲಿ ಪಾವತಿಸಿದ್ದು, ಕೇವಲ 49 ಸಾವಿರ ಕೋಟಿ ಮಾತ್ರ. ನಮ್ಮ ರಾಜ್ಯದಿಂದ 1.20 ಲಕ್ಷ ಕೋಟಿ ರೂಪಾಯಿಯನ್ನು ಕೇಂದ್ರವು ನೇರ ತೆರಿಗೆಯ ಮೂಲಕ ಸಂಗ್ರಹಿಸಿತ್ತು. 
ಪ್ರಸ್ತುತ ಕರ್ನಾಟಕವು 1.40 ಲಕ್ಷ ಕೋಟಿಗಳಷ್ಟು ನೇರ ತೆರಿಗೆಯನ್ನು ಪಾವತಿಸುತ್ತಿದೆ. ನನ್ನ ಬಳಿಯಿರುವ ಆದಾಯ ತೆರಿಗೆ ಇಲಾಖೆಯ 2018-19 ರ ಅಧಿಕೃತ ದಾಖಲೆ ಪ್ರಕಾರ ಮಹಾರಾಷ್ಟ್ರ(Maharashtra) ರಾಜ್ಯವು ರೂ. 4.25 ಲಕ್ಷ ಕೋಟಿ ನೇರ ತೆರಿಗೆಯ ರೂಪದಲ್ಲಿ ಪಾವತಿಸಿದೆ. ದೆಹಲಿಯು ರೂ. 1.66 ಲಕ್ಷ ಕೋಟಿ ಪಾವತಿಸಿತ್ತು. ಇನ್ನು ಕರ್ನಾಟಕವು ದೇಶದ ಆರ್ಥಿಕತೆಗೆ ಅತಿದೊಡ್ಡ ಕೊಡುಗೆ ನೀಡುತ್ತಿರುವ ಎರಡನೆ ರಾಜ್ಯ. ಮಹಾರಾಷ್ಟ್ರದ ನಂತರ ಅತಿ ಹೆಚ್ಚು ಜಿಎಸ್‍ಟಿ ಪಾವತಿಸುತ್ತಿರುವ ರಾಜ್ಯ ನಮ್ಮದು. ಆದಾಯ ತೆರಿಗೆ, ಕಾರ್ಪೋರೇಟ್ ತೆರಿಗೆಯ ಪಾವತಿಯಲ್ಲಿ ನಮ್ಮ ರಾಜ್ಯ ಸತತವಾಗಿ ಎರಡು ಅಥವಾ ಮೂರನೆ ಸ್ಥಾನದಲ್ಲಿದೆ. 

ರಾಜ್ಯದಿಂದ ಸಂಗ್ರಹವಾದ 19 ಲಕ್ಷ ಕೋಟಿ ತೆರಿಗೆ ಹಣದಲ್ಲಿ ಕೇಂದ್ರ ಸರ್ಕಾರ ಕೆಲವು ಯೋಜನೆಗಳನ್ನು ಸೇರಿಸಿ ಒಟ್ಟು 1.29 ಲಕ್ಷ ಕೋಟಿ ಅನುದಾನವನ್ನು ರಾಜ್ಯಕ್ಕೆ ನೀಡಿದೆ. ಇದರಲ್ಲಿ ನರೇಗ ಯೋಜನೆಯಲ್ಲಿ(Narega Yojane) ಜನರು ಕೂಲಿ ಮಾಡಿದ ಹಣ 27,418 ಕೋಟಿಗಳಷ್ಟಿದೆ. ಹಾಗೆಯೇ ಜನರ ವಿಮೆ ಹಣ ಮುಂತಾದವುಗಳೆಲ್ಲ ಈ ಕೊಡುಗೆಯಲ್ಲಿ ಸೇರಿವೆ. ಕಳೆದ 8 ವರ್ಷಗಳಲ್ಲಿ ನರೇಂದ್ರ ಮೋದಿ ಅವರ ರಾಜ್ಯ ವಿರೋಧಿ ಧೋರಣೆಯಿಂದ ನಾವು ಬಹಳಷ್ಟನ್ನು ಕಳೆದುಕೊಂಡಿದ್ದೇವೆ.

ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಈ 8 ವರ್ಷಗಳಲ್ಲಿ ನಮ್ಮ ರಾಜ್ಯದಿಂದ ಕನಿಷ್ಟ ಎಂದರೂ 19 ಲಕ್ಷ ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
Exit mobile version