Bagalkot : ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಕರ್ನಾಟಕಕ್ಕೆ ಬರಬಾರದು ಎಂದು ನಾನು ಹೇಳುವುದಿಲ್ಲ, ಆದರೆ ಪ್ರಧಾನಿ ಮೋದಿ ಅವರು ಕೇವಲ ರಾಜಕೀಯ ಕಾರಣಗಳಿಗಾಗಿ ರಾಜ್ಯಕ್ಕೆ (Siddaramaiah criticized about modi) ಬಂದಿರುವುದು ಸಮಸ್ಯೆಯಾಗಿದೆ ಎಂದು ಸಿದ್ದರಾಮಯ್ಯ(Siddaramaiah) ಟೀಕಿಸಿದ್ದಾರೆ.

ಬಾಗಲಕೋಟೆಯಲ್ಲಿ(Bagalkot) ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ನರೇಂದ್ರ ಮೋದಿ ಅವರು ಇಂದು (ಜನವರಿ 19) ರಂದು ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ.
ಇದು ಅವರ ರಾಜಕೀಯ ತಂತ್ರಗಾರಿಕೆಯ ಭೇಟಿಯಾಗಿದೆ. ಹೀಗೆ ರಾಜಕೀಯಕ್ಕಾಗಿ ಭೇಟಿ ನೀಡುವುದರಿಂದ ರಾಜ್ಯಕ್ಕೇನು(Siddaramaiah criticized about modi) ಲಾಭ ಎಂದು ಪ್ರಶ್ನಿಸಿದ್ದಾರೆ.
ಇದೇ ವೇಳೆ ಈ ಬಾರಿ ಒಂದೇ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಸ್ಪಷ್ಟಪಡಿಸಿದ ಸಿದ್ದರಾಮಯ್ಯ ಅವರು, ಜನರು ನನ್ನನ್ನು ಪ್ರೀತಿಸುವ ಸ್ಥಳದಿಂದ ನಾನು ಸ್ಪರ್ಧಿಸುತ್ತೇನೆ.
ನಾನು ಈ ಹಿಂದೆ ವರುಣಾ ಮತ್ತು ಚಾಮುಂಡೇಶ್ವರಿಯಿಂದ ಸ್ಪರ್ಧಿಸಿದ್ದೇನೆ. ಈಗ ಕೋಲಾರದಿಂದ(Kolar) ಸ್ಪರ್ಧಿಸುತ್ತಿದ್ದೇನೆ.
ಇನ್ನು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್(Congress) ಪಕ್ಷ ಕನಿಷ್ಠ 130 ಮತ್ತು ಗರಿಷ್ಠ 150 ಸ್ಥಾನಗಳನ್ನು ಗೆಲ್ಲುತ್ತದೆ ಮತ್ತು ಸರ್ಕಾರವನ್ನು ರಚಿಸುವುದು ಖಚಿತ.

ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ನಾವು ಒಟ್ಟಾರೆಯಾಗಿ ಚುನಾವಣೆಯಲ್ಲಿ ಹೋರಾಡುತ್ತೇವೆ. ಕಾಂಗ್ರೆಸ್‌ನಲ್ಲಿ ಸಂಸದೀಯ ಸಮಿತಿ ಇದ್ದು,
ಚುನಾವಣೆಯ ನಂತರ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ನಿರ್ಧರಿಸುವವರು ಶಾಸಕರು ಎಂದು ಸಿದ್ದರಾಮಯ್ಯ ಹೇಳಿದರು. ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ.
ಇದನ್ನೂ ಓದಿ: https://vijayatimes.com/offers-to-womens-voters/
ಅವರು ಕಲ್ಯಾಣ ಕರ್ನಾಟಕದ ಯಾದಗಿರಿ(Yadgiri) ಜಿಲ್ಲೆಯಲ್ಲಿ ಜಲ್ ಜೀವನ್ ಮಿಷನ್ ಅಡಿ 15.84 ಲಕ್ಷ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಕಾಮಗಾರಿಗೆ ಚಾಲನೆ ನೀಡಲು ಮತ್ತು ನಾರಾಯಣಪುರ ಎಡದಂಡೆ ಮುಖ್ಯ ಕಾಲುವೆಯನ್ನು ಪುನಶ್ಚೇತನಗೊಳಿಸಿ 4.5 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲು ಕೈಗೊಂಡಿರುವ 4,699 ಕೋಟಿ ರೂ. ಮೊತ್ತದ ಆಧುನೀಕರಣ ಯೋಜನೆಯನ್ನು ಉದ್ಘಾಟನೆ ಮಾಡಲಿದ್ದಾರೆ.
ಇದೇ ವೇಳೆ ಕಲಬುರಗಿಯಲ್ಲಿ(Kalburgi) ರಾಜ್ಯದ 52,072 ಅಲೆಮಾರಿ ಜನರಿಗೆ ಹಾಗೂ ತಾಂಡಾ ವಾಸಿಗಳಿಗೆ ಏಕಕಾಲಕ್ಕೆ ಹಕ್ಕುಪತ್ರ ವಿತರಣೆ ಮಾಡಲಿದ್ದಾರೆ.