• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಅಮಿತ್‌ ಶಾರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ: ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಗೊಳಿಸುವಂತೆ ಸಿಎಂ ಆಗ್ರಹ

Bhavya by Bhavya
in ಪ್ರಮುಖ ಸುದ್ದಿ, ರಾಜ್ಯ
ಅಮಿತ್‌ ಶಾರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ: ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಗೊಳಿಸುವಂತೆ ಸಿಎಂ ಆಗ್ರಹ
0
SHARES
58
VIEWS
Share on FacebookShare on Twitter

New Delhi: ಕೇಂದ್ರಗೃಹ ಸಚಿವ ಅಮಿತ್‌ ಶಾ (Siddaramaiah met Amit Shah) ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪ್ರಕೃತಿ ವಿಕೋಪ ಕುರಿತಂತೆ ಉನ್ನತ

ಮಟ್ಟದ ಸಮಿತಿ ಸಭೆಯನ್ನು ತಕ್ಷಣವೇ ಕರೆದು ಕರ್ನಾಟಕಕ್ಕೆ (Karnataka) ಬರ ಪರಿಹಾರ ಬಿಡುಗಡೆಗೆ ಕ್ರಮ ವಹಿಸುವಂತೆ ಆಗ್ರಹಿಸಿದ್ದಾರೆ.

236 ತಾಲೂಕುಗಳಲ್ಲಿ 223 ತಾಲೂಕುಗಳು ಬರ ಪೀಡಿತವಾಗಿದ್ದು, ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದೆ. ಸುಮಾರು 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ಇದರಿಂದಾಗಿ

ರೈತರು ಅದರಲ್ಲೂ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ (Siddaramaiah met Amit Shah) ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ.

ರಾಜ್ಯ ಸರ್ಕಾರವು ಎನ್​ಡಿಆರ್​ಎಫ್ (NDRF) ಮಾರ್ಗಸೂಚಿಯನ್ವಯ ಬರ ಪರಿಹಾರ ಬಿಡುಗಡೆಗಾಗಿ ಮೊದಲ ಪ್ರಸ್ತಾವನೆ ಸಲ್ಲಿಸಿ ಮೂರು ತಿಂಗಳು ಕಳೆದಿದೆ. ಆದ್ದರಿಂದ ಕೂಡಲೇ ಉನ್ನತ ಮಟ್ಟದ

ಸಮಿತಿ ಸಭೆ ನಡೆಸಿ 18,177.44 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಯಾವುದಕ್ಕೆ ಎಷ್ಟು ಅನುದಾನ?
೧. 4663.12 ಕೋಟಿ ರೂಪಾಯಿ ಇನ್‌ಪುಟ್‌ ಸಬ್ಸಿಡಿ,
೨. 12,577.86 ಕೋಟಿ ರೂ. ತುರ್ತು ಪರಿಹಾರ,
೩. 566.78 ಕೋಟಿ ರೂ ಕುಡಿಯುವ ನೀರಿಗಾಗಿ
೪. 363.68 ಕೋಟಿ ರೂ ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.

ಸಣ್ಣ ಮತ್ತು ಅತೀ ಸಣ್ಣ ರೈತರನ್ನು ಪರಿಗಣಿಸುವಾಗ ಕೇಂದ್ರ ಸರ್ಕಾರವು 2015-16ರ ಕೃಷಿ ಗಣತಿಯ ದತ್ತಾಂಶವನ್ನು ಪರಿಗಣಿಸುತ್ತಿದೆ. ಆದರೆ ಇದು 8 ವರ್ಷ ಹಳೆಯ ಮಾಹಿತಿಯಾಗಿದ್ದು, ಆಸ್ತಿ ವಿಭಜನೆ

Siddaramaiah met Amit Shah

ಮತ್ತಿತರ ಕಾರಣಗಳಿಂದ ಸಣ್ಣ ಮತ್ತು ಅತಿ ಸಣ್ಣ ರೈತರ ಸಂಖ್ಯೆ ಹೆಚ್ಚಾಗಿದ್ದು, 83 ಲಕ್ಷಕ್ಕೂ ಹೆಚ್ಚಿದೆ. ಪಿಎಂ-ಕಿಸಾನ್‌ ಯೋಜನೆಗೆ ರಾಜ್ಯದ ರೈತರ ದತ್ತಾಂಶ ಸಂಗ್ರಹಿಸುವ ತಂತ್ರಾಂಶ ಫ್ರೂಟ್ಸ್‌ನಲ್ಲಿ

ದಾಖಲಿಸಿದ ಮಾಹಿತಿಯನ್ನು ಪರಿಗಣಿಸಲಾಗುತ್ತಿದೆ. ಅಂತೆಯೇ ಬೆಳೆ ಪರಿಹಾರ ವಿತರಣೆಗೂ ಈ ದತ್ತಾಂಶವನ್ನು ಪರಿಗಣಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದರು.

ಸೆಪ್ಟೆಂಬರ್ ಅಲ್ಲಿ ಮನವಿ ಸಲ್ಲಿಕೆ
ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ 22-09-2023 ರಂದ ಸಲ್ಲಿಸಲಾಗಿದ್ದು, ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್‌ ತಿಂಗಳ

4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಆದ್ದರಿಂದ ಅಕ್ಟೋಬರ್‌ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ

ಎನ್‌ಡಿಆರ್ ಎಫ್ ಅಡಿ 17,901.73 ಕೋಟಿ ರೂ ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು.ತುರ್ತು ಪರಿಹಾರದ 12,577.86 ಕೋಟಿ ರೂ. ಮೊತ್ತವೂ ಸೇರಿದೆ.

ನವೆಂಬರ್‌ 4 ರಂದು ಹೆಚ್ಚುವರಿಯಾಗಿ 7 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177.44 ಕೋಟಿ ರೂ.

ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಇದನ್ನು ಓದಿ: ಮೇಕೆದಾಟುಗೆ ಬೇಗ ಅನುಮತಿ ಕೊಡಿಸುವಂತೆ ಮೋದಿ ಅವರನ್ನು ಒತ್ತಾಯಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

  • ಭವ್ಯಶ್ರೀ ಆರ್ ಜೆ
Tags: Amit Shahdrought reliefFundKarnatakaSiddaramaiah

Related News

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ
ಪ್ರಮುಖ ಸುದ್ದಿ

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ

May 9, 2026
ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ
ಪ್ರಮುಖ ಸುದ್ದಿ

ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

May 9, 2026
ಪಂಚರಾಜ್ಯ ಫಲಿತಾಂಶ: ಬಂಗಾಳದಲ್ಲಿ ಅರಳಿದ ಕಮಲ, ತಮಿಳುನಾಡಿನಲ್ಲಿ ವಿಜಯ್ ಜಯ,ದೀದಿ-ಸ್ಟಾಲಿನ್-ಪಿಣರಾಯಿ ಮಹಾ ಪತನ
ಪ್ರಮುಖ ಸುದ್ದಿ

ಮ್ಯಾಜಿಕ್ ಸಂಖ್ಯೆಗೆ ಇನ್ನೂ ಎರಡು ಸ್ಥಾನ ಕೊರತೆ: ಟಿವಿಕೆ ಸರ್ಕಾರ ರಚನೆಗೆ ಮುಂದುವರಿದ ಕಸರತ್ತು

May 9, 2026
ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ
ಪ್ರಮುಖ ಸುದ್ದಿ

ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ

May 8, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.