ಮೇ 20ರಂದು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಪ್ರಮಾಣವಚನ ಸಮಾರಂಭ: ಕಾಂಗ್ರೆಸ್ ಆಡಳಿತ ರಾಜ್ಯಗಳ ಸಿಎಂಗಳು ಭಾಗಿ

Bengaluru: ದೆಹಲಿಯ ಎಐಸಿಸಿ (AICC) ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೆ.ಸಿ.ವೇಣುಗೋಪಾಲ್ (Siddaramaiah DK swearing ceremony) ಅವರು ಕರ್ನಾಟಕ ಸಿಎಂ ಆಗಿ ಸಿದ್ದರಾಮಯ್ಯ ಹಾಗೂ

ಡಿಸಿಎಂ ಆಗಿ ಡಿ.ಕೆ.ಶಿವಕುಮಾರ್ ಕಾರ್ಯನಿರ್ವಹಿಸಲಿದ್ದಾರೆ ಎಂದು ಘೋಷಿಸಿದರು. ಡಿ.ಕೆ.ಶಿವಕುಮಾರ್ ಮಾತ್ರ ಡಿಸಿಎಂ ಆಗಲಿದ್ದಾರೆ. ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.

ಮೇ 20ರಂದು ಸಿದ್ದರಾಮಯ್ಯ (Siddaramaiah) ಅವರು ಮುಖ್ಯಮಂತ್ರಿಯಾಗಿ ಹಾಗೂ ಡಿಕೆ ಶಿವಕುಮಾರ್ (D.K.Shivakumar) ಅವರ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.

ಬೆಂಗಳೂರಿನ ಕಂಠೀರವಣ ಕ್ರೀಡಾಂಗಣದಲ್ಲಿ ಈ ಸಮಾರಂಭಕ್ಕೆ ಸಕಲ ಸಿದ್ಧತೆಗಳು (Siddaramaiah DK swearing ceremony) ನಡೆಯುತ್ತಿವೆ.

ಕಾಂಗ್ರೆಸ್ (Congress) 136 ಸ್ಥಾನದಿಂದ ಬಹುಮತ ಸಾಧಿಸಿ ಗೆದ್ದು ಬೀಗಿದ್ದು ಸಿಎಂ ಆಯ್ಕೆ ಕಗ್ಗಂಟಾಗಿಯೇ ಉಳಿದಿತ್ತು ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಪೈಪೋಟಿ ನಡೆಯುತ್ತಿದೆ.

ಈ ಗೊಂದಲಕ್ಕೆ ಇದೀಗ ತೆರೆ ಬಿದ್ದಿದೆ, ಕ್ಷಣ ಕ್ಷಣದ ಅಪ್​ಡೇಟ್ಸ್​ಗಳನ್ನು (Updates) ಇಲ್ಲಿ ಪಡೆಯಿರಿ.

ಇದನ್ನು ಓದಿ: ಪ್ರೇಮ ವಿವಾಹಗಳಿಂದ ಹೆಚ್ಚು ಡಿವೋರ್ಸ್‌ ಆಗುತ್ತಿವೆ : ಸುಪ್ರೀಂಕೋರ್ಟ್

ಕಾಂಗ್ರೆಸ್ ಹಾಗೂ ಕಾಂಗ್ರೆಸ್ಸೇತರ ನಾಯಕರಿಗೆ ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನ ನೀಡಲಾಗಿದೆ.ಈ ಸಮಾರಂಭಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ಪಾಲ್ಗೊಳ್ಳುವ ಸಾಧ್ಯತೆ ಇದೆ.

ಅಲ್ಲದೆ ಕಾಂಗ್ರೆಸ್ (Congress) ಆಡಳಿತ ಇರುವ ರಾಜ್ಯಗಳ ಮುಖ್ಯಮಂತ್ರಿಗಳು ಕೂಡ ಪಾಲ್ಗೊಳ್ಳುವ ಸಾಧ್ಯತೆ ಇದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಅವರು ಶರದ್ ಪವಾರ್ (Sharad Pawar) ​​ ಅವರಿಗೆ ಆಹ್ವಾನ ನೀಡಿದ್ದಾರೆ.ಅಧಿಕಾರಿಗಳು ಬೆಂಗಳೂರಿಗೆ ಆಗಮಿಸಿ ಪ್ರಮಾಣವಚನ ನಡೆಯುವ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ ಅನೇಕ ನೆರೆಹೊರೆ ರಾಜ್ಯಗಳ ಕಾಂಗ್ರೆಸ್ ಮತ್ತಿತರ ಪಕ್ಷಗಳ ಮುಖಂಡರು ಭಾಗಿಯಾಗಲಿದ್ದಾರೆ.

ಮೇ 20ರಂದು ನಡೆಯುವ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಸಂಪುಟ ಸಚಿವರಿಗೆ ಕರ್ನಾಟಕ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ (Tawar Chand Gehlot)

ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ.ವಿಐಪಿಗಳು, ಶಾಸಕರು ಸೇರಿದಂತೆ 50,000 ಜನರಿಗೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗುತ್ತಿದೆ.

ಸಿದ್ದರಾಮಯ್ಯ ನಿವಾಸದ ಮುಂದೆ ಹೆಚ್ಚಿದ ಪೊಲೀಸ್ ಭದ್ರತೆ:


ಅಭಿಮಾನಿಗಳು ಸಿದ್ದರಾಮಯ್ಯ ನಿವಾಸದ ಬಳಿ ಬರುವ ಮುನ್ಸೂಚನೆ ಸಿಕ್ಕಿರುವುದರಿಂದ ಭದ್ರತೆ ಹೆಚ್ಚಿಸಲಾಗಿದೆ. 70 ಕ್ಕೂ ಹೆಚ್ಚು ಪೊಲೀಸರು ಮತ್ತು ಒಂದು ಕೆಎಸ್ಆರ್​ಪಿ ವ್ಯಾನ್ (KSRP Van) ,ನಿಯೋಜಿಸಲಾಗಿದೆ.

ಸಿದ್ದು ಸರ್ಕಾರಿ ನಿವಾಸ ಕುಮಾರಕೃಪಾ (Kumara Krupa) ಬಳಿ ಇದೆ, ಇಲ್ಲಿ ಹೆಚ್ಚಿನ ಭದ್ರತೆ ನಿಯೋಜಿಸಲಾಗಿದೆ.

ರಶ್ಮಿತಾ ಅನೀಶ್

Exit mobile version