ಬ್ರಿಟಿಷರ ಗುಂಡಿಗೆ ಹೆದರಲಿಲ್ಲ, ನಿಮ್ಮ ಸರ್ಕಾರಕ್ಕೆ ಹೆದರುತ್ತೀವಾ ಮೋದಿಜೀ : ಸಿದ್ದರಾಮಯ್ಯ!

Congress

ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ(British) ಗುಂಡಿಗೆ, ಲಾಟಿ ಏಟಿಗೆ ಹೆದರದ ಕಾಂಗ್ರೆಸ್ ಕಾರ್ಯಕರ್ತರು(Congress Workers), ಮೋದಿ ಸರ್ಕಾರಕ್ಕೆ ಹೆದರುತ್ತಾರಾ..? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಬಿಜೆಪಿ ಸರ್ಕಾರದ(BJP Government) ವಿರುದ್ದ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ(Sonia Gandhi) ಮತ್ತು ರಾಹುಲ್ ಗಾಂಧಿ(Rahul Gandhi) ಅವರಿಗೆ ಜಾರಿ ನಿರ್ದೇಶನಾಲಯ(ED) ವಿಚಾರಣೆಗಾಗಿ ಸಮನ್ಸ್(Summons) ನೀಡಿರುವುದನ್ನು ಖಂಡಿಸಿ, ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಬೆಂಗಳೂರಿನಲ್ಲಿ ಕೆಪಿಸಿಸಿ(KPCC) ಕೂಡಾ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್(DK Shivkumar) ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯನವರು, ಬಿಜೆಪಿ ದ್ವೇಷದ ರಾಜಕೀಯ ಮಾಡುತ್ತಿದೆ.

ನರೇಂದ್ರ ಮೋದಿ(Narendra Modi) ಪ್ರಧಾನಿಯಾದ ನಂತರ ದೇಶದಲ್ಲಿರುವ ಎಲ್ಲ ಸರ್ಕಾರಿ ತನಿಖಾ ಸಂಸ್ಥೆಗಳನ್ನು ತಮ್ಮ ಕೈಗೊಂಬೆ ಮಾಡಿಕೊಂಡಿದ್ಧಾರೆ. ಇಡಿ, ಸಿಬಿಐ, ಆರ್‍ಬಿಐ, ಸಿಎಜಿ ಸೇರಿದಂತೆ ಎಲ್ಲ ಸಂಸ್ಥೆಗಳು ಸರ್ಕಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿವೆ ಎಂದು ಟೀಕಿಸಿದರು. ಇನ್ನು ಇ.ಡಿ. ಮತ್ತು ಆದಾಯ ತೆರಿಗೆ ಇಲಾಖೆಯನ್ನು ರಾಜಕೀಯ ವಿರೋಧಿಗಳನ್ನು ಹಣಿಯಲು ಬಳಸಿಕೊಳ್ಳಲಾಗುತ್ತಿದೆ. ಈ ಸ್ವಾಯತ್ತ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧ ಪಕ್ಷದವರ ಮೇಲೆ ದಾಳಿ ಮಾಡಲಾಗುತ್ತಿದೆ. ಸ್ವತಂತ್ಯ ಭಾರತದ ಇತಿಹಾಸದಲ್ಲಿ ಎಂದಿಗೂ ಕೂಡಾ ಈ ರೀತಿ ಸ್ವಾಯತ್ತ ಸ್ವಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡ ಉದಾಹರಣೆ ಇಲ್ಲ.

ಮೋದಿ ಸರ್ಕಾರ ದ್ವೇಷದ ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್ ಪಕ್ಷವನ್ನು ಹಣಿಯಲು ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನು ಗುರಿಯಾಗಿಸಿಕೊಂಡು ದಾಳಿ ಮಾಡಲಾಗುತ್ತಿದೆ. ಇನ್ನು ಮೋದಿ ಸರ್ಕಾರ ತನ್ನ ಸರ್ಕಾರದ ಯಾವ ಅಂಕಿ ಅಂಶಗಳು ಸಿಗಬಾರದೆಂದು ಎನ್‍ಎಸ್‍ಎಸ್ ಸಂಸ್ಥೆಯನ್ನು ನಿಷ್ಕ್ರಿಯಗೊಳಿಸಲಾಗಿದೆ. ದೇಶಕ್ಕೆ ಸಂಬಂಧಿಸಿದ ಯಾವ ಅಂಕಿ-ಅಂಶಗಳು ಸರಿಯಾಗಿ ಸಿಗುತ್ತಿಲ್ಲ. ಮೋದಿ ಸರ್ಕಾರದ ಸರ್ವಾಧಿಕಾರ(Dictatorship) ದೋರಣೆಯಿಂದ ಸಂವಿಧಾನಾತ್ಮಕ ಸಂಸ್ಥೆಗಳ ಮೇಲೆ ಹಿಡಿದ ಸಾಧಿಸಿ ಅವುಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಟೀಕಿಸಿದರು.

Exit mobile version