Mangaluru : ಮಂಗಳೂರು ಬಾಂಬು ಸ್ಪೋಟ ಮತ್ತೊಮ್ಮೆ ರಾಜ್ಯದ ಗುಪ್ತಚರ ವಿಭಾಗ ಮತ್ತು ಗೃಹ ಇಲಾಖೆಯ ವೈಫಲ್ಯವನ್ನು ಎತ್ತಿ ತೋರಿಸಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah Reacts To Blast) ಆರೋಪಿಸಿದ್ದಾರೆ.

ಮಂಗಳೂರು ಆಟೋ ಸ್ಪೋಟದ ಕುರಿತು ಟ್ವೀಟ್(Tweet) ಮಾಡಿರುವ ಅವರು, ಮಂಗಳೂರು ಬಾಂಬು ಸ್ಪೋಟ ಮತ್ತೊಮ್ಮೆ ರಾಜ್ಯದ ಗುಪ್ತಚರ ವಿಭಾಗ ಮತ್ತು ಗೃಹ ಇಲಾಖೆಯ ವೈಫಲ್ಯವನ್ನು ಎತ್ತಿ ತೋರಿಸಿದೆ.
ಈ ಘಟನೆಯ ಬಗ್ಗೆ ಊಹಾಪೋಹಗಳ ಸುದ್ದಿಗಳನ್ನು ನಂಬಿ ಉದ್ರಿಕ್ತರಾಗದೆ ಜನತೆ ಸಂಯಮ ಮತ್ತು ಎಚ್ಚರದಿಂದ ಇರಬೇಕೆಂದು ರಾಜ್ಯದ ಜನರಲ್ಲಿ ಕೇಳಿಕೊಳ್ಳುತ್ತಿದ್ದೇನೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕರೇ ಭಯೋತ್ಪಾದಕ ಕೃತ್ಯ ಎಂದು ದೃಢೀಕರಿಸಿರುವ ಮಂಗಳೂರು ನಗರದ ಬಾಂಬು ಸ್ಪೋಟದ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ.
ಕಳವಳಕಾರಿಯಾದ ಈ ಘಟನೆಯ ಬಗ್ಗೆ ಪೊಲೀಸರು ತ್ವರಿತ ಗತಿಯಲ್ಲಿ ತನಿಖೆ ನಡೆಸಿ ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷೆಗೊಳಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ : https://vijayatimes.com/mp-kumarswamy-controversy/
ಮಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ(Auto Rickshaw) ಶನಿವಾರ ಸ್ಫೋಟ ಸಂಭವಿಸಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಪೊಲೀಸರು ಆರಂಭದಲ್ಲಿ ಇದೊಂದು ಸಾಮಾನ್ಯ ಸ್ಪೋಟ ಎಂದು ಭಾವಿಸಿದ್ದರು, ಆದರೆ ತನಿಖೆ ಮುಂದುವರೆದಂತೆ ತನಿಖಾಧಿಕಾರಿಗಳು ಪ್ರಕರಣದಲ್ಲಿ ಭಯೋತ್ಪಾದಕ ನಂಟಿರುವುದನ್ನು ಪತ್ತೆ ಮಾಡಿದ್ದಾರೆ.
ಮಂಗಳೂರು ಸ್ಫೋಟದಲ್ಲಿ ಆಟೋ ರಿಕ್ಷಾ ಚಾಲಕ ಹಾಗೂ ಓರ್ವ ಪ್ರಯಾಣಿಕನಿಗೆ ಗಂಭೀರ ಸುಟ್ಟ ಗಾಯಗಳಾಗಿವೆ. ಆಟೋ ರಿಕ್ಷಾ ಚಾಲಕನನ್ನು ವಿಚಾರಿಸಿದಾಗ,
ಪ್ರಯಾಣಿಕರು ಬ್ಯಾಗ್ನಲ್ಲಿ ಏನನ್ನೋ ಹೊತ್ತೊಯ್ದಿದ್ದು, ಬೆಂಕಿ ಹೊತ್ತಿಕೊಂಡು ವಾಹನಕ್ಕೆ ವ್ಯಾಪಿಸಿದೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

ಹೆಚ್ಚಿನ ತನಿಖೆಯು ಪೊಲೀಸರಿಗೆ ಭಯೋತ್ಪಾದನೆಯ ಸಂಚನ್ನು ಪತ್ತೆ ಮಾಡಲು ಸಾಧ್ಯವಾಗಿದೆ.
ತನಿಖಾಧಿಕಾರಿಗಳು ಪ್ರಮುಖ ಶಂಕಿತನ ಮನೆಯಿಂದ ಸ್ಫೋಟಕ ವಸ್ತುಗಳನ್ನು ಮತ್ತು ಹಲವಾರು ನಕಲಿ ಗುರುತಿನ ಚೀಟಿಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಘಟನೆಯ ನಂತರ ಮಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
https://youtu.be/DXZ9Sc0_agQ ಮುರುಗಮಲ್ಲ ನ್ಯಾಯಬೆಲೆ ಅಂಗಡಿಯಲ್ಲಿ ಹಗಲು ದರೋಡೆ.
ಮಂಗಳೂರು ವಿಮಾನ ನಿಲ್ದಾಣ, ಬೆಂಗಳೂರು ವಿಮಾನ ನಿಲ್ದಾಣ ಸೇರಿದಂತೆ ರಾಜ್ಯದ ಪ್ರಮುಖ ಸಂಸ್ಥೆಗಳ ಮೇಲೆಯೂ ದಾಳಿ ನಡೆಯುವ ಸಾಧ್ಯತೆ ಇದ್ದು, ಎಲ್ಲೆಡೆ ಭದ್ರತೆಯನ್ನು ಹೆಚ್ಚಿಸಲಾಗಿದೆ.
- ಮಹೇಶ್.ಪಿ.ಎಚ್