ಅರ್ಜಿ ಸಲ್ಲಿಸುತ್ತಿರುವ ನಡುವೆಯೇ, ವಿಧಾನಸಭಾ ಚುನಾವಣೆಗೆ 5 ಅಭ್ಯರ್ಥಿಗಳ ಹೆಸರು ಘೋಷಿಸಿದ ಸಿದ್ದರಾಮಯ್ಯ!

Koppala : 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Siddaramaiah Koppala Plans) ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಲು ಆಕಾಂಕ್ಷಿಗಳು ಅರ್ಜಿಗಳನ್ನು ಖರೀದಿಸಿ ಸಲ್ಲಿಸುತ್ತಿದ್ದಾರೆ.

ಈ ನಡುವೆ ಸಿದ್ದರಾಮಯ್ಯ ಅವರು ತಮ್ಮ ಬೆಂಬಲಿಗ ಅಭ್ಯರ್ಥಿಗಳನ್ನು ಘೋಷಿಸಿ ಅವರಿಗೆ ಮತ ನೀಡುವಂತೆ  ಕೇಳಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಜಿ ಸಲ್ಲಿಸಲು (Siddaramaiah Koppala Plans) ಕಾಂಗ್ರೆಸ್ ಕಚೇರಿಯಲ್ಲಿ ಅರ್ಜಿ ನಮೂನೆಗಳನ್ನು ಅನೇಕರು ಪಡೆಯುತ್ತಿದ್ದಾರೆ.

ಈ ನಡುವೆ ಕಾಂಗ್ರೆಸ್ ಪಕ್ಷಕ್ಕೆ ಮತ್ತು ಡಿಕೆ ಶಿವಕುಮಾರ್‌ಗೆ (DK Shivkumar) ಮುಜುಗರ ಉಂಟು ಮಾಡಿರುವ  ಸಿದ್ದರಾಮಯ್ಯ (Siddaramaiah) ಅವರು ಐದು ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ.  

ಕೊಪ್ಪಳ(Koppala) ಜಿಲ್ಲೆಯ ವನಂಬಾರಿ ಗ್ರಾಮದಲ್ಲಿ ನಡೆದ ರಾಘವೇಂದ್ರ ಇಟ್ನಾಳ್ ಅವರ ಮದುವೆಯ ಆರತಕ್ಷತೆ ಸಮಾರಂಭದಲ್ಲಿ ಸಿದ್ದರಾಮಯ್ಯ ಅವರು ಈ ಘೋಷಣೆ ಮಾಡಿದ್ದಾರೆ.

ಈ ಸಮಾರಂಭದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ಕನಕಗಿರಿಯಲ್ಲಿ ಶಿವರಾಜ್‌ ತಂಗಡಿ, ಕುಷ್ಟಗಿಯಲ್ಲಿ ಅಮರೇಗೌಡ ಬ್ಯಾಪುರಿ,

ಇದನ್ನೂ ಓದಿ : https://vijayatimes.com/mysterious-well-of-england/

ಯಲಬುರ್ಗಾದಲ್ಲಿ ಬಸವರಾಜ ರಾಯರೆಡ್ಡಿ, ಕೊಪ್ಪಳದಲ್ಲಿ ರಾಘವೇಂದ್ರ ಹಿಟ್ನಾಳ್‌, ಗಂಗಾವತಿಯಲ್ಲಿ ಇಕ್ಬಾಲ್‌ ಅನ್ಸಾರಿ ಅವರಿಗೆ ಮತ ನೀಡಿ ಗೆಲ್ಲಿಸಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಪಕ್ಷ ಅಧಿಕಾರಕ್ಕೆ ಬರುವಂತೆ  ಮಾಡಿ ಎಂದು ಮನವಿ ಮಾಡಿದ್ದಾರೆ. 

https://youtu.be/nz64LK6IYf4 ಕೆರೆ ನಾಪತ್ತೆ! ಸುಪ್ರೀಂ ಕೋರ್ಟ್ ಆದೇಶಕ್ಕೆ ಡೋಂಟ್ ಕೇರ್ ಎಂದ ಬಿಬಿಎಂಪಿ.

ಇನ್ನೊಂದೆಡೆ ಈಗಾಗಲೇ 2 ಲಕ್ಷ ರೂ. ನೀಡಿ ಅರ್ಜಿ ಖರೀದಿಸಿರುವ ಆಕಾಂಕ್ಷಿಗಳು ಸಿದ್ದರಾಮಯ್ಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅವರ ವಿರುದ್ಧ ಶಿಸ್ತು ಸಮಿತಿಗೆ ದೂರು ದಾಖಲಿಸಲು ಚಿಂತನೆ ನಡೆಸಿದ್ದಾರೆ. ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶಾಸಕ ಆಕಾಂಕ್ಷಿಗಳಿಗೆ ಉಮೇದುವಾರಿಕೆಗೆ ಅರ್ಜಿ ಆಹ್ವಾನಿಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಅರ್ಜಿಯನ್ನು ಖರೀದಿಸುತ್ತಿದ್ದಾರೆ.

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ 2 ಲಕ್ಷ ರೂ.ಗಳ ಡಿಮ್ಯಾಂಡ್ ಡ್ರಾಫ್ಟ್ ಅನ್ನು ಠೇವಣಿ ಇಡಬೇಕಾಗುತ್ತದೆ.

SC/ST ಸಮುದಾಯಗಳ ಅಭ್ಯರ್ಥಿಗಳಿಗೆ ಠೇವಣಿ ಮೊತ್ತದ ಮೇಲೆ 50% ರಿಯಾಯಿತಿ ನೀಡಲಾಗುತ್ತದೆ. ಉಮೇದುವಾರಿಕೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ನವೆಂಬರ್ 15 ರಿಂದ ನವೆಂಬರ್ 21 ರವರೆಗೆ ವಿಸ್ತರಿಸಲಾಗಿದೆ.
Exit mobile version