• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ರಾಜ್ಯ ಪೊಲೀಸ್ ಇಲಾಖೆ ಸಂಘಪರಿವಾರದ ಕೈಗೊಂಬೆಯಾಗಿದೆ : ಸಿದ್ದರಾಮಯ್ಯ ಆರೋಪ

Mohan Shetty by Mohan Shetty
in ರಾಜಕೀಯ, ರಾಜ್ಯ
State BJP tweets over congress
0
SHARES
0
VIEWS
Share on FacebookShare on Twitter

ರಾಜ್ಯ ಪೊಲೀಸ್ ಇಲಾಖೆ(State Police Department) ಸಂಘಪರಿವಾರದ ಕೈಗೊಂಬೆಯಾಗಿದೆ. ಬಿಜೆಪಿ ಪಕ್ಷದ(BJP Party) ಪುಂಡರ ಗೂಂಡಾಗಿರಿಗೆ ಅವಕಾಶ ನೀಡಿ, ಕೈಕಟ್ಟಿಕೊಂಡು ತಮಾಷೆ ನೋಡುವ ಪೊಲೀಸರ ಕರ್ತವ್ಯ ಲೋಪ ಖಂಡಿಸಿ ಈ ತಿಂಗಳ 26 ರಂದು ಕೊಡಗಿನ(Kodagu) ಎಸ್.ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ.

Politics

ಬಿಜೆಪಿಯ ಗೂಂಡಾಗಿರಿಗೆ ಹೋರಾಟದ ಮೂಲಕವೇ ತಕ್ಕ ಉತ್ತರ ಕೊಡುತ್ತೇವೆ ಎಂದು ವಿಪಕ್ಷ ನಾಯಕ(Opposition Leader) ಸಿದ್ದಾರಮಯ್ಯ(Siddaramaiah) ಹೇಳಿದ್ದಾರೆ. ಈ ಕುರಿತು ಸರಣಿ ಟ್ವೀಟ್‌(Tweet) ಮಾಡಿರುವ ಅವರು, ಬಿ.ಎಸ್ ಯಡಿಯೂರಪ್ಪ(BS Yedurappa) ಅವರಿಗೆ 75 ವರ್ಷ ಆಯ್ತು ಎಂದು ಮುಖ್ಯಮಂತ್ರಿ ಸ್ಥಾನದಿಂದ ನಿರ್ದಯವಾಗಿ ಕೆಳಗಿಳಿಸಿದರು. ಅವರು ಕಣ್ಣೀರು ಹಾಕುತ್ತಾ ರಾಜೀನಾಮೆ(Resign) ನೀಡಿದ್ದರು.

ಈಗ ಮತ್ತೆ ಸಂಸದೀಯ ಮಂಡಳಿಗೆ ಆಯ್ಕೆ ಮಾಡಿದ್ದಾರೆ, ಈಗ ಅವರ ವಯಸ್ಸು ಕಡಿಮೆ ಆಯ್ತಾ? ಇದಕ್ಕೆ ಕಾರಣ ಅವರ ಮೇಲಿನ ಪ್ರೀತಿ ಅಲ್ಲ, ಸೋಲಿನ ಭಯ. ಬಾಬಾಸಾಹೇಬ್ ಅಂಬೇಡ್ಕರ್(BR Ambedkar) ಅವರ ಪೋಟೊವನ್ನು ಪಕ್ಷದ ಕಚೇರಿಯಲ್ಲಿಯೇ ಕಸದ ಬುಟ್ಟಿಗೆ ಎಸೆದಿರುವ ಬಿಜೆಪಿ ನಾಯಕರ ಹೃದಯದೊಳಗೆ ಗಾಂಧೀಜಿಯೂ, ಇಲ್ಲ ಅಂಬೇಡ್ಕರ್ ಅವರೂ ಇಲ್ಲ. ಅವರೊಳಗೆ ಇರುವುದು ನಾಥುರಾಮ್ ಗೋಡ್ಸೆ(Godse) ಮಾತ್ರ. ಈ ಸತ್ಯವನ್ನು ಮೊದಲು ಒಪ್ಪಿಕೊಳ್ಳಿ ಎಂದಿದ್ದಾರೆ.

BJP

ಸಾವರ್ಕರ್(Veera Savarkar) ಅವರನ್ನು ಹೊತ್ತು ಮೆರೆಯುತ್ತಿರುವ ಬಿಜೆಪಿ ನಾಯಕರಲ್ಲಿ ಯಾರಾದರೂ 52 ವರ್ಷಗಳ ಕಾಲ ಆರ್.ಎಸ್.ಎಸ್ ಕಚೇರಿ(RSS Office) ಮೇಲೆ ರಾಷ್ಟ್ರಧ್ವಜವನ್ನು ಯಾಕೆ ಹಾರಿಸಿರಲಿಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸುತ್ತೀರಾ? ಮಹಾತ್ಮ ಗಾಂಧೀಜಿಯವರ(Mahatma Gandhi) ಪೋಟೊ ಹಾಕಿ ಜಾಹೀರಾತು ಕೊಡುತ್ತಿರುವ ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ(Basavaraj Bommai) ಅವರು, ತಮ್ಮದೇ ಪಕ್ಷದ ಕಾರ್ಯಕರ್ತರು ಗಾಂಧೀಜಿ ಹತ್ಯೆ ಮಾಡಿದ ನಾಥುರಾಮ್ ಗೋಡ್ಸೆ ಪೋಟೊ ಮೆರವಣಿಗೆ ಮಾಡಿದ್ದಾರೆ.

