ಗೃಹ ಸಚಿವ ಅಮಿತ್ ಶಾ ಮುಂದೆ 9 ಬೇಡಿಕೆಗಳನ್ನಿಟ್ಟ ಸಿಎಂ ಸಿದ್ಧರಾಮಯ್ಯ.

New Delhi: ಗೃಹ ಸಚಿವ ಅಮಿತ್‌ ಶಾ ಭೇಟಿಯ ವೇಳೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕೇಂದ್ರ ಸರ್ಕಾರದ ಮುಂದೆ 9 ಬೇಡಿಗಳನ್ನ ಇಟ್ಟಿದ್ದಾರೆ. ಅಂದಾಜು 3 ಸಾವಿರ ಕೋಟಿ ಬಿಡುಗಡೆಗೆ ಒತ್ತಾಯಿಸಿದ್ದಾರೆ. ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ಅಗತ್ಯವಿರುವ ನೆರವಿನ ಕುರಿತ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದ್ದಾರೆ.

Amit Shah

ಭಾರತ ಸರ್ಕಾರವು 80 ಕೋಟಿ ರೂ. ವೆಚ್ಚದಲ್ಲಿ India Reserve Battalion ಸ್ಥಾಪನೆಗೆ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ ಬಳ್ಳಾರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಎರಡು ಬೆಟಾಲಿಯನ್‌ ಸ್ಥಾಪನೆಗೆ ಅನುಮೋದನೆ ನೀಡುವಂತೆ ಕೋರಿದ್ದಾರೆ.

ನಿರ್ಭಯಾ ನಿಧಿಯಡಿಯಲ್ಲಿ ಬೆಂಗಳೂರು ನಗರದಂತೆಯೇ ಮೈಸೂರು, ಹುಬ್ಬಳ್ಳಿ-ಧಾರವಾಡ (Hubli-Dharwad), ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ ಸೇಫ್‌ ಸಿಟಿ ಯೋಜನೆಯನ್ನು ತಲಾ 200 ಕೋಟಿ ರೂ. ಗಳಂತೆ ಒಟ್ಟು 1000 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಕ್ಕೆ ಅನುಮೋದನೆ ನೀಡಲು ಕೋರಿ ಕೊಂಡಿದ್ದಾರೆ.

ಹೈಕೋರ್ಟಿನ (Highcourt) ಆದೇಶದಂತೆ ಬಂಧಿಸುವ ಅಧಿಕಾರ ಹೊಂದಿರುವ ಸಿಬ್ಬಂದಿಗೆ Body worn camera ಕಡ್ಡಾಯವಾಗಿರುವುದರಿಂದ ರಾಜ್ಯದಲ್ಲಿ ಇನ್ನೂ 175 ಕೋಟಿ ರೂ. ವೆಚ್ಚದಲ್ಲಿ 58,546 Body worn camera ಖರೀದಿಸುವ ಅಗತ್ಯವಿದ್ದು, 100 ಕೋಟಿ ರೂ. ನೆರವು ನೀಡುವಂತೆ ಮನವಿ ಸಲ್ಲಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಹಾಗೂ ಶಿಥಿಲಾವಸ್ಥೆಯಲ್ಲಿರುವ 100 ಪೊಲೀಸ್‌ ಠಾಣೆಗಳಿಗೆ ಹೊಸ ಕಟ್ಟಡವನ್ನು ತಲಾ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ 300 ಕೋಟಿ ರೂ. ಅಗತ್ಯವಿದೆ. ಇದಕ್ಕೆ ನೆರವು ಒದಗಿಸುವಂತೆಯೂ ಗೃಹ ಸಚಿವ ಅಮಿತ್‌ ಷಾ (Amit Shah) ಅವರನ್ನು ಕೇಳಿ ಕೊಂಡಿದ್ದಾರೆ.

ಪೊಲೀಸ್‌ ಕ್ಯಾಂಟೀನ್‌ (Police Canteen) ಸೌಲಭ್ಯ ಮಾದರಿಯಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿಗೂ ಕ್ಯಾಂಟೀನ್‌ ಸ್ಥಾಪನೆಗೆ ಅಗತ್ಯ ಅನುಮತಿಗಳನ್ನು ಒದಗಿಸುವುದು, ಪೊಲೀಸ್‌ ವಸತಿ ಗೃಹಗಳ ನಿರ್ಮಾಣಕ್ಕೆ ನೆರವು, ವಿಧಿವಿಜ್ಞಾನ ಪ್ರಯೋಗಾಲಯಗಳ ಆಧುನೀಕರಣಕ್ಕೆ ನೆರವು ಹಾಗೂ ರಾಜ್ಯದ ಪೊಲೀಸ್‌ ಪಡೆಯ ಬಲವರ್ಧನೆ ಸಂಬಂಧಿಸಿದ ಮತ್ತಿತರ ವಿಷಯಗಳ ಕುರಿತು ಸಹ ಸಿಎಂ ಸಿದ್ಧರಾಮಯ್ಯ (CM Siddaramaiah) ಮನವಿ ಸಲ್ಲಿಸಿದ್ದಾರೆ.

Exit mobile version