ಪ್ರತ್ಯೇಕ ರಾಜ್ಯದ ಕೂಗು ; ಕತ್ತಿಯನ್ನು ಸಂಪುಟದಿಂದ ಕಿತ್ತು ಹಾಕಿ : ಸಿದ್ದರಾಮಯ್ಯ ಆಗ್ರಹ

Umesh Katti

ಅರಣ್ಯ ಸಚಿವ(Forest Minister) ಉಮೇಶ್ ಕತ್ತಿ(Umesh Katti) ಬೆಳಗಾವಿಯಲ್ಲಿ(Belagavi) ಮಾತನಾಡುತ್ತಾ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂದು ಆಗ್ರಹಿಸಿದ್ದರು. ಉಮೇಶ್ ಕತ್ತಿ ಅವರ ಪ್ರತ್ಯೇಕ ರಾಜ್ಯದ ಕೂಗಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಾವಿರಾರು ಹಿರಿಯ ಕನ್ನಡಿಗರ ಹೋರಾಟದ ಫಲವಾಗಿ ಸ್ಥಾಪನೆಗೊಂಡ ಕರ್ನಾಟಕವನ್ನು ಒಡೆಯುವ ಯೋಚನೆ ಮಾಡುವುದೇ ನಾಡು- ನುಡಿಗೆ ಬಗೆವುದು ದ್ರೋಹವಾಗುತ್ತದೆ. ಹೀಗಾಗಿ ಕತ್ತಿಯನ್ನು ಕೂಡಲೇ ಸಂಪುಟದಿಂದ ಕಿತ್ತು ಹಾಕಬೇಕೆಂದು ಆಗ್ರಹಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್(Tweet) ಮಾಡಿರುವ ಅವರು, ಸಚಿವ ಉಮೇಶ್ ಕತ್ತಿ ಅವರು ಪ್ರತ್ಯೇಕ ರಾಜ್ಯ ಸ್ಥಾಪನೆಯ ಕೂಗು ಹಾಕುತ್ತಿರುವುದು ಇದೇ ಮೊದಲಸಲವೇನಲ್ಲ. ಭಾಷೆ ಸೂಕ್ಷ್ಮ ಪ್ರದೇಶವಾದ ಬೆಳಗಾವಿಯಲ್ಲಿಯೇ ಇಂತಹ ಪ್ರಚೋದನಕಾರಿ ಹೇಳಿಕೆಗಳ ಪರಿಣಾಮದ ಹೊಣೆಯನ್ನು ರಾಜ್ಯ ಬಿಜೆಪಿ(State BJP) ಸರ್ಕಾರವೇ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಸಚಿವರಾದ ಉಮೇಶ್ ಕತ್ತಿಯವರು ಜವಾಬ್ದಾರಿ ಸ್ಥಾನದಲ್ಲಿರುವವರು. ಪಕ್ಷ ಇಲ್ಲವೆ ಸರ್ಕಾರದ ಮಟ್ಟದಲ್ಲಿ ಅಂತಹ ಚರ್ಚೆ ನಡೆಯದೆ ರಾಜ್ಯ ಒಡೆಯುವ ಯೋಜನೆಯ ಬಗ್ಗೆ ಮಾತನಾಡಿರಲಾರರು.

ಅವರು ಹೇಳಿರುವುದು ಸುಳ್ಳಾಗಿದ್ದರೆ ಇಂತಹ ಬೇಜವಾಬ್ದಾರಿ ಹೇಳಿಕೆಗಾಗಿ ಅವರನ್ನು ಸಂಪುಟದಿಂದ ಕಿತ್ತು ಹಾಕಬೇಕು. ರಾಜ್ಯವನ್ನು ಇಬ್ಭಾಗ ಮಾಡುವ ಚರ್ಚೆ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಮಟ್ಟದಲ್ಲಿಯೇ ನಡೆಯುತ್ತಿದೆ ಎಂಬ ಆಘಾತಕಾರಿ ಸಂಗತಿಯನ್ನು ಸಚಿವ ಉಮೇಶ್ ಕತ್ತಿ ಬಹಿರಂಗ ಪಡಿಸಿದ್ದಾರೆ. ಇದರ ಸತ್ಯಾಸತ್ಯತೆಗಳನ್ನು ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai) ಅವರು ಸ್ಪಷ್ಟಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Exit mobile version