Mandya: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ (siddaramaiah eye on puttaraju) ಲೋಕಸಭಾ ಚುನಾವಣೆಯನ್ನು ಗೆಲ್ಲುವ ತಂತ್ರಗಾರಿಕೆಯ ಭಾಗವಾಗಿ ಜೆಡಿಎಸ್
ನಾಯಕ ಸಿ.ಎಸ್.ಪುಟ್ಟರಾಜು ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರಲು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರೇ ಮುಂದಾಗಿದ್ದಾರೆ ಎಂಬ ಮಾತುಗಳು ರಾಜಕೀಯ
ವಲಯದಲ್ಲಿ ಕೇಳಿ ಬರುತ್ತಿದೆ.

ಸದ್ಯದ ಪರಿಸ್ಥಿತಿಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯನ್ನು ಎದುರಿಸಲು ಸಮರ್ಥ ಅಭ್ಯರ್ಥಿಗಳು ಕಾಂಗ್ರೆಸ್ (Congress) ಪಕ್ಷದಲ್ಲಿಲ್ಲ. ಹೀಗಾಗಿ ಮಂಡ್ಯ ಜಿಲ್ಲೆಯಲ್ಲಿ ಪ್ರಬಲವಾಗಿರುವ ಮತ್ತು
ಆರ್ಥಿಕವಾಗಿಯೂ ಸದೃಡವಾಗಿರುವ ಸಿ.ಎಸ್.ಪುಟ್ಟರಾಜು (C.S.Puttaraju) ಅವರನ್ನು ಪಕ್ಷಕ್ಕೆ ಕರೆತಂದು, ಅಭ್ಯರ್ಥಿಯನ್ನಾಗಿ ಮಾಡಿದರೆ ಸುಲಭವಾಗಿ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಗೆಲ್ಲಬಹುದು
ಎಂಬುದು ಕಾಂಗ್ರೆಸ್ ನಾಯಕರ (siddaramaiah eye on puttaraju) ಲೆಕ್ಕಾಚಾರ.
ಮೇಲುಕೋಟೆ (Melukote) ವಿಧಾನಸಭಾ ಕ್ಷೇತ್ರದ ಶಾಸಕರಾಗಿ, ಸಣ್ಣ ನೀರಾವರಿ ಸಚಿವರಾಗಿ ಮಂಡ್ಯ ಜಿಲ್ಲೆಯಲ್ಲಿ ಸಾಕಷ್ಟು ಹಿಡಿತ ಹೊಂದಿರುವ ಪುಟ್ಟರಾಜು ಕಾಂಗ್ರೆಸ್ ಪಕ್ಷಕ್ಕೆ ಬಂದರೆ,
ಮಂಡ್ಯದಲ್ಲಿ ಜೆಡಿಎಸ್ (JDS) ತನ್ನ ಶಕ್ತಿಯನ್ನು ಕಳೆದುಕೊಳ್ಳಲಿದೆ. ಇನ್ನು ಕಳೆದ ವಿಧಾನಸಭಾ ಚುನಾವಣೆಗೂ ಮುನ್ನವೇ ಪುಟ್ಟರಾಜು ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಸುದ್ದಿ ಹಬ್ಬಿತ್ತು.
ಆದರೆ ಪುಟ್ಟರಾಜು (Puttaraju) ಅವರು ಮೇಲುಕೋಟೆ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಸರ್ವೋದಯ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ
(Darshan Puttannaiah) ವಿರುದ್ದ ಸೋಲುಂಡಿದ್ದಾರೆ.

ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಡ್ಯದಿಂದ ಕಣಕ್ಕಿಳಿಯುತ್ತಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ. ಇನ್ನು ಪುಟ್ಟರಾಜು
ಅವರು 2004 ರಿಂದ 2013 ರವರೆಗೆ ಪಾಂಡವಪುರ (Pandavapura) ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದಾರೆ. 2014ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಮ್ಯಾ
(Ramya) ಅವರನ್ನು ಸೋಲಿಸಿ, 16 ನೇ ಲೋಕಸಭೆಯ ಸದಸ್ಯರಾಗಿದ್ದರು.
ಸಕ್ಕರೆನಾಡು ಗೆಲ್ಲಲು ಸಿ.ಎಸ್.ಪುಟ್ಟರಾಜುವಿಗೆ ಗಾಳ ಹಾಕಿದ ಕೈ ನಾಯಕರು..!
2018 ರಲ್ಲಿ, ಅವರು ಮೂರನೇ ಬಾರಿಗೆ ಕರ್ನಾಟಕ (karnataka) ವಿಧಾನ ಸಭೆಗೆ ಆಯ್ಕೆಯಾಗಿ, ಲೋಕಸಭಾ ಸ್ಥಾನವನ್ನು ತೆರವು ಮಾಡಿದರು. ಎಚ್.ಡಿ. ಕುಮಾರಸ್ವಾಮಿ (HD Kumaraswamy)
ಸರ್ಕಾರದಲ್ಲಿ ಸಣ್ಣ ನೀರಾವರಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಪುಟರಾಜು ಕಾರ್ಯನಿರ್ವಹಿಸಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರ (Devegowda) ಕಟ್ಟಾ ಬೆಂಬಲಿಗ ಎಂದೇ
ಗುರುತಿಸಿಕೊಂಡಿರುವ ಪುಟ್ಟರಾಜು ಅವರ ಮುಂದಿನ ರಾಜಕೀಯ ನಡೆ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಮಹೇಶ್