Visit Channel

ಅದ್ಯಾವ ಸಿನಿಮಾ? ನಾನು ನೋಡೋದಿಲ್ಲ : ಸಿದ್ದರಾಮಯ್ಯ!

siddaramaiah

ಸದ್ಯ ದೇಶಾದ್ಯಂತ ‘ ದಿ ಕಾಶ್ಮೀರ್ ಫೈಲ್ಸ್’(The Kashmir Files) ಚಿತ್ರ ಸದ್ದು ಮಾಡುತ್ತಿದೆ. ಹಿಂದಿ(Hindi) ಭಾಷೆಯ(Language) ಈ ಚಿತ್ರಕ್ಕೆ ದೊಡ್ಡಮಟ್ಟದಲ್ಲಿ ಜನಬೆಂಬಲ ವ್ಯಕ್ತವಾಗುತ್ತಿದೆ. 1990ರ ದಶಕದಲ್ಲಿ ಜಮ್ಮು ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ಮೇಲೆ ನಡೆದ ಹತ್ಯಾಕಾಂಡದ ಕಥಾಹಂದರವನ್ನು ಹೊಂದಿರುವ ಈ ಚಿತ್ರ ನೋಡುಗರ ಗಮನ ಸೆಳೆದಿದೆ. 1990ರ ದಶಕದಲ್ಲಿ ಕಾಶ್ಮೀರದಲ್ಲಿ ಪಂಡಿತರ ಮೇಲೆ ನಡೆದ ದೌರ್ಜನ್ಯ, ತವರು ನೆಲವನ್ನು ಕಳೆದುಕೊಂಡ ಪಂಡಿತರ ಬದುಕಿನ ವ್ಯಥೆ, ಇಂದಿಗೂ ಕಾಶ್ಮೀರದ ಮೇಲೆ ಅವರು ಇಟ್ಟುಕೊಂಡಿರುವ ಭಾವನಾತ್ಮಕ ಬಂಧ, ಹೀಗೆ ಅನೇಕ ಸಂಗತಿಗಳನ್ನು ‘ ದಿ ಕಾಶ್ಮೀರ್ ಫೈಲ್ಸ್’ ತೆರೆದಿಡುತ್ತದೆ.

the kashmir files

ಹೀಗಾಗಿ ಈ ಚಿತ್ರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಜನಬೆಂಬಲ ಲಭ್ಯವಾಗುತ್ತಿದೆ. ಇತ್ತೀಚೆಗೆ ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಈ ಚಿತ್ರವನ್ನು ವೀಕ್ಷಿಸಿ ಕಣ್ಣಿರಿಟ್ಟಿದ್ದು, ಎಲ್ಲೆಡೆ ಸುದ್ದಿಯಾಗಿತ್ತು. ಅದೇ ರೀತಿ ಅನೇಕ ವೀಕ್ಷಕರು ಈ ಚಿತ್ರವನ್ನು ನೋಡಿ ಭಾವುಕರಾದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಇನ್ನು ಈ ಚಿತ್ರಕ್ಕೆ ಭಾರತದ ಅನೇಕ ರಾಜ್ಯಗಳು ತೆರಿಗೆ ವಿನಾಯಿತಿಯನ್ನು ಘೋಷಿಸಿದ್ದವು. ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕೂಡಾ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ. ಹಾಗೆ, ವಿಧಾನಸಭಾಪತಿ ವಿಶ್ವೇಶ್ವರ ಕಾಗೇರಿ ಹೆಗಡೆ ಅವರು ಕರ್ನಾಟಕ ವಿಧಾನಸಭೆಯ ಎಲ್ಲ ಶಾಸಕರಿಗೆ ಈ ಚಿತ್ರವನ್ನು ಉಚಿತವಾಗಿ ವೀಕ್ಷಿಸಲು ಮಂತ್ರಿಮಾಲ್‍ನಲ್ಲಿ ವ್ಯವಸ್ಥೆ ಕಲ್ಪಿಸಿದ್ದರು.

ವಿಧಾನಸೌಧದ ಸಚಿವಾಲಯದ ಪರವಾಗಿ ಈ ವ್ಯವಸ್ಥೆ ಮಾಡಲಾಗಿದ್ದು, ಎಲ್ಲ ಆಡಳಿತ ಮತ್ತು ಪ್ರತಿಪಕ್ಷದ ಶಾಸಕರು ಸೋಮವಾರ ಸಂಜೆ 6.45ಕ್ಕೆ ಚಿತ್ರ ವೀಕ್ಷಿಸಬೇಕೆಂದು ಮನವಿ ಮಾಡಿಕೊಂಡಿದ್ದರು. ಆದರೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ “ಅದ್ಯಾವ್ ಸಿನಿಮಾರೀ.. ನಾನು ನೋಡಲ್ಲ..” ಎಂದು ಹೇಳಿದ್ದಾರೆ. ಕಲಾಪದ ನಡುವೆಯೇ ಸಭಾಪತಿ ಅವರು ಎಲ್ಲ ಶಾಸಕರಿಗೆ ಚಿತ್ರ ವೀಕ್ಷಿಸಲು ಬರಬೇಕೆಂದು ವಿನಂತಿ ಮಾಡಿಕೊಂಡಿದ್ದರು. ಆದರೆ ವಿಪಕ್ಷ ನಾಯಕರು ಮಾತ್ರ ನಿರಾಸಕ್ತಿ ತೋರಿದ್ದಾರೆ. ಇನ್ನು ಸಿದ್ದರಾಮಯ್ಯನವರು ಈ ಸಿನಿಮಾವನ್ನು ನೋಡದಿರುವುದಕ್ಕೆ ರಾಜಕೀಯ ಕಾರಣಗಳಿವೆ.

siddaramaiah

ಈಗಾಗಲೇ ದೇಶಾದ್ಯಂತ ಸದ್ದು ಮಾಡುತ್ತಿರುವ ಈ ಚಿತ್ರಕ್ಕೆ ಕೆಲ ಕಾಂಗ್ರೆಸ್ ನಾಯಕರು ಆಕ್ಷೇಪ ಎತ್ತಿದ್ದಾರೆ. ಈ ಚಿತ್ರ ಬಿಜೆಪಿಯ ಹಿಡನ್ ಅಜೆಂಡಾದ ಭಾಗವಾಗಿದೆ ಎಂದು ಕೆಲ ಕಾಂಗ್ರೆಸ್ ನಾಯಕರು ಟೀಕಿಸುತ್ತಿದ್ದಾರೆ. ಹೀಗಾಗಿ ಈ ಎಲ್ಲ ಕಾರಣದಿಂದ ಕಾಂಗ್ರೆಸ್ ನಾಯಕರು ಈ ಚಿತ್ರದಿಂದ ಅಂತರ ಕಾಯ್ದುಕೊಂಡಿದ್ದಾರೆ. ಇನ್ನೊಂದೆಡೆ ಕೇರಳ ರಾಜ್ಯ ಕಾಂಗ್ರೆಸ್ ಘಟಕ ಮಾಡಿದ ಟ್ವೀಟ್‍ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಹೀಗಾಗಿ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ಕಾಂಗ್ರೆಸ್ ಪಾಲಿಗೆ ನುಂಗಲು ಆಗದ, ಉಗುಳಲು ಆಗದ ಬಿಸಿ ತುಪ್ಪವಾಗಿದೆ.

Latest News

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

rss
ರಾಜಕೀಯ

RSS ಭಾರತದಲ್ಲಿನ ತಾಲಿಬಾನ್ ಇದ್ದಂತೆ : ಕಾಂಗ್ರೆಸ್‌

ಆರ್‌ಎಸ್‌ಎಸ್‌ ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್‌, ಭಾರತದಲ್ಲಿನ ತಾಲಿಬಾನ್ ಇದ್ದಂತೆ.