ತಿಳಿಗೇಡಿ ಯುವಕನಿಂದ ಪಠ್ಯ ಪರಿಷ್ಕರಣೆ : ಸಿದ್ದರಾಮಯ್ಯ!

Siddaramaiah

2022-23ರ ನೂತನ ಶೈಕ್ಷಣಿಕ ಪಠ್ಯ ಪರಿಷ್ಕರಣೆಗೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಈ ಹಿಂದೆ ಸಾಹಿತಿ ಬರಗೂರು ರಾಮಚಂದ್ರಪ್ಪ(Baraguru Ramachandrapa) ನೇತೃತ್ವ ಸಮಿತಿ ಸೇರ್ಪಡೆ ಮಾಡಿದ್ದ ಕೆಲ ಅಧ್ಯಾಯಗಳನ್ನು ಕೈಬಿಟ್ಟು, ಹೊಸ ಅಧ್ಯಾಯಗಳನ್ನು ಬರಹಗಾರ(Writer) ರೋಹಿತ್ ಚಕ್ರತೀರ್ಥ(Rohit Chakravarthi) ನೇತೃತ್ವದ ಸಮಿತಿ ಸೇರ್ಪಡೆ ಮಾಡಿದೆ.

ಮುಖ್ಯವಾಗಿ ಆರ್‍ಎಸ್‍ಎಸ್ ಸಂಸ್ಥಾಪಕ(RSS Founder) ಹೆಡಗೇವಾರ್(Hedgewar) ಅವರ ಭಾಷಣವನ್ನು ಸೇರ್ಪಡೆ ಮಾಡಿರುವುದಕ್ಕೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಈ ಕುರಿತು ವಿಪಕ್ಷ ನಾಯಕ(Opposition Leader) ಸಿದ್ದರಾಮಯ್ಯ(Siddaramaiah) ಸರಣಿ ಟ್ವೀಟ್‍ಗಳ(Tweet) ಮೂಲಕ ವಾಗ್ದಾಳಿ ನಡೆಸಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ನೀಡಿರುವ ಕರಡನ್ನು ತಕ್ಷಣ ವಾಪಸು ಪಡೆದು,

ಸಮಿತಿಯನ್ನು ಬರ್ಖಾಸ್ತು ಗೊಳಿಸಬೇಕು ಮತ್ತು ನಾಡಿನ ಚಿಂತಕರು ಮತ್ತು ಶಿಕ್ಷಣ ತಜ್ಞರ ಜೊತೆ ಸಮಾಲೋಚನೆ ನಡೆಸಿ ಹೊಸ ಸಮಿತಿಯನ್ನು ರಚಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇನೆ. #ಪಠ್ಯಪರಿಷ್ಕರಣೆ, ಪಠ್ಯಪುಸ್ತಕ ಪರಿಷ್ಕರಣೆಯ ವಿವಾದದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕ ತಲೆ ತಗ್ಗಿಸುವಂತಾಗಿದೆ. ಪಠ್ಯಪುಸ್ತಕ ಪರಿಷ್ಕರಣೆಯಂತಹ ಗಂಭೀರ ಕಾರ್ಯವನ್ನು ನಾಡಿನ ಹಿರಿಯ ಲೇಖಕರು, ಸಮಾಜ ಸುಧಾರಕರನ್ನು ಅವಹೇಳನ ಮಾಡುತ್ತಾ ಬಂದಿರುವ ಅನರ್ಹ, ಪೂರ್ವಗ್ರಹ ಪೀಡಿತ ವ್ಯಕ್ತಿಯಿಂದ ಮಾಡಿಸಿರುವುದೇ ನಾಡು-ನುಡಿಗೆ ಬಗೆದಿರುವ ದ್ರೋಹ.


ರಾಜ್ಯದಲ್ಲಿ ರಾಷ್ಟ್ರ-ಅಂತರರಾಷ್ಟ್ರೀಯ ಮಟ್ಟದಲ್ಲಿ ಗೌರವಕ್ಕೆ ಪಾತ್ರರಾಗಿರುವ ಸಾಹಿತಿಗಳು, ಚಿಂತಕರು ಮತ್ತು ಶಿಕ್ಷಣ ತಜ್ಞರಿರುವಾಗ ಸಂಘ ಪರಿವಾರಕ್ಕೆ ಸೇರಿದ ತಿಳಿಗೇಡಿ ಯುವಕನಿಂದ #ಪಠ್ಯಪರಿಷ್ಕರಣೆ ಮಾಡಿಸಿರುವುದು ರಾಜ್ಯದ ಜನತೆಗೆ ಮಾಡಿರುವ ಅವಮಾನ. ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳೇ ನಿಜವೆಂದಾದರೆ ಇದು ಅಕ್ಷಮ್ಯ ಅಪರಾಧ. ಈ ಹಿನ್ನೆಲೆಯಲ್ಲಿ ಅನಗತ್ಯ ಊಹಪೋಹ ಮತ್ತು ಸಂಘರ್ಷಕ್ಕೆ ಅವಕಾಶ ನೀಡದೆ ಮುಖ್ಯಮಂತ್ರಿ ಅವರೇ ಖುದ್ದಾಗಿ ಸ್ಪಷ್ಟೀಕರಣ ನೀಡಬೇಕು.

ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಕೇಳಿ ಬರುತ್ತಿರುವ ಆಕ್ಷೇಪಗಳ ಹಿನ್ನೆಲೆಯಲ್ಲಿ ಪರಿಷ್ಕೃತ ಪಠ್ಯದ ಮುದ್ರಣವನ್ನು ತಕ್ಷಣ ತಡೆಹಿಡಿದು ರಾಜ್ಯದ ಶಿಕ್ಷಣ ತಜ್ಞರು, ಸಾಹಿತಿಗಳು ಮತ್ತು ಚಿಂತಕರ ಜೊತೆ ಸಮಾಲೋಚನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಬೊಮ್ಮಾಯಿ ಅವರನ್ನು ಆಗ್ರಹಪಡಿಸುತ್ತೇನೆ. #ಪಠ್ಯಪರಿಷ್ಕರಣೆ

Exit mobile version