ಅವರ ವಿರುದ್ಧ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ? ವಿ.ಡಿ.ಸಾವರ್ಕರ್ ಬಗ್ಗೆ ಅಭಿಮಾನ ಇದ್ದರೆ ಅವರ ಬಗ್ಗೆ ಪುಸ್ತಕ ಬರೆದು, ಕಾರ್ಯಕ್ರಮಗಳನ್ನು ಆಯೋಜಿಸಿ ಅವರ ವಿರುದ್ಧದ ಆರೋಪಗಳಿಗೆ ಉತ್ತರ ಕೊಡಿ. ಕೋಮುಗಲಭೆ ಹುಟ್ಟುಹಾಕಲು ಅವರ ಪೋಟೊವನ್ನು ಅಸ್ತ್ರವನ್ನಾಗಿ ಯಾಕೆ ಮಾಡುತ್ತಿದ್ದೀರಿ? ಇದನ್ನೇ ನಾನು ಪ್ರಶ್ನಿಸಿದ್ದು ಎಂದಿದ್ದಾರೆ.

chief minister

ಸಾಧನೆಯ ಬಲದಿಂದ ಚುನಾವಣೆಯನ್ನು ಎದುರಿಸಲಿಕ್ಕಾಗದ ಬಿಜೆಪಿ ನಾಯಕರಿಗೆ ಸುಳ್ಳು ಸುದ್ದಿ ಮತ್ತು ಆಧಾರರಹಿತ ಆರೋಪಗಳೇ ಬಂಡವಾಳ. ಹಳೆಯ ಆಟವನ್ನು ಬಿಜೆಪಿ ರಾಜ್ಯದಲ್ಲಿ ಮತ್ತೆ ಶುರುಮಾಡಿದೆ. ಈ ಸುಳ್ಳಿನ ಸರದಾರರಿಗೆ ಸತ್ಯವನ್ನು ಎದುರಿಸುವ ನೈತಿಕತೆ ಇಲ್ಲ. ಶಿವಮೊಗ್ಗದ(Shivamogga) ಗಲಭೆಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರೇ(KS Eshwarappa) ಕಾರಣ.

ಸಚಿವ ಸ್ಥಾನ ಕಳೆದುಕೊಂಡು ಮನೆಯಲ್ಲಿರುವ ಅವರಿಗೆ ಮುಂದಿನ ಚುನಾವಣೆಯಲ್ಲಿ ಟಿಕೆಟ್ ನ ಖಾತರಿಯೂ ಇಲ್ಲ. ಇದರಿಂದ ಹತಾಶರಾಗಿರುವ ಈಶ್ವರಪ್ಪನವರು ಆರ್ ಎಸ್ ಎಸ್ ಒಡೆಯರನ್ನು ಒಲಿಸಿಕೊಳ್ಳಲು ಇದೆಲ್ಲ ಮಾಡುತ್ತಿದ್ದಾರೆ. ನಾವು ಸಮಾಜದಲ್ಲಿ ಸಾಮರಸ್ಯ ಬಯಸುವವರು, ಎಲ್ಲ ಜಾತಿ, ಧರ್ಮದ ಜನರು ಒಂದೇ ತಾಯಿಯ ಮಕ್ಕಳಂತೆ ಬದುಕಬೇಕು ಎಂದು ಬಯಸುವವರು. ನಾವು.

BJP

ಬಿಜೆಪಿ ಅವರು ಮತ ಧ್ರುವಿಕರಣಕ್ಕಾಗಿ ಸಮಾಜ ಒಡೆಯುವವರು. ಗೋಡ್ಸೆಗೆ ಪೂಜೆ ಮಾಡುವುದು ದೇಶಪ್ರೇಮವೇ? ಮುಖ್ಯಮಂತ್ರಿ ಅವರೇ, ಮೊಟ್ಟೆ ಎಸೆಯುವ ಗೂಂಡಾಗಿರಿಯ ರಾಜಕೀಯ ಶುರು ಮಾಡಬೇಡಿ. ಅದನ್ನು ಅಂತ್ಯ ಮಾಡುವುದು ಹೇಗೆ ಎಂದು ನಮಗೂ ಗೊತ್ತು. ನಮ್ಮ ಕಾರ್ಯಕರ್ತರು ನಿಮ್ಮವರಂತೆಯೇ ಬೀದಿಗಿಳಿದರೆ ನೀವು ಮನೆಯಿಂದ ಹೊರಬರುವುದು ಕೂಡ ಕಷ್ಟವಾಗಬಹುದು. ಯು.ಪಿ ಮಾದರಿ ಎಂದರೆ ಇದೆನಾ? ಎಂದು ಪ್ರಶ್ನಿಸಿದ್ದಾರೆ.

Tags: bjpCongressKarnatakapoliticalpolitics

Related News

ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ
ರಾಜಕೀಯ

ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ

March 23, 2023
ನಂಜನಗೂಡಿನಲ್ಲಿ ಧೃವ ನಾರಾಯಣ ಪುತ್ರನಿಗೆ ನನ್ನ ಬೆಂಬಲ – ಎಚ್.ಸಿ. ಮಹದೇವಪ್ಪ ಘೋಷಣೆ
ರಾಜಕೀಯ

ನಂಜನಗೂಡಿನಲ್ಲಿ ಧೃವ ನಾರಾಯಣ ಪುತ್ರನಿಗೆ ನನ್ನ ಬೆಂಬಲ – ಎಚ್.ಸಿ. ಮಹದೇವಪ್ಪ ಘೋಷಣೆ

March 23, 2023
ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ! ಪ್ರಧಾನಿ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ
Vijaya Time

ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ! ಪ್ರಧಾನಿ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ

March 23, 2023
ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.