ಗ್ಯಾರಂಟಿ ಯೋಜನೆಗಳ ಸ್ಥಗಿತಗೊಳ್ಳುವಂತೆ ಮಾಡುವ ದುರಾಲೋಚನೆಯಲ್ಲಿ ಕೇಂದ್ರ ಬಿಜೆಪಿ ಸರ್ಕಾರವಿದೆ- ಸಿದ್ದರಾಮಯ್ಯ

Bengaluru: ಹಣಕಾಸು ಆಯೋಗವು ಕರ್ನಾಟಕಕ್ಕೆ ವಿಶೇಷ ಅನುದಾನ ಶಿಫಾರಸು ಮಾಡಿಲ್ಲ ಎನ್ನುವ (Siddaramaiah Slams BJP Govt) ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala

Seetharaman) ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ಅನುದಾನ ಹಂಚಿಕೆ ಬಗ್ಗೆ ಕೇಂದ್ರ ವಿತ್ತ ಸಚಿವರು ಹಸಿ ಹಸಿ ಸುಳ್ಳುಗಳನ್ನು ಹೇಳಿ ಜನರ ದಾರಿ ತಪ್ಪಿಸುತ್ತಿದ್ದಾರೆ. ರಾಜ್ಯ

ಸರ್ಕಾರದ ಯೋಜನೆಗಳಿಗೆ ಅವರೇ ಹಣ ಹೊಂದಿಸಿಕೊಳ್ಳಬೇಕು, ಕೇಂದ್ರ ಸರ್ಕಾರವನ್ನು ಕೇಳಬಾರದು ಎನ್ನುವ ನಿರ್ಮಲಾ ಸೀತಾರಾಮನ್ ಅವರ ಯಜಮಾನಿಕೆಯ ಧೋರಣೆ ನಿಜಕ್ಕೂ ಖಂಡನೀಯ,

ಈ ಹೇಳಿಕೆ ಆರೂವರೆ ಕೋಟಿ ಕನ್ನಡಿಗರಿಗೆ ತೋರಿರುವ ಅಗೌರವ ಮತ್ತು ಮಾಡಿರುವ ಅವಮಾನ ಎಂದು ಸಿಎಂ ಅಸಮಾಧಾನ ಹೊರಹಾಕಿದ್ದಾರೆ.

ಶತಾಯಗತಾಯ ರಾಜ್ಯದಲ್ಲಿ ಆರ್ಥಿಕ ಬಿಕ್ಕಟ್ಟನ್ನು ಸೃಷ್ಟಿಸಿ ಬಡವರಿಗೆ ನೀಡಲಾಗಿರುವ ಗ್ಯಾರಂಟಿ (Guarantee) ಯೋಜನೆಗಳು ಸ್ಥಗಿತಗೊಳ್ಳುವಂತೆ ಮಾಡಬೇಕೆಂಬ ದುರಾಲೋಚನೆ ಕೇಂದ್ರ ಬಿಜೆಪಿ

ಸರ್ಕಾರಕ್ಕೆ ಇದೆ ಎನ್ನುವುದು ಕನ್ನಡಿಗರಿಗೆ ಈಗ ಅರ್ಥವಾಗಿದೆ. ಇದಕ್ಕೆ ತಕ್ಕ ಉತ್ತರವನ್ನು ರಾಜ್ಯದ ಮತದಾರರು ಲೋಕಸಭಾ ಚುನಾವಣೆಯಲ್ಲಿ ನೀಡಲಿದ್ದಾರೆ. ನಾವು ನಮ್ಮ ಗ್ಯಾರಂಟಿ ಯೋಜನೆಗಳಿಗೆ

ವಿಶೇಷವಾದ ಅನುದಾನ ಕೊಡಿ ಎಂದು ಕೇಂದ್ರ ಸರ್ಕಾರವನ್ನು ಬೇಡಿಕೊಳ್ಳುತ್ತಿಲ್ಲ, ಈ ಯೋಜನೆಗಳಿಗೆ ಬೇಕಿರುವ ಅನುದಾನವನ್ನು ಬಜೆಟ್‌ನಲ್ಲೇ (Budget) ಮೀಸಲಿಟ್ಟಿದ್ದೇವೆ. ಜನರ ಅಭವೃದ್ಧಿಗಾಗಿ

ಕರ್ನಾಟಕದ ಹಕ್ಕಿನ (Siddaramaiah Slams BJP Govt) ಹಣ ನೀಡಿ ಎಂದಿದ್ದಾರೆ.

ಅನ್ಯಾಯ ನಡೆದಿರುವ ಕಾರಣಕ್ಕಾಗಿಯೇ 2020-21ರಲ್ಲಿ 15ನೇ ಹಣಕಾಸು ಆಯೋಗವು ತನ್ನ ಮಧ್ಯಂತರ ವರದಿಯಲ್ಲಿ ಕರ್ನಾಟಕವೂ ಸೇರಿದಂತೆ 3 ರಾಜ್ಯಗಳಿಗೆ ವಿಶೇಷ ಅನುದಾನ ₹6,764 ಕೋಟಿ

ಹಣ ಬಿಡುಗಡೆ ಮಾಡಿತ್ತು.ಅದರಲ್ಲಿ ಕರ್ನಾಟಕ ರಾಜ್ಯಕ್ಕೆ ₹5,495 ಕೋಟಿ, ತೆಲಂಗಾಣಕ್ಕೆ ₹723 ಕೋಟಿ ಹಾಗೂ ಮಿಜೋರಾಂಗೆ ₹546 ಕೋಟಿ ಶಿಫಾರಸು ಮಾಡಿತ್ತು. ಕರ್ನಾಟಕಕ್ಕೆ ಮಾತ್ರವಲ್ಲ

ತೆಲಂಗಾಣ ಮತ್ತು ಮಿಜೋರಾಂಗಳಿಗೂ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗಿತ್ತು.

15ನೇ ಹಣಕಾಸು ಆಯೋಗದ ಅಂತಿಮ ವರದಿಯಲ್ಲಿ ಕೂಡ ಕರ್ನಾಟಕಕ್ಕೆ (Karnataka) ₹6,000 ಕೋಟಿ ಇದರಲ್ಲಿ ರೂ.3,000 ಕೋಟಿ ಜಲಮೂಲಗಳ ಸಂರಕ್ಷಣೆ ಹಾಗೂ ₹3,000 ಕೋಟಿ ಬೆಂಗಳೂರಿನ

ಫೆರಿಪೆರಲ್ ರಿಂಗ್ ರಸ್ತೆ ನಿರ್ಮಾಣಕ್ಕೆ ನೀಡುವಂತೆ ಶಿಫಾರಸು ಮಾಡಿತ್ತು. ಇದು ವಿಶೇಷ ಪ್ರೀತಿ ಇಲ್ಲವೇ ಔದಾರ್ಯದಿಂದ ಮಾಡಿರುವ ಶಿಫಾರಸುಗಳಲ್ಲ. ಇವೆಲ್ಲವೂ ತೆರಿಗೆ ಹಂಚಿಕೆಯಲ್ಲಿನ ಅನ್ಯಾಯಕ್ಕೆ ನೀಡಿರುವ

ಪರಿಹಾರ. ಈಗ ಕರ್ನಾಟಕದಲ್ಲಿ ಕಾಂಗ್ರೆಸ್ (Congress) ಪಕ್ಷದ ಸರ್ಕಾರ ಇದೆ ಎನ್ನುವ ಏಕೈಕ ಕಾರಣಕ್ಕೆ ಈ ಎರಡೂ ಶಿಫಾರಸುಗಳನ್ನು ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ತಿರಸ್ಕರಿಸಿ

ಸೊಕ್ಕಿನ ಮಾತು ಆಡುತ್ತಿದ್ದಾರೆ. ಈ ಮೂಲಕ ಕರ್ನಾಟಕಕ್ಕೆ ಆರೂವರೆ ಕೋಟಿ ಕನ್ನಡಿಗರಿಗೆ ಬಗೆದಿರುವ ದ್ರೋಹವೆಸಗಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಚುನಾವಣಾ ಬಾಂಡ್ ಹಗರಣ ಭಾಗ-1: ರಾಜಕೀಯ ಪಕ್ಷಗಳಿಗೆ ಅತೀ ಭ್ರಷ್ಟ, ಬೋಗಸ್‌ ಕಂಪನಿಗಳಿಂದೆಲ್ಲಾ ದೇಣಿಗೆ!

Exit mobile version