Visit Channel

ಸಚಿವ ಸುನೀಲ್‌ ಕುಮಾರ್‌ಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು : ಸಿದ್ದರಾಮಯ್ಯ

Congress

ಅಧಿಕಾರ ಉಳಿಸಿಕೊಳ್ಳುವ ಸಲುವಾಗಿ ಕನ್ನಡಿಗರ ಸ್ವಾಭಿಮಾನವನ್ನು ‘ಉತ್ತರ ಕುಮಾರ’ರ ಕಾಲಡಿ ಯಾಕೆ ಅಡವು ಇಡುತ್ತೀರಾ? ಶರಣಾಗತಿ ಕನ್ನಡದ ಮಣ್ಣಿನ ಗುಣವಲ್ಲ, ವೀರರಾಣಿ ಅಬ್ಬಕ್ಕನ ನೆಲದಿಂದ ಬಂದ ಕನ್ನಡ ಮತ್ತು ಸಂಸ್ಕೃತಿ ಸಚಿವ(Minister) ಸುನೀಲ್‌ ಕುಮಾರ್‌(Sunil Kumar) ಅವರಿಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಟೀಕಿಸಿದ್ದಾರೆ.

BJP

ಹಿಂದಿ ಹೇರಿಕೆ(Hindi Imposition) ಮಾಡಲಾಗುತ್ತಿದೆ ಎಂದು ಆರೋಪಿಸಿ ಸರಣಿ ಟ್ವೀಟ್‌(Tweet) ಮಾಡಿರುವ ಅವರು, ಕನ್ನಡ ಮತ್ತು ಸಂಸ್ಕೃತಿಯ ರಕ್ಷಣೆ ಮತ್ತು ಪೋಷಣೆಗಾಗಿ ಇರುವ ಇಲಾಖೆಯೇ ಎರಡು ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡವನ್ನು ಹೊರಗಿಟ್ಟು ಹಿಂದಿ ಭಾಷೆಯ ಪ್ರಚಾರಕ್ಕೆ ಇಳಿದರೆ ಕನ್ನಡ ಭಾಷೆಯನ್ನು ರಕ್ಷಿಸಿವವರು ಯಾರು ರಾಜ್ಯದಲ್ಲಿರುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೇ? ಅಥವಾ ಹಿಂದಿ ಮತ್ತು ಸಂಸ್ಕೃತಿ ಇಲಾಖೆಯೇ? ಎನ್ನುವುದನ್ನು ಬಸವರಾಜ ಬೊಮ್ಮಾಯಿ(Basavaraj Bommai) ಅವರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಸುನೀಲ್‌ ಕುಮಾರ್‌ ಅವರು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.


ರಾಜ್ಯದ ಬಿಜೆಪಿ ಸರ್ಕಾರ(BJP Government) ತನ್ನತನವನ್ನು ಅಡವಿಟ್ಟು ಹಿಂದಿ ಭಾಷೆಗೆ ಸಂಪೂರ್ಣ ಶರಣಾಗತವಾಗಿದೆ ಎಂಬುದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾಲತಾಣವೇ ಸಾಕ್ಷಿ. ಮೊದಲು ಈ ಜಾಲತಾಣದಿಂದ ಹಿಂದಿಯನ್ನು ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ ಉಳಿಸಿ. ಕೇಂದ್ರ ಸಚಿವ ಅಮಿತ್‌ ಶಾ(Amit Shah) ಅವರು ಭಾಗವಹಿಸಿದ್ದ ‘ಸಂಕಲ್ಪ್ ಸೆ ಸಿದ್ಧಿ’ ಎಂಬ ಕಾರ್ಯಕ್ರಮದ ಬ್ಯಾನರ್ ಸಂಪೂರ್ಣ ಹಿಂದಿಮಯವಾಗಿತ್ತು.‌ಇನ್ನೊಂದೆಡೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತನ್ನ ಜಾಲತಾಣದಲ್ಲಿ ಹಿಂದಿಯ ಕಿರೀಟ ಇಟ್ಟುಕೊಂಡು ಮೆರೆಸುತ್ತಿದೆ ಎಂದು ಟೀಕಿಸಿದ್ದಾರೆ.

Congress


eedina.com ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವೆಬ್ಸೈಟಿನಲ್ಲಿ ‘ಹಿಂದಿ ಪ್ರಚಾರ’, ಬಿಜೆಪಿಯಿಂದ ಮತ್ತೆ ಮತ್ತೆ ಕನ್ನಡಕ್ಕೆ ಅಪಮಾನ. ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳಿಂದ ಮತ್ತೆ ಮತ್ತೆ ಕನ್ನಡಕ್ಕೆ ಅಪಮಾನ. ದೇಶದಾದ್ಯಂತ ‘ಆಜಾದಿ ಕಾ ಅಮೃತ ಮಹೋತ್ಸವ’ ಹೆಸರಿನಲ್ಲಿ ಹಿಂದಿ ಹೇರಿಕೆ ದೇಶವೆಲ್ಲ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದಲ್ಲಿದೆ. ಕೇಂದ್ರ ಸರ್ಕಾರ ಕೂಡಾ… ರಾಜ್ಯದ ಬಿಜೆಪಿ ಸರ್ಕಾರ , ಕೇಂದ್ರ ಬಿಜೆಪಿ ನಾಯಕರ ಓಲೈಕೆಗಾಗಿ ಮತ್ತೆ ಮತ್ತೆ ಕನ್ನಡವನ್ನು ತುಳಿದು ಹಿಂದಿಯನ್ನು ಮೆರೆಸಿ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅವಮಾನ ಮಾಡುತ್ತಿರುವುದು ಖಂಡನೀಯ ಎಂದಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.