Kolar : ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ದರಾಮಯ್ಯ ಒಲವು ; ರಮೇಶ್‌ ಕುಮಾರ್ಗೆ ಗೆಲ್ಲಿಸುವ ಹೊಣೆಗಾರಿಕೆ?

Congress

Kolar : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೋಲಾರ(Siddaramaiah for Kolar Vidhansabha?) ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಒಲವು ತೋರಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್‌(Congress) ವಲಯದಿಂದಲೇ ಕೇಳಿ ಬರುತ್ತಿವೆ.

ಪಕ್ಷದ ಹಿರಿಯ ಶಾಸಕ ರಮೇಶ್‌ ಕುಮಾರ್‌ ಅವರ ಒತ್ತಾಯದ ಮೇರೆಗೆ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ದರಾಮಯ್ಯ(Siddaramaiah for Kolar Vidhansabha?) ಮುಂದಾಗಿದ್ದಾರೆ ಎನ್ನಲಾಗಿದೆ.

ಅದೇ ರೀತಿ ಕೋಲಾರ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಗೆಲ್ಲಿಸುವ ಹೊಣೆಗಾರಿಕೆಯನ್ನು ರಮೇಶ್‌ ಕುಮಾರ್‌ ಅವರೇ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : https://vijayatimes.com/dadasaheb-phalke-award-for-asha-parekh/

ಇನ್ನು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲುಂಡು, ಬಾದಾಮಿ ಕ್ಷೇತ್ರದಲ್ಲಿ ಪ್ರಯಾಸದ ಗೆಲುವು ಸಾಧಿಸಿದ್ದರು.

ಹೀಗಾಗಿ ಈ ಬಾರಿ ತೀವ್ರ ಇಕ್ಕಟ್ಟಿಗೆ ಸಿಲುಕಿರುವ ಸಿದ್ದರಾಮಯ್ಯ ಅವರು, ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದರ ಕುರಿತು ಸಾಕಷ್ಟು ಆಲೋಚನೆ ಮಾಡುತ್ತಿದ್ದಾರೆ.

ಹುಣಸೂರು, ಚಾಮರಾಜಪೇಟೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿತ್ತು, ಆದರೆ ಇದೀಗ ಕೋಲಾರ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ ಮಾಡೋದು ಖಚಿತ ಎಂದು ಸಿದ್ದರಾಮಯ್ಯನವರ ಆಪ್ತ ವಲಯ ಹೇಳಿದೆ.

ಈಗಾಗಲೇ ಈ ಕ್ಷೇತ್ರದ ಸಂಪೂರ್ಣ ಮಾಹಿತಿಯನ್ನು ತೆಗೆದುಕೊಂಡಿರುವ ಸಿದ್ದರಾಮಯ್ಯನವರು,

ಕ್ಷೇತ್ರದ ವಿವಿಧ ಸಮುದಾಯಗಳ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನೊಂದೆಡೆ ಈ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ದರಾಮಯ್ಯ ಒಲವು ತೋರಲು ಅನೇಕ ಕಾರಣಗಳಿವೆ.

ಮುಖ್ಯವಾಗಿ, ಈ ಕ್ಷೇತ್ರದಲ್ಲಿ ಕುರುಬ ಸಮುದಾಯದ ಮತಗಳು ಹೆಚ್ಚಾಗಿವೆ, ಅದೇ ರೀತಿ ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳ ಮತಗಳು ಹೆಚ್ಚಾಗಿರುವ ಕ್ಷೇತ್ರ ಇದಾಗಿದೆ.

https://fb.watch/fOCpSPZeSs/

ಇನ್ನೊಂದೆಡೆ ಕೋಲಾರ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಎದುರಿಸುವ ಬಲಿಷ್ಠ ನಾಯಕರು ಜೆಡಿಎಸ್‌(JDS) ಮತ್ತು ಬಿಜೆಪಿ(BJP) ಪಕ್ಷಗಳಲ್ಲಿ ಇಲ್ಲ. ಹೀಗಾಗಿ ಈ ಕ್ಷೇತ್ರದಲ್ಲಿ ಸುಲಭವಾಗಿ ಗೆಲುವು ಸಾಧಿಸಬಹುದು ಎಂಬುದು ಸಿದ್ದರಾಮಯ್ಯನವರ ಲೆಕ್ಕಾಚಾರ ಎನ್ನಲಾಗಿದೆ.

Exit mobile version