ಮಂಗಳವಾರ(Tuesday) ಬಿಜೆಪಿ ಕಾರ್ಯಕರ್ತ(BJP), ಗುತ್ತಿಗೆದಾರ ಸಂತೋಷ್ ಪಾಟೀಲ್(Santhosh Patil) ಆತ್ಮಹತ್ಯೆ(Sucide) ಮಾಡಿಕೊಂಡಿದ್ದು, ಇದಕ್ಕೆ ಸಚಿವ ಕೆ.ಎಸ್ ಈಶ್ವರಪ್ಪ(KS Eshwarappa) ಅವರೇ ನೇರ ಕಾರಣ ಎಂಬ ಆರೋಪ ವ್ಯಕ್ತವಾಗಿದೆ. ಹೌದು, ಮಂಗಳವಾರ ಕೋಣೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸಂತೋಷ್ ಪಾಟೀಲ್ ಡೆತ್ ನೋಟ್ ಬರೆದಿಟ್ಟು ಸಾವೀಗಿಡಾಗಿದ್ದಾರೆ.

ಆತ್ಮಹತ್ಯೆಗೂ ಮುನ್ನ ಬರೆದ ಪತ್ರದಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ತನ್ನ ಮೇಲೆ 40% ಕಮೀಷನ್ ಕೇಳಿ ಹಿಂಸೆ ನೀಡಿರುವ ಬಗ್ಗೆ ಪ್ರತ್ಯೇಕವಾಗಿ ಉಲ್ಲೇಖಿಸಿದ್ದಾರೆ. ನನ್ನ ಸಾವಿಗೆ ಈಶ್ವರಪ್ಪನವರೇ ಕಾರಣ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಂತೋಷ್ ಪಾಟೀಲ್ ಸಹೋದರ ಸೇರಿದಂತೆ ರಾಜಕೀಯ ವಲಯದಿಂದ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ಕೂಗು ವ್ಯಾಪಕವಾಗುತ್ತಿದೆ. ಗ್ರಾಮೀಣಾಭಿವೃದ್ದಿ ಸಚಿವರಾಗಿರುವ ಕೆ.ಎಸ್ ಈಶ್ವರಪ್ಪ ಕೂಡಲೇ ರಾಜೀನಾಮೆ ಕೊಡಬೇಕು, ಕೊಡಲಿಲ್ಲ ಅಂದ್ರೆ ನಾವೇ ಇಳಿಸಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತವಾಗುತ್ತಿದೆ.
ಉಡುಪಿ ಜಿಲ್ಲೆಯ ಲಾಡ್ಜ್‍ನಲ್ಲಿ ಉಳಿದಿದ್ದ ಸಂತೋಷ್ ಪಾಟೀಲ್ ಡೆತ್ ನೋಟ್ ಬರೆದು ಬಳಿಕ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಡೆತ್ ನೋಟ್ನಲ್ಲಿ “ನನ್ನ ಸಾವಿಗೆ ಕೆ.ಎಸ್ ಈಶ್ವರಪ್ಪ ಕಾರಣ, ಅವರಿಗೆ ತಕ್ಕ ಶಿಕ್ಷೆಯಾಗಬೇಕು. ನನ್ನೆಲ್ಲಾ ಆಸೆಗಳನ್ನು ¨ಬದಿಗೊತ್ತಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಹೆಂಡತಿ, ಮಕ್ಕಳಿಗೆ ಪ್ರಧಾನಿಗಳು, ಮುಖ್ಯಮಂತ್ರಿಗಳು ಸಹಾಯ ಮಾಡಬೇಕು. ಅದೇ ರೀತಿ ನಮ್ಮ ಸಮುದಾಯದ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪನವರು ನನ್ನ ಕುಟುಂಬಕ್ಕೆ ಸಹಾಯ ಮಾಡಬೇಕೆಂದು ಕೈಮುಗಿದು ಕೇಳಿಕೊಳ್ಳುತ್ತೇನೆ” ಎಂದು ಬರವಣಿಗೆಯಲ್ಲಿ ತಿಳಿಸಿದ್ದಾರೆ.
ರಾಜ್ಯದೆಲ್ಲೆಡೆ ಕೆ.ಎಸ್ ಈಶ್ವರಪ್ಪ ಈ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂಬ ಆಗ್ರಹ ಕೇಳಿಬರುತ್ತಿರುವ ಬೆನ್ನಲ್ಲೇ, ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮಾತನಾಡಿದ್ದು, ಸಚಿವ ಸ್ಥಾನಕ್ಕೆ ಈ ಕೂಡಲೇ ಈಶ್ವರಪ್ಪ ರಾಜೀನಾಮೆ ಕೊಡಬೇಕು! ಕಾನೂನಿನ ಮುಂದೆ ಈಶ್ವರಪ್ಪ ಏನು? ಎಂದು ಪ್ರಶ್ನಿಸುವ ಮುಖೇನ ಈಶ್ವರಪ್ಪ ವಿರುದ್ಧ ಗುಡುಗಿದ್ದಾರೆ.