Karnataka : ಸ್ಟೀಲ್ ಬ್ರಿಡ್ಜ್(Steel Bridge) ನಿರ್ಮಾಣದಲ್ಲಿ ಕಮಿಷನ್(Commission) ಯಾವ ಗಂಟಿನ ರೂಪದಲ್ಲಿ ಪಡೆದಿದ್ದು ಸಿದ್ದರಾಮಯ್ಯ(Siddaramaiah) ಅವರೇ? ಧಾನ್ಯವೋ, ಧನವೋ? ಸಿದ್ದರಾಮಯ್ಯ ಅವರೇ, ಶಿಕ್ಷಕರ ಅಕ್ರಮ ನೇಮಕಾತಿ ಹಗರಣದಲ್ಲಿ ನೀವು ಪಡೆದಿದ್ದು ಧಾನ್ಯದ ಗಂಟೋ, ಧನದ ಗಂಟೋ?

ಸಿದ್ದರಾಮಯ್ಯ ಅವರೇ, ನಿಮ್ಮ ಕಾಲದಲ್ಲಿ ಹಗರಣದ ಮೂಲಕ ಯಾವುದರ ಗಂಟು ಪಡೆದಿದ್ದು? ಧಾನ್ಯದ ಗಂಟೋ, ಧನದ ಗಂಟೋ? ಬಿಬಿಎಂಪಿಯಲ್ಲಿ ಸಿದ್ದರಾಮಯ್ಯ ಅವರ ಅವಧಿಯಲ್ಲಿ 1400 ಕೋಟಿ ಹಗರಣ ನಡೆದಿತ್ತು. ಈ ಹಗರಣದಲ್ಲಿನ ಕಮಿಷನ್ ಮೊತ್ತವನ್ನು ಯಾವ ರೂಪದಲ್ಲಿ ಪಡೆದಿದ್ದು? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿರುವ ಬಿಜೆಪಿ,
ಇದನ್ನೂ ಓದಿ : https://vijayatimes.com/sanskrit-speaking-village/
ಇನ್ನು ಭಾರತ್ ಜೋಡೋ(Bharat Jodo) ಯಾತ್ರೆಗಾಗಿ ಕೇರಳದ(Kerala) ಕೊಲ್ಲಂನಲ್ಲಿ ತರಕಾರಿ ಮಾರುವವರನ್ನು ಕಾಂಗ್ರೆಸ್ ಕಾರ್ಯಕರ್ತರು ದೋಚಿದ ಪ್ರಕರಣ ಬೆಳಕಿಗೆ ಬಂದಿತ್ತು. ಕಾಂಗ್ರೆಸ್ಸಿಗರೇ, ಯಾತ್ರೆಗಾಗಿ ರಾಹುಲ್ ಗಾಂಧಿ ಅವರ ಫೋಟೋ ಹಾಕಿ, ಕ್ಯುಆರ್ ಕೋಡ್ ಸೃಷ್ಟಿಸಿ ಭಿಕ್ಷೆ ಬೇಡಬಹುದಲ್ಲವೇ? ಎಂದು ವ್ಯಂಗ್ಯವಾಡಿದೆ.

ನಿನ್ನೆ ಟ್ವೀಟ್(Tweet) ಮಾಡಿದ್ದ ಸಿದ್ದರಾಮಯ್ಯನವರು, ಸರ್ಕಾರಿ ಉದ್ಯೋಗಗಳಿಗೆ ಲಂಚ ಕೊಡುವ ಶಕ್ತಿಯಿಲ್ಲದ ಬಡ ಉದ್ಯೋಗಕಾಂಕ್ಷಿಗಳು ತಮ್ಮ ಪೋಷಕರು ಬೆಳೆದ ಅಕ್ಕಿ, ರಾಗಿ, ಜೋಳ ಮುಂತಾದ ಬೆಳೆಗಳ ಗಂಟನ್ನು ನನ್ನ ಕೈಗಿತ್ತು ಸರ್ಕಾರಕ್ಕೆ ತಲುಪಿಸಿ, ಉದ್ಯೋಗ ಕೊಡಿಸಿ ಎಂದು ಕೋರಿದ್ದಾರೆ.
https://youtu.be/-l-HRU9ToZQ ವಾಹನ ಖರೀದಿ ಮಾಡುವವರೇ ಎಚ್ಚರ !
ಯುವ ಜನರ ಆಕ್ರೋಶದ ಅಲೆಗೆ ಭ್ರಷ್ಟ ಬಿಜೆಪಿ ಸರ್ಕಾರ ಕೊಚ್ಚಿ ಹೋಗುವ ದಿನ ದೂರವಿಲ್ಲ. ರಾಜ್ಯ ಸರ್ಕಾರವು ಸರ್ಕಾರಿ ನೇಮಕಾತಿಗಳಲ್ಲಿ ನಡೆಸುತ್ತಿರುವ ಅಕ್ರಮಗಳಿಂದಾಗಿ ಪ್ರಾಮಾಣಿಕವಾಗಿ ಪರೀಕ್ಷೆ ಎದುರಿಸಿದ ಅಭ್ಯರ್ಥಿಗಳಿಗೆ ಉದ್ಯೋಗ ಸಿಗದೆ, ಬದುಕು ಅತಂತ್ರವಾಗಿದೆ.

ಇಂತಹ ಲಕ್ಷಾಂತರ ನೊಂದ ಯುವ ಜನರ ಪರವಾಗಿ ಸದನದ ಒಳಗೆ ಮತ್ತು ಹೊರಗೆ ನನ್ನ ಹೋರಾಟ ಮುಂದುವರೆಸುತ್ತೇನೆ. ಪಾರದರ್ಶಕ ನೇಮಕಾತಿ ನಡೆಯಲಿ, ಅರ್ಹರು ಆಯ್ಕೆಯಾಗಲಿ ಎಂದು ಸಿದ್ದರಾಮಯ್ಯ ಬಿಜೆಪಿ ಸರ್ಕಾರವನ್ನು ಟೀಕಿಸಿದ್ದರು.
- ಮಹೇಶ್.ಪಿ.ಎಚ್