Bengaluru : ಇಂದಿರಾ ಕ್ಯಾಂಟೀನ್‌: ನಗರದ ಬಡವರೆಲ್ಲರೂ ಶ್ರೀಮಂತರಾದರೇ? : ಸಿದ್ದರಾಮಯ್ಯ ಪ್ರಶ್ನೆ

Bengaluru : ಕಳಪೆ ದರ್ಜೆಯ ಊಟ-ತಿಂಡಿ ನೀಡಿ ಜನ ಬರುವುದಿಲ್ಲ ಎಂಬ ನೆಪವೊಡ್ಡಿ ಇಂದಿರಾ ಕ್ಯಾಂಟೀನ್(Indira Canteen) ಮುಚ್ಚುವುದು ರಾಜ್ಯ ಬಿಜೆಪಿ(State BJP) ಸರ್ಕಾರದ ಹುನ್ನಾರ. ಕ್ಯಾಂಟೀನ್ ಗಳಿಗೆ ಪ್ರತಿದಿನ ಬರುತ್ತಿದ್ದ 300-400 ಜನರ ಸಂಖ್ಯೆ ಈಗ 50-100ಕ್ಕೆ ಇಳಿದಿದೆಯಂತೆ.

Indira canteen

ನಗರದ ಬಡವರೆಲ್ಲರೂ ಶ್ರೀಮಂತರಾದರೇ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಈ ಕುರಿತು ಟ್ವೀಟ್‌(Tweet) ಮಾಡಿರುವ ಅವರು, ನಮ್ಮ ಸರ್ಕಾರ ಪ್ರಾರಂಭಿಸಿದ್ದ ಇಂದಿರಾ ಕ್ಯಾಂಟೀನ್ ಗಳಿಗೆ ಅನುದಾನ ನೀಡದೆ ರಾಜ್ಯ ಬಿಜೆಪಿ ಸರ್ಕಾರ ಬಡವರ ಹೊಟ್ಟೆಗೆ ಹೊಡೆಯಲು ಹೊರಟಿದೆ.

ಇದನ್ನೂ ಓದಿ : https://vijayatimes.com/jiona-chana-is-worlds-largest-family/

2017-2018, 2018-19ರಲ್ಲಿ ಕ್ರಮವಾಗಿ ರೂ.100 ಕೋಟಿ ಮತ್ತು ರೂ.145 ಕೋಟಿ ಅನುದಾನ ನೀಡಿದ್ದ ಬಿಬಿಎಂಪಿ(BBMP) ಈ ವರ್ಷ ಕೊಟ್ಟಿದ್ದು ಕೇವಲ ರೂ.60 ಕೋಟಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಇಂದಿರಾ ಕ್ಯಾಂಟೀನ್ಗೆ ಆಹಾರ ಅರಸಿ ಬರುವವರ ಸಂಖ್ಯೆಯಲ್ಲಿ ಭಾರೀ ಇಳಿಕೆ ಕಂಡಿದೆ.

siddaramaiah

ಇಂದಿರಾ ಕ್ಯಾಂಟೀನ್ನಲ್ಲಿ ಕಳಪೆ ದರ್ಜೆಯ ಊಟ-ತಿಂಡಿ ನೀಡುತ್ತಿದ್ದು, ಇದರಿಂದ ಗ್ರಾಹಕರ ಸಂಖ್ಯೆ ಅರ್ಧಕ್ಕರ್ಧ ಕುಸಿತವಾಗಿದೆ. ಈ ಹಿಂದೆ ಪ್ರತಿದಿನ 3.5 ಲಕ್ಷ ಮಂದಿ ಇಂದಿರಾ ಕ್ಯಾಂಟೀನ್ಗೆ ಬರುತ್ತಿದ್ದರು. ಇದೀಗ ಅದರ ಸಂಖ್ಯೆ 1.5 ಲಕ್ಷಕ್ಕೆ ಇಳಿಕೆಯಾಗಿದೆ. ಇನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 198 ಇಂದಿರಾ ಕ್ಯಾಂಟೀನ್ಗಳಿವೆ.

https://youtu.be/rzZ6nTC1Nws

ಈ ಪೈಕಿ 24 ಮೊಬೈಲ್ ಕ್ಯಾಂಟೀನ್ ಗಳಿವೆ. ಇನ್ನು 2017 ಆಗಸ್ಟ್ 15 ರಂದು ಅಂದಿನ ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿತ್ತು. ದುಡಿಯುವ ಕೆಳ ವರ್ಗದ ಜನಕ್ಕೆ ಕಡಿಮೆ ಬೆಲೆಯಲ್ಲಿ ಆಹಾರ ನೀಡೋದು ಈ ಯೋಜನೆಯ ಮುಖ್ಯ ಉದ್ದೇಶವಾಗಿತ್ತು.

Exit mobile version