ತಮ್ಮ ಬೆಂಬಲಿಗನಿಗೆ ಕಪಾಳಮೋಕ್ಷ ಮಾಡಿದ ಸಿದ್ದರಾಮಯ್ಯ ; ವೀಡಿಯೊ ವೈರಲ್!

Bengaluru : ಕರ್ನಾಟಕದ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah slapped video viral) ಅವರು ತಮ್ಮ ಬೆಂಬಲಿಗರೊಬ್ಬರ ಮುಖಕ್ಕೆ ಕಪಾಳಮೋಕ್ಷ ಮಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ಆಗಿದೆ.


ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಮ್ಮ ಬೆಂಬಲಿಗರೊಬ್ಬರಿಗೆ ಕಪಾಳಮೋಕ್ಷ (Siddaramaiah slapped video viral) ಮಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆ, ಸದ್ಯ ಭಾರಿ ವಿವಾದಕ್ಕೆ ಸಿಲುಕಿಕೊಂಡಿದ್ದಾರೆ.

ಶುಕ್ರವಾರ ಬೆಂಗಳೂರು (Bengaluru) ನಗರದಲ್ಲಿರುವ ಅವರ ನಿವಾಸದಲ್ಲಿ ಅವರನ್ನು ಭೇಟಿಯಾಗಲು ಬಂದಿದ್ದ ಬೆಂಬಲಿಗರಿಂದ ಪದೇ ಪದೇ ಕೇಳಲಾದ ಪ್ರಶ್ನೆಗಳಿಂದ ಕೋಪಗೊಂಡ ಸಿದ್ದರಾಮಯ್ಯ ಅವರು ಕಪಾಳಮೋಕ್ಷ ಮಾಡಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.


ಸಿದ್ದರಾಮಯ್ಯ ಅವರು ಬೆಂಬಲಿಗರ ಗುಂಪಿನಲ್ಲಿ ಓಡಾಡುತ್ತಿದ್ದಾಗ ಟಿಕೆಟ್ (Ticket) ಕುರಿತು ಕೇಳಿದ ಪ್ರಶ್ನೆಯ ಬೆನ್ನಲ್ಲೇ ಈ ಘಟನೆ ನಡೆದಿದೆ ಎಂದು ಕೆಲವು ವರದಿಗಳು ತಿಳಿಸಿವೆ. ಅನೇಕ ಬಳಕೆದಾರರಿಂದ ಸಾಮಾಜಿಕ

ಜಾಲತಾಣದ ಖಾತೆಗಳಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ ಸಿದ್ದರಾಮಯ್ಯ ಅವರು ತಮ್ಮ ಬೆಂಬಲಿಗನಿಗೆ ಕಪಾಳಮೋಕ್ಷ ಮಾಡುವುದನ್ನು ಕಾಣಬಹುದು. ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ

ಕಾಂಗ್ರೆಸ್ (Congress) ನಾಯಕ ಎಲ್ಲಿಂದ ಸ್ಪರ್ಧಿಸುತ್ತಾರೆ ಎಂಬುದರ ಕುರಿತು ಅನಿಶ್ಚಿತತೆ ಇತ್ತು, ಇಂದು ಶನಿವಾರದಂದು ಪಕ್ಷವು ತನ್ನ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತು.


ಸಿದ್ದರಾಮಯ್ಯ ಅವರು ಇದೀಗ ತಮ್ಮ ತವರು ಕ್ಷೇತ್ರ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬುದು ದೃಢವಾಗಿದೆ. ಕೋಲಾರದಿಂದ ಸ್ಪರ್ಧಿಸುವುದಾಗಿ ಜನವರಿಯಲ್ಲಿ ಸಿದ್ದರಾಮಯ್ಯ ಅವರು ಘೋಷಿಸಿದ್ದರು,

ಆದರೆ, ಕೋಲಾರದಲ್ಲಿ ಸಿದ್ದರಾಮಯ್ಯ ಅವರಿಗೆ ಪ್ರತಿಕೂಲ ಪರಿಸ್ಥಿತಿ ಎದುರಾಗಿದೆ ಎಂದು ಸಮೀಕ್ಷಾ ವರದಿಯಿಂದ ಕಾಂಗ್ರೆಸ್ ಹೈಕಮಾಂಡ್ ಅವರ ಯೋಜನೆಯನ್ನು ಕೈಬಿಟ್ಟು ಪರ್ಯಾಯವಾಗಿ ವರುಣಾ (Varuna) ಕ್ಷೇತ್ರದಿಂದ ಸ್ಪರ್ಧಿಸುವಂತೆ ಹೇಳಿತು.

ಇದರ ಬೆನ್ನಲ್ಲೇ ಮಂಗಳವಾರ ಬೆಂಗಳೂರಿನ ತಮ್ಮ ನಿವಾಸದ ಮುಂದೆ ಅವರ ಬೆಂಬಲಿಗರ ದಂಡು ಜಮಾಯಿಸಿ ಪ್ರತಿಭಟನೆ ನಡೆಸಿ ()ಕೋಲಾರದಿಂದ ಹೋರಾಟ ನಡೆಸುವಂತೆ ಮನವಿ ಮಾಡಿತ್ತು!


ಮುಂಬರುತ್ತಿರುವ ವಿಧಾನಸಭಾ ಚುನಾವಣೆಯ ಅಖಾಡಕ್ಕೆ ಸಜ್ಜಾಗಿರುವ ಸಿದ್ದರಾಮಯ್ಯ ಅವರು, ಸದ್ಯ ತಮ್ಮ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ (Dr. Yatindra Siddaramaiah) ಅವರು ಪ್ರತಿನಿಧಿಸುತ್ತಿರುವ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಕುಟುಂಬದವರು ಸಲಹೆ ನೀಡಿದ್ದಾರೆ ಎಂದು ಸ್ವತಃ ಹೇಳಿಕೊಂಡಿದ್ದಾರೆ.
Exit mobile version