‘ಉತ್ತರ ಹೇಳಿ ಮೋದಿ’ ಸಿದ್ದರಾಮಯ್ಯ ಸರಣಿ ಪ್ರಶ್ನೆ!

ಪ್ರಧಾನಿ(PrimeMinister) ನರೇಂದ್ರ ಮೋದಿ(Narendra Modi) ಅವರು ಇಂದಿನಿಂದ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಇಂದು ಬೆಂಗಳೂರಿಗೆ(Bengaluru) ಆಗಮಿಸಲಿದ್ದಾರೆ. ಮೋದಿ ಆಗಮನದ ಹಿನ್ನಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಅವರು ‘ಉತ್ತರಹೇಳಿಮೋದಿ’ ಹ್ಯಾಷ್‍ಟ್ಯಾಗ್(Hashtag) ಬಳಸಿ ಟ್ವೀಟರ್‍ನಲ್ಲಿ(Tweeter) ಪ್ರಧಾನಿ ನರೇಂದ್ರ ಮೋದಿಯವರಿಗೆ ಕೆಲ ಪ್ರಶ್ನೆಗಳನ್ನು ಕೇಳಿದ್ದಾರೆ.

ದೇಶದ ರೈತರ ಪ್ರತಿರೋಧಕ್ಕೆ ಮಣಿದು ಕೇಂದ್ರ ಸರ್ಕಾರ(Central Government) ಕರಾಳ ಕೃಷಿ ಕಾಯ್ದೆಗಳನ್ನು ರದ್ದುಪಡಿಸಿದೆ. ಆದರೆ ರಾಜ್ಯ ಸರ್ಕಾರ(State Government) ಇಲ್ಲಿಯವರೆಗೂ ಕೃಷಿ ಕಾಯ್ದೆಗಳನ್ನು(Farm Laws) ರದ್ದು ಮಾಡಿಲ್ಲ. ಇದು ನಿಮ್ಮ ಸೂಚನೆಯಂತೆ ನಡೆದಿದ್ದೋ..? ಅಥವಾ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಯೋ..? ಇನ್ನು ಬೆಂಗಳೂರು ನಗರಕ್ಕೆ ಕುಡಿಯುವ ನೀರುಣಿಸುವ ಮೇಕೆದಾಟು ಯೋಜನೆಗೆ(Mekedatu Yojana) ಅನುಮತಿ ನೀಡಲು ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿರುವುದೇಕೆ..?

ಇದಕ್ಕೆ ಕಾರಣ ತಮಿಳುನಾಡು ಸರ್ಕಾರ(Tamilnadu Government) ಒತ್ತಡವೇ..? ಅಥವಾ ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರದ ಪೂರ್ವಗ್ರಹವೇ..? ರಾಜ್ಯಗಳು ಪರಸ್ಪರ ಸಂಪರ್ಕ ಭಾಷೆಯಾಗಿ ಹಿಂದಿ(Hindi) ಬಳಕೆ ಮಾಡಬೇಕೆಂದು ಹೇಳುವ ಮೂಲಕ ಗೃಹ ಸಚಿವ ಅಮಿತ್ ಶಾ(Amit Shah) ಅವರು ರಾಜ್ಯಗಳ ಮೇಲೆ ಒತ್ತಾಯ ಪೂರ್ವಕವಾಗಿ ಹಿಂದಿಯನ್ನು ಹೇರಲು ಹೊರಟಿದ್ದಾರೆ. ಹೀಗಾಗಿ ನರೇಂದ್ರ ಮೋದಿಯವರೇ ಕನ್ನಡ ಅಸ್ಮಿಯತೆಯ ಬಗ್ಗೆ ನಿಮ್ಮ ನಿಲುವೇನು..? ನಿಮ್ಮ ಮೌನ ಅಮಿತ್ ಶಾ ಅವರ ಹೇಳಿಕೆಗೆ ಸಹಮತವೇ..?

ಇನ್ನು ಬೆಂಗಳೂರು ಜನತೆಯ ಬಹುಕಾಲದ ಬೇಡಿಕೆಯಾದ ಉಪನಗರ ರೈಲು ಯೋಜನೆ ನೆನೆಗುದಿಗೆ ಬೀಳಲು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಕಾರಣವಲ್ಲವೇ..? ಈ ಯೋಜನೆಯ ಚಾಲನೆ ಇಷ್ಟೊಂದು ವಿಳಂಬವಾಗಲು ಕೇಂದ್ರ ಸರ್ಕಾರವೇ ಹೊಣೆಯಲ್ಲವೇ..? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನಾಲ್ಕು ಪ್ರಶ್ನೆಗಳನ್ನು ಪ್ರಧಾನಿ ಮೋದಿ ಮುಂದಿಟ್ಟಿದ್ದಾರೆ.

Latest News

ದೇಶ-ವಿದೇಶ

ಒಡಿಶಾದಲ್ಲಿ ಆಘಾತಕಾರಿ ಘಟನೆ ; ಹಾಡಹಗಲೇ ವೃದ್ಧನನ್ನು ಕಂಬಕ್ಕೆ ಕಟ್ಟಿ, ಥಳಿಸಿ ಕೊಂದ ಕುಟುಂಬಸ್ಥರು!

ಕೊರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡಹಗಲೇ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ತಮ್ಮ ಕುಟುಂಬಸ್ಥರೇ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!

ಮಾಹಿತಿ

ಕಿಡ್ನಿ ಸ್ಟೋನ್‌ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಪರಿಹಾರ ; ಈ ಸರಳ ಪರಿಹಾರ ಪಾಲಿಸಿ

ಕೆಲವು ಮನೆಮದ್ದುಗಳು(Home Remedies) ಆರಂಭಿಕ ಹಂತದ ಕಿಡ್ನಿಸ್ಟೋನ್ ಸಮಸ್ಯೆಗೆ ಪರಿಹಾರ ನೀಡುತ್ತವೆ. ಅಂತಹ ಮನೆಮದ್ದುಗಳ ವಿವರ ಇಲ್ಲಿದೆ ನೋಡಿ.

ಮಾಹಿತಿ

ದೇಹಕ್ಕೆ ಪ್ರೋಟಿನ್‌ ಕೊರತೆಯಾದ್ರೆ `ಈ’ 10 ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ

ಯುವಜನರ ದೈಹಿಕ ಬೆಳವಣಿಗೆಯಲ್ಲಿ ಪ್ರೋಟಿನ್‌ ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿನ ಸ್ನಾಯುಗಳು, ಕಿಣ್ವಗಳು ಮತ್ತು ಹಾರ್ಮೋನುಗಳಿಗೆ ಪ್ರೋಟಿನ್ ಅತ್ಯಂತ ಅವಶ್ಯಕವಾಗಿದೆ.