ರಾಜ್ಯದ 40% ಭ್ರಷ್ಟಾಚಾರದಲ್ಲಿ ಮೋದಿಗೂ ಸಿಗ್ತಿದೆಯಾ ಪಾಲು? ‘ತುಮ್ ಖಾವೋ, ಮುಜೆ ಬಿ ಖಿಲಾವೋ’ ಅಂತ ಆಗಿದೆಯಾ ನಿಮ್ಮ ಘೋಷಣೆ? ಸಿದ್ದರಾಮಯ್ಯ ಪ್ರಶ್ನೆ

Karnataka : ನಾ ಖಾವೂಂಗಾ, ನಾ ಖಾನೆ ದೂಂಗಾ ಎಂಬ ನಿಮ್ಮ ಘೋಷಣೆಯನ್ನು ಈಗ ನೀವು ‘ತುಮ್ ಖಾವೋ, ಮುಜೆ ಬಿ ಖಿಲಾವೋ’ (ನೀವು ತಿನ್ನಿ, ನನಗೂ ತಿನ್ನಿಸಿ) ಎಂದು ಬದಲಾಯಿಸಿ ಕೊಂಡಿದ್ದೀರಾ ಮೋದಿ (Narendra Modi) ಅವರೇ? ಬಿಜೆಪಿಯ (BJP) ಸದ್ಯದ ಸರ್ವಶಕ್ತ ನಾಯಕರಾದ ನಿಮ್ಮ ಕೃಪಾಶೀರ್ವಾದ(Siddaramaiah question to Modi) ಇಲ್ಲದೆ ಭ್ರಷ್ಟ ಶಾಸಕರೊಬ್ಬರು ಕಾನೂನಿಗೆ ಅಂಜದೆ,

ಮಾನ-ಮರ್ಯಾದೆಗೆ ಅಳುಕದೆ ಪ್ರಜಾತಂತ್ರ ವ್ಯವಸ್ಥೆಯನ್ನೇ ಅಣಕಿಸುವಂತೆ ಮೆರವಣಿಗೆ ಮಾಡಿಸಿಕೊಳ್ಳಲು ಸಾಧ್ಯವೇ ಮೋದಿಜೀ ಅವರೇ?

ಭ್ರಷ್ಟ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಮಗನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಲೋಕಾಯುಕ್ತ ಪೊಲೀಸರು ಸಚಿತ್ರವಾಗಿ (Siddaramaiah question to Modi) ಜಗತ್ತಿನ ಮುಂದೆ ಬಿಚ್ಚಿಟ್ಟರೂ ನೀವು ಮಾತ್ರ ಬಾಯಿ ಬಿಚ್ಚುತ್ತಿಲ್ಲ ಯಾಕೆ?

ಅವರ ಲೂಟಿಯಲ್ಲಿ ನಿಮಗೂ ಪಾಲಿದೆಯಾ ಮೋದಿ ಅವರೇ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅವರು ಪ್ರಧಾನಿ ಮೋದಿಯವರನ್ನು ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ (Tweet) ಮಾಡಿರುವ ಅವರು,

ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಯಲ್ಲಿ ಎಲ್ಲಿಯ ವರೆಗೆ ಲಂಚದ ಹಣದಲ್ಲಿ ಪಾಲು ಬಿಜೆಪಿ ಹೈಕಮಾಂಡ್ ಗೆ ಸಂದಾಯವಾಗುತ್ತೋ ಅಲ್ಲಿಯ ವರೆಗೆ ಭ್ರಷ್ಟರು, ದುಷ್ಟರು ಎಲ್ಲರೂ ಸುರಕ್ಷಿತ ಎಂದು ತಿಳಿದುಕೊಳ್ಳಬಹುದೇ?

ಇದನ್ನೂ ಓದಿ : https://vijayatimes.com/indian-premier-league-2023/

ಹಿಂದೆ ಕರ್ನಾಟಕಕ್ಕೆ ಬಂದಿದ್ದ ನೀವು ಕರ್ನಾಟಕದ ಕಾಂಗ್ರೆಸ್ (Congress) ದೆಹಲಿಯ ಹೈಕಮಾಂಡ್‌ಗೆ ಎಟಿಎಂ ಎಂದು ಗೇಲಿ ಮಾಡಿದ್ದೀರಿ.

ನಿಮ್ಮ ಸಚಿವರು ಮತ್ತು ಶಾಸಕರು ಕೋಟಿ ಕೋಟಿ ಲೂಟಿ ಮಾಡಿ ನಿರ್ಭೀತಿಯಿಂದ ಇದ್ದಾರೆ ಎಂದರೆ ಕರ್ನಾಟಕ ರಾಜ್ಯ ನಿಮ್ಮ ಪಕ್ಷದ ಎಟಿಎಂ ಎಂದು ಅರ್ಥೈಸಬಹುದಾ ಮೋದಿಜೀ?

ನಾನು ಮುಖ್ಯಮಂತ್ರಿಯಾಗಿದ್ದಾಗ ಸಚಿವ ಸಂತೋಷ್ ಲಾಡ್ ಅವರ ಮೇಲೆ ಅಕ್ರಮ ಗಣಿಗಾರಿಕೆಯ ಆರೋಪ ಕೇಳಿ ಬಂದಿದ್ದಕ್ಕಾಗಿ ರಾಜೀನಾಮೆ ಕೊಡಿಸಿದ್ದೆ.

ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೂ ನಮ್ಮ ಸರ್ಕಾರದ ವಿರುದ್ಧದ ಎಂಟು ಆರೋಪಗಳನ್ನು ಧೈರ್ಯದಿಂದ ಸಿಬಿಐ (CBI) ತನಿಖೆಗೆ ಒಪ್ಪಿಸಿದ್ದೆ ಗೊತ್ತಾ ಮೋದಿಜೀ? ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ : https://vijayatimes.com/salary-received-by-priyanka-in-citadel/

ಇನ್ನೊಂದು ಟ್ವೀಟ್‌ನಲ್ಲಿ, ಕಳೆದ ಬಾರಿಯ ಚುನಾವಣೆಯ ಕಾಲದಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ 10% ಕಮಿಷನ್ ಸರ್ಕಾರ ಎಂದು ಆಧಾರರಹಿತ ಆರೋಪ ಮಾಡಿದ್ದಿರಿ.

ಈ ಬಾರಿ ನಿಮ್ಮ ಸರ್ಕಾರ 40% ಕಮಿಷನ್ ಕೇಳಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಗುತ್ತಿಗೆದಾರರು ನಿಮಗೆ ಪತ್ರ ಬರೆದರೂ ಯಾಕೆ ಉತ್ತರಿಸುತ್ತಿಲ್ಲ ಮೋದಿಜೀ?

ಸದನದಲ್ಲಿ ಬ್ಲೂಫಿಲ್ಮ್ ನೋಡಿದ್ದ ಕಾರಣಕ್ಕಾಗಿ ಮೂವರು ಬಿಜೆಪಿ ನಾಯಕರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು.

ಅತ್ಯಾಚಾರದ ಆರೋಪ ಹೊತ್ತಿದ್ದ ಇನ್ನೊಬ್ಬ ಸಚಿವರೂ ರಾಜೀನಾಮೆ ನೀಡಬೇಕಾಯಿತು. ಅದು ವಾಜಪೇಯಿ ಕಾಲ, ಇದು ಮೋದಿ ಕಾಲವೇ? ಎಂದು ಟೀಕಿಸಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, ವಾಜಪೇಯಿ ನೇತೃತ್ವದಲ್ಲಿ ಬಿಜೆಪಿ ಇದ್ದಾಗ ಮುಖ್ಯಮಂತ್ರಿ ಯಡಿಯೂರಪ್ಪ (B. S. Yediyurappa) ಮಾತ್ರವಲ್ಲ ಜನಾರ್ದನ ರೆಡ್ಡಿ,

ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಕೃಷ್ಣಯ್ಯ ಶೆಟ್ಟಿ, ಸಂಪಂಗಿ ಮೊದಲಾದವರು ಭ್ರಷ್ಟಾಚಾರದ ಆರೋಪದಲ್ಲಿ ಸಚಿವ ಸ್ಥಾನವನ್ನು ಕಳೆದುಕೊಂಡು ಜೈಲುಪಾಲಾದರಲ್ಲಾ?

ಇದನ್ನೂ ಓದಿ : https://vijayatimes.com/minister-somanna-statement/

ಈಗ್ಯಾಕೆ ಹೀಗೆ ಮೋದಿಜೀ? ಅಟಲಬಿಹಾರಿ ವಾಜಪೇಯಿ (Atal Bihari Vajpayee) ಪ್ರಧಾನಿಯಾಗಿದ್ದಾಗ ಪಕ್ಷದ ಅಧ್ಯಕ್ಷರಾಗಿದ್ದ ಬಂಗಾರು ಲಕ್ಷ್ಮಣ್ ಎಂಬ ದಲಿತ ನಾಯಕರು ಲಂಚ ಪಡೆಯುವಾಗ ಕ್ಯಾಮೆರಾದ ಕಣ್ಣಲ್ಲಿ ಸಿಕ್ಕಿ ಹಾಕಿಕೊಂಡಿದ್ದರು. ತಕ್ಷಣ ವಾಜಪೇಯಿ ಅವರು ಲಕ್ಷ್ಮಣ್ ಅವರಿಂದ ರಾಜೀನಾಮೆ ಕೊಡಿಸಿಲ್ಲವೇ ಮೋದಿಜೀ? ಎಂದು ಪ್ರಶ್ನಿಸಿದ್ದಾರೆ.

Exit mobile version