ಹಂದಿ ಮಾಂಸ ತಿಂದು ಮಸೀದಿಗೆ ಹೋಗ್ತಿರಾ? ಎಂದು ಸಂಸದ ಪ್ರತಾಪ ಸಿಂಹ(Pratap Simha) ಕೇಳಿದ್ದಾರೆ. ನಾನು ನನ್ನ ಜೀವನದಲ್ಲಿ ಹಂದಿ ಮಾಂಸ ತಿಂದಿಲ್ಲ, ತಿನ್ನುವವರನ್ನು ಬೇಡ ಎನ್ನುವುದಿಲ್ಲ. ನನಗೆ ತಿಳಿದ ಹಾಗೆ ಮಸೀದಿಯಲ್ಲಿ(Mosque) ಅಂತಹ ನಿರ್ಬಂಧ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ತಿಳಿಸಿದ್ದಾರೆ.

ಈ ಕುರಿತು ಟ್ವೀಟ್(Tweet) ಮೂಲಕ ಸ್ಪಷ್ಟನೆ ನೀಡಿರುವ ಅವರು, ಬೇಕಾದರೆ ಪ್ರತಾಪ ಸಿಂಹನೇ ಹಂದಿ ತಿಂದು ಹೋಗಲಿ. ಮಾಂಸಾಹಾರ ಮನುಷ್ಯನ ವೈಯಕ್ತಿಕ ವಿಚಾರ. ಯಾವುದಾದರೂ ಧಾರ್ಮಿಕ ಕೇಂದ್ರಗಳಲ್ಲಿ ಅಂತಹ ನಿರ್ಬಂಧಗಳಿದ್ದರೆ ಖಂಡಿತ ನಾವು ಅದನ್ನು ಪಾಲಿಸಬೇಕು.
ಇದನ್ನೂ ಓದಿ : https://vijayatimes.com/jnu-vc-clarification-statement/
ನನಗೆ ತಿಳಿದಂತೆ ಎಲ್ಲಿಯೂ ಮೀನು-ಮಾಂಸ ತಿಂದು ದೇವಸ್ಥಾನಕ್ಕೆ ಬರಬಾರದು ಎಂಬ ನಿರ್ಬಂಧ ಇಲ್ಲ. ಹೀಗಿದ್ದಾಗ ಯಾಕೆ ಈ ವಿವಾದ? ರಾಜ್ಯ ಬಿಜೆಪಿ(State BJP) ಸರ್ಕಾರದ ವಿರುದ್ಧ ಜನ ಈಗಾಗಲೇ ರೊಚ್ಚಿಗೆದ್ದಿದ್ದಾರೆ. ಜನಾಕ್ರೋಶವನ್ನು ಬೇರೆ ಕಡೆ ತಿರುಗಿಸುವ ಉದ್ದೇಶದಿಂದ ಇಂತಹ ಧರ್ಮ ದೇವರಿಗೆ ಸಂಬಂಧಿಸಿದ ವಿವಾದವನ್ನು ಸೃಷ್ಟಿಸಿ ನನ್ನನ್ನು ಹಿಂದು ವಿರೋಧಿ ಎಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಜ್ಞಾವಂತ ಮತದಾರರಿಗೆ ಈ ಕಳ್ಳಾಟವೆಲ್ಲ ಗೊತ್ತಾಗಿದೆ ಎಂದಿದ್ದಾರೆ.

ಮಾಂಸ ತಿಂದು ದೇವಸ್ಥಾನಕ್ಕೆ ಹೋದರೂ ತಪ್ಪಲ್ಲ ಎಂದು ಹಿಂದೂ ಸಂಘಟನೆಯ ಪ್ರಮೋದ್ ಮುತಾಲಿಕ್(Pramod Muthalik) ಹೇಳಿದ್ದಾರಂತೆ. ಅದೇ ರೀತಿ ಜ್ಯೋತಿಷಿ ದೈವಜ್ಞ ಸೋಮಯಾಜಿಯವರು ಹೇಳಿದ್ದಾರೆ. ಬಿಜೆಪಿ ಪಕ್ಷದ ಕೇಂದ್ರದ ಮಾಜಿ ಸಚಿವ ಡಿ.ವಿ ಸದಾನಂದಗೌಡ ಅವರು ಇಂತಹ ವಿಷಯಗಳನ್ನೆಲ್ಲ ವಿವಾದ ಮಾಡಬಾರದು ಎಂದು ಹೇಳಿದ್ದಾರೆ.
https://fb.watch/f5oXfHfkr0/ *
ವಾಸ್ತವದಲ್ಲಿ ನಾನು ಕೊಡಗಿನಲ್ಲಿ ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿಲ್ಲ. ನಾನು ಆ ದಿನ ಕಳಲೆ ಪಲ್ಯ ಮತ್ತು ಅಕ್ಕಿರೊಟ್ಟಿ ತಿಂದಿದ್ದೆ. ಇದನ್ನು ಮಾಜಿ ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರೂ ಹೇಳಿದ್ದಾರೆ. ವಾದಕ್ಕಾಗಿ ಮಾಂಸ ತಿಂದು ದೇವಸ್ಥಾನಕ್ಕೆ ಹೋಗಬಾರದು ಎಂದು ಎಲ್ಲಿ ಹೇಳಿದೆ? ಎಂದು ಪ್ರಶ್ನಿಸಿದ್ದೆ ಎಂದು ತಿಳಿಸಿದ್ದಾರೆ.