ರೈತರನ್ನು ಬಲಿ ಕೊಟ್ಟಾಯಿತು, ಈಗ ಸೈನಿಕರ ಸರದಿಯೇ? ಸಿದ್ದರಾಮಯ್ಯ!

Politics

ದೇಶದ ಯುವ ಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುವ ಮತ್ತು ದೇಶದ ಭದ್ರತೆಗೆ ಅಪಾಯಕಾರಿಯಾಗಬಲ್ಲ ಅಗ್ನಿಪಥ್(Agnipath Yojana) ಎಂಬ ಯೋಜನೆಯನ್ನು ಕೇಂದ್ರದ ಬಿಜೆಪಿ ಸರ್ಕಾರ(Central BJP Government) ತಕ್ಷಣ ರದ್ದುಪಡಿಸಿ ಈಗಿನ ಸೇನಾ ನೇಮಕಾತಿ(Army Recruitment) ಯೋಜನೆಯಡಿಯಲ್ಲಿಯೇ ಸೈನಿಕರ ನೇಮಕಾತಿ ನಡೆಯಬೇಕು. ರೈತರನ್ನು ಬಲಿಕೊಟ್ಟಾಯಿತು, ಈಗ ಸೈನಿಕರ ಸರದಿಯೇ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರದ ನೂತನ ‘ಅಗ್ನಿಪಥ್’ ಯೋಜನೆಯನ್ನು ವಿರೋಧಿಸಿ ಸರಣಿ ಟ್ವೀಟ್ ಮಾಡಿರುವ ಅವರು, ರೈತರ ಬದುಕು ನಾಶ ಮಾಡಲು ಕರಾಳ ಕೃಷಿ ಕಾಯ್ದೆಗಳನ್ನು(Farm Laws) ತಂದಿದ್ದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ದೇಶದ ಜನ ಪಾಠ ಕಲಿಸಿದ್ದಾರೆ. ಈಗ ಯುವಜನರ ಬದುಕು ನಾಶದ ಜೊತೆಯಲ್ಲಿ ಸೈನಿಕರ ಬದುಕಿನ ಜೊತೆ ಚೆಲ್ಲಾಟವಾಡುತ್ತಿರುವವರಿಗೂ ಪಾಠ ಕಲಿಸಲು ದೇಶದ ಜನತೆ ಮುಂದಾಗಬೇಕು. ಹೊಸಸೇನಾ ನೇಮಕಾತಿ ಅಗ್ನಿಪಥ್ ಕೇವಲ ಸೇನಾ ನೇಮಕಾತಿಗಷ್ಟೇ ಸೀಮಿತವಾಗಲಾರದು.

ಸೈನಿಕರ ಅನ್ನ ಕಸಿಯಲು ಹೊರಟಿರುವ ಈ ದೇಶದ್ರೋಹಿ, ಜನವಿರೋಧಿ ಬಿಜೆಪಿ ಸರ್ಕಾರ(BJP Government) ಮುಂದಿನ ದಿನಗಳಲ್ಲಿ ಇತರ ಸರ್ಕಾರಿ ಉದ್ಯೋಗಗಳ ಮೇಲೆಯೂ ಸವಾರಿ ಮಾಡಲು ಹೊರಡುವುದು ಖಚಿತ. ಎಚ್ಚೆತ್ತುಕೊಳ್ಳಲು ಇದು ಸಕಾಲ.
ದೇಶಕ್ಕಾಗಿ ಪ್ರಾಣತ್ಯಾಗ ಮಾಡಲು ಸಿದ್ಧರಾಗುವ ಸೈನಿಕರಿಗೆ ಉದ್ಯೋಗದ ಭದ್ರತೆ, ನ್ಯಾಯಬದ್ಧ ಸಂಬಳ, ಪಿಂಚಣಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗದಷ್ಟು ಕೇಂದ್ರದ ಬಿಜೆಪಿ ಸರ್ಕಾರ ದಿವಾಳಿಯಾಗಿದೆಯೇ? ನಿಮ್ಮ ದಿವಾಳಿತನ ಮುಚ್ಚಿಡಲು ದೇಶದ ಭದ್ರತೆಯ ಜೊತೆ ಚೆಲ್ಲಾಟವಾಡಲು ಹೋಗಬೇಡಿ.


ಉದ್ಯೋಗದ ಅಭದ್ರತೆ, ಭವಿಷ್ಯದ ಬಗೆಗಿನ ಭಯ ಮತ್ತು ವೃತ್ತಿ ಬಗೆಗಿನ ಅತೃಪ್ತಿಯನ್ನು ಹುಟ್ಟುಹಾಕಲಿರುವ ಅಗ್ನಿಪಥ್ ಯೋಜನೆಯಡಿ ನೇಮಕಗೊಂಡ ಸೈನಿಕರು ತಮ್ಮ ವೃತ್ತಿಯಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಲು ಸಾಧ್ಯವೇ? ಶತ್ರುಗಳ ಜೊತೆ ಕಾದಾಡಲಿರುವ ಸೈನಿಕರ ಈ ಮನಸ್ಥಿತಿ ಅಪಾಯಕಾರಿಯಲ್ಲವೇ? ವರ್ಷಕ್ಕೆ ಎರಡು ಕೋಟಿ ಉದ್ಯೋಗದ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ಉದ್ಯೋಗಾವಕಾಶದ ಬಾಗಿಲುಗಳನ್ನು ಒಂದೊಂದಾಗಿ ಮುಚ್ಚುತ್ತಾ ಇರುವ ನಿಮಗೆ ಪ್ರತಿವರ್ಷ ಎರಡು ಕೋಟಿ ನಿರುದ್ಯೋಗಿಗಳನ್ನು ಸೃಷ್ಟಿಸುವ ಗುಪ್ತಾ ಅಜೆಂಡಾ ಏನಾದರೂ ಇದೆಯೇ ಎಂದು ಟೀಕಿಸಿದ್ದಾರೆ.

Exit mobile version