• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸರ್ಕಾರ ಸಂಪೂರ್ಣ ಸ್ಥಗಿತಗೊಂಡಿದೆ : ಸಿದ್ದರಾಮಯ್ಯ

Kiran K by Kiran K
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಸರ್ಕಾರ ಸಂಪೂರ್ಣ ಸ್ಥಗಿತಗೊಂಡಿದೆ : ಸಿದ್ದರಾಮಯ್ಯ
0
SHARES
2
VIEWS
Share on FacebookShare on Twitter

ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಜನರ ನೆರವಿಗೆ ಧಾವಿಸಬೇಕಿರುವ ಸರ್ಕಾರ ಸಂಪೂರ್ಣ ಸ್ಥಗಿತಗೊಂಡಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‍ ಮಾಡಿರುವ ಸಿದ್ದರಾಮಯ್ಯ, ಕಳೆದರಡು ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆ, ಏರುತ್ತಿರುವ ನೆರೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕಾಗಿರುವ ಸರ್ಕಾರ ಸಂಪೂರ್ಣ ಸ್ಥಗಿತಗೊಂಡಿದೆ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಮಾತ್ರವಲ್ಲ ಉತ್ತರ ಕರ್ನಾಟಕದಲ್ಲಿಯೂ ಮಳೆಯಿಂದಾಗಿ ಜನ ಪ್ರವಾಹದ ಭೀತಿಯಲ್ಲಿದ್ದಾರೆ. ರಾಜ್ಯ ಸರ್ಕಾರ ತಕ್ಷಣ ಕಾರ್ಯಪ್ರವೃತ್ತವಾಗಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಅವರಿಗೆ ಊಟ-ವಸತಿ ವ್ಯವಸ್ಥೆ ಕಲ್ಪಿಸಿ ಅವರಲ್ಲಿ ಧೈರ್ಯ ತುಂಬುವ ಕೆಲಸ ಮಾಡಬೇಕಿದೆ ಎಂದು ಒತ್ತಾಯಿಸಿದ್ದಾರೆ.
ಅಲ್ಲದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಎಂ, ತಕ್ಷಣ ಹಿರಿಯ ಸಹದ್ಯೋಗಿಗಳಿಗೆ ಜವಾಬ್ದಾಳಿ ಹಂಚಿ ಅತಿವೃಷ್ಟಿಯ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ವ್ಯವಸ್ಥೆ ಮಾಡಬೇಕು. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರನ್ನು ಸ್ಥಳಕ್ಕೆ ಕಳಿಸಿ, ಪ್ರತ್ಯಕ್ಷ ವರದಿಯನ್ನು ತರಿಸಿಕೊಳ್ಳಬೇಕೆಂದು ಸಲಹೆ ನೀಡಿದ್ದಾರೆ.


ಅಲ್ಲದೆ, ಕಳೆದ ವರ್ಷದ ಆಗಸ್ಟ್-ಅಕ್ಟೋಬರ್ ತಿಂಗಳ ಪ್ರವಾಹದಿಂದ ಜನತೆ ಇನ್ನೂ ಚೇತರಿಸಿಕೊಂಡಿಲ್ಲ. ಹಳೆಯ ಹಾನಿಯ ಪರಿಹಾರ ಕಾರ್ಯವೇ ಇನ್ನೂ ಪೂರ್ಣಗೊಂಡಿಲ್ಲ. ನಿರಂತರವಾಗಿ ಈ ಬಗ್ಗೆ ಎಚ್ಚರಿಸುತ್ತಿದ್ದರೂ ಸರ್ಕಾರ ಸ್ಪಂದಿಸಿಲ್ಲ. ರಾಜ್ಯ ಸರ್ಕಾರದ ನಿರ್ಲಕ್ಷ್ಯಕ್ಕೆ ಅಮಾಯಕ ಜನರು ಬಲಿಯಾಗುತ್ತಿದ್ದಾರೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.


ಇನ್ನೂ ಕಂದಾಯ ಸಚಿವರೂ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರವಾಹ ನಿಯಂತ್ರಣ ಮತ್ತು ಪರಿಹಾರ ಕಾರ್ಯದಲ್ಲಿ ಕಂದಾಯ ಇಲಾಖೆ ಜವಾಬ್ದಾರಿ ಹೆಚ್ಚಿರುವುದರಿಂದ ಪೂರಕ ವ್ಯವಸ್ಥೆ ಮಾಡುವ ಬಗ್ಗೆ ಮುಖ್ಯಮಂತ್ರಿಗಳು ಗಮನಹರಿಸಬೇಕೆಂದು ಆಗ್ರಹಿಸಿದ್ದಾರೆ.

Related News

ಬಿಡದಿ ಟೌನ್‌ಶಿಪ್‌ ಯೋಜನೆಗೆ ಎರಡು ತಿಂಗಳ ವಿರಾಮ: ಸಮಿತಿ ರಚನೆಗೆ ಸಿಎಂ ಘೋಷಣೆ
ಪ್ರಮುಖ ಸುದ್ದಿ

ಬಿಡದಿ ಟೌನ್‌ಶಿಪ್‌ ಯೋಜನೆಗೆ ಎರಡು ತಿಂಗಳ ವಿರಾಮ: ಸಮಿತಿ ರಚನೆಗೆ ಸಿಎಂ ಘೋಷಣೆ

July 15, 2026
ಫ್ರಾನ್ಸ್‌ ವಿರುದ್ಧ 2-0 ಜಯ: ಫಿಫಾ ವಿಶ್ವಕಪ್‌ 2026 ಫೈನಲ್‌ಗೆ ಸ್ಪೇನ್ ಭರ್ಜರಿ ಎಂಟ್ರಿ
Sports

ಫ್ರಾನ್ಸ್‌ ವಿರುದ್ಧ 2-0 ಜಯ: ಫಿಫಾ ವಿಶ್ವಕಪ್‌ 2026 ಫೈನಲ್‌ಗೆ ಸ್ಪೇನ್ ಭರ್ಜರಿ ಎಂಟ್ರಿ

July 15, 2026
ಅಪಾರ್ಟ್‌ಮೆಂಟ್ ಮಾಲೀಕರ ಹಕ್ಕುಗಳಿಗೆ ಕಾನೂನು ರಕ್ಷಣೆ: ಎಲ್ಲರ ಅಭಿಪ್ರಾಯ ಪಡೆದು ಸಮಗ್ರ ಮಸೂದೆ ಜಾರಿ ಎಂದ ಸಿಎಂ ಡಿ.ಕೆ. ಶಿವಕುಮಾರ್
ಪ್ರಮುಖ ಸುದ್ದಿ

ಅಪಾರ್ಟ್‌ಮೆಂಟ್ ಮಾಲೀಕರ ಹಕ್ಕುಗಳಿಗೆ ಕಾನೂನು ರಕ್ಷಣೆ: ಎಲ್ಲರ ಅಭಿಪ್ರಾಯ ಪಡೆದು ಸಮಗ್ರ ಮಸೂದೆ ಜಾರಿ ಎಂದ ಸಿಎಂ ಡಿ.ಕೆ. ಶಿವಕುಮಾರ್

July 15, 2026
ಮತ್ತೆ ಫುಟ್‌ಪಾತ್‌ ಮೇಲೆ ಅಂಗಡಿ ಹಾಕಿದರೆ ಭಾರೀ ದಂಡ: ಬಿಬಿಎಂಪಿ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ
ಪ್ರಮುಖ ಸುದ್ದಿ

ಮತ್ತೆ ಫುಟ್‌ಪಾತ್‌ ಮೇಲೆ ಅಂಗಡಿ ಹಾಕಿದರೆ ಭಾರೀ ದಂಡ: ಬಿಬಿಎಂಪಿ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ

July 15, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.