ದುರ್ಬಲ ಪಾಕ್ ಮುಂದೆ ವೀರಾವೇಶ ಮೆರೆಯುವ ಮೋದಿ ಚೀನಾಕ್ಕೆ ಅಂಜುವುದೇಕೆ? ಸಿದ್ದರಾಮಯ್ಯ!

Congress

ವಿಪಕ್ಷ ನಾಯಕ(Opposition Leader) ಸಿದ್ದರಾಮಯ್ಯ(Siddaramaiah) ಇದೀಗ ಮೋದಿ-ನೆಹರೂ(Modi-Nehru) ನಡುವಿನ ಹೋಲಿಕೆ ವಿಷಯವನ್ನು ಇನ್ನೊಂದು ಹಂತಕ್ಕೆ ತೆಗೆದುಕೊಂಡು ಹೋಗಿದ್ದಾರೆ.

ನೆಹರೂ-ಮೋದಿ ಹೋಲಿಕೆ ಮಧ್ಯೆ ಇದೀಗ ಚೀನಾ(China) ಮತ್ತು ಪಾಕಿಸ್ತಾನವನ್ನು(Pakistan) ಎಳೆದು ತಂದಿದ್ದಾರೆ. ಈ ಮೂಲಕ ರಾಜ್ಯ ರಾಜಕೀಯದಲ್ಲಿ ಇದೀಗ ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಈ ಕುರಿತು ಸರಣಿ ಟ್ವೀಟ್‍ಗಳನ್ನು ಸಿದ್ದರಾಮಯ್ಯ ಮಾಡಿದ್ದು, ಅವರ ಟ್ವೀಟ್‍ಗಳ ವಿವರ ಇಲ್ಲಿದೆ ನೋಡಿ. ಪಾಕಿಸ್ಥಾನ ಎಂಬ ದುರ್ಬಲ ದೇಶದ ಎದುರು ವೀರಾವೇಶ ಮೆರೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಪಾಕಿಸ್ಥಾನಕ್ಕಿಂತ ದೊಡ್ಡ ಶತ್ರುವಾದ ಚೀನಾದ ಹೆಸರನ್ನು ಉಚ್ಚರಿಸಲು ಕೂಡಾ ಅಂಜುವುದು ಯಾಕೆ ಎಂದು ಹೇಳಬಲ್ಲಿರಾ?

ಬಸವರಾಜ್ ಬೊಮ್ಮಾಯಿ(Basavaraj Bommai) ಅವರೇ? ಭಾರತ ಚೀನಾ ಗಡಿಯನ್ನು ಆ ದೇಶದ ಬೇಡಿಕೆಯಂತೆ 1959ರ ಗಡಿರೇಖೆಗೆ ಒಪ್ಪಿಕೊಂಡು ರಾಜಿ ಮಾಡಿಕೊಂಡಿದ್ದು ಇತ್ತೀಚಿನ ಇತಿಹಾಸ. ಗಾಲ್ವಾನ್(Galwan) ಕಣಿವೆಯಲ್ಲಿ ನಮ್ಮ ಸೈನಿಕರನ್ನು ಲಾಠಿ, ದೊಣ್ಣೆಗಳಿಂದ ಕಾದಾಡುವಂತೆ ಮಾಡಿದ್ದನ್ನು ಕೂಡಾ ದೇಶದ ಜನ ಮರೆತಿಲ್ಲ ಮುಖ್ಯಮಂತ್ರಿ ಬೊಮ್ಮಾಯಿ ಅವರೇ, ಭಾರತ-ಚೀನಾ ಗಡಿಪ್ರದೇಶದ ಬೆಳವಣಿಗೆ ಬಗ್ಗೆ ಸರಿಯಾದ ಮಾಹಿತಿ ತರಿಸಿಕೊಳ್ಳಿ. ಇತಿಹಾಸದ ವ್ಯಸನದಲ್ಲಿ ಮೈಮರೆಯಬೇಡಿ.

ವರ್ಷದ ಹಿಂದೆ ಚೀನಾ ದೇಶದ ಎದುರು ಭಾರತ ಮಂಡಿ ಊರುವಂತೆ ಮಾಡಿ ಭಾರತೀಯರು ತಲೆ ತಗ್ಗಿಸುವಂತೆ ಮಾಡಿದ್ದು ಯಾರೆಂದು ನಿಮಗೆ ಗೊತ್ತಿಲ್ಲವೇ..” ಎಂದು ಪ್ರಶ್ನಿಸಿದ್ದಾರೆ. ಆಧುನಿಕ ಸಂಶೋಧನಾ ಸಂಸ್ಥೆಗಳ ಸ್ಥಾಪನೆ ಮೂಲಕ ಸಂವಿಧಾನದ ಆಶಯವಾದ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ಶ್ರಮಿಸಿದವರು ಪಂಡಿತ ನೆಹರೂ. ಪ್ಲಾಸ್ಟಿಕ್ ಸರ್ಜರಿ, ಚರಂಡಿ ನೀರಿನಿಂದ ಗ್ಯಾಸ್, ಪೆನ್ ಡ್ರೈವ್ ಗಳ ಹೇಳಿಕೆಗಳಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ನಗೆಪಾಟಲಿಗೀಡಾದವರು ಯಾರೆಂದು ನಿಮಗೆ ಗೊತ್ತಿಲ್ಲವೇ?


ಉಕ್ಕಿನ ಕಾರ್ಖಾನೆ, ರೈಲ್ವೆ ಎಂಜಿನ್-ಕೋಚ್ ನಿರ್ಮಾಣ ಘಟಕಗಳು, ಯುದ್ಧ ವಿಮಾನ-ಟ್ಯಾಂಕ್ ಗಳು, ಉಷ್ಣವಿದ್ಯುತ್ ಉತ್ಪಾದನಾ ಸಲಕರಣೆಗಳು ಹೀಗೆ ಸರ್ಕಾರಿ ಸ್ವಾಮ್ಯದಲ್ಲಿ ಸಾಲು ಸಾಲು ಉದ್ಯಮಗಳನ್ನು ಕಟ್ಟಿ ಬೆಳೆಸಿದ್ದವರು ಜವಾಹರಲಾಲ ನೆಹರೂ.
ಮೋದಿ ಅವರು ಕಟ್ಟಿದೆಷ್ಟು, ಕೆಡವಿದೆಷ್ಟು ಎಂದು ವ್ಯಂಗ್ಯವಾಡಿದ್ದಾರೆ

Exit mobile